ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಪತನ: ಕಾರಜೋಳ
Team Udayavani, Mar 30, 2019, 7:31 AM IST
ಚಿತ್ರದುರ್ಗ: ಲೋಕಸಭಾ ಚುನಾವಣೆ ನಂತರ ರಾಜ್ಯದ ಸಮ್ಮಿಶ್ರಸರ್ಕಾರ ಪತನಗೊಳ್ಳುವುದು ಖಚಿತ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನಂತರ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದೇ ಬರಲಿದೆ. ಕಳೆದ ಐದು ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡ ಯೋಜನೆಗಳು, ಮೋದಿ ಅವರು ತೆಗೆದುಕೊಂಡ ನಿರ್ಧಾರಗಳು ದೇಶದ ಚಿತ್ರಣವನ್ನೇ ಬದಲಿಸಿವೆ. ಕೇಂದ್ರ ಸರಕಾರ ಸೈನಿಕರಿಗೆ ಹೆಚ್ಚಿನ ಸ್ವಾತಂತ್ರ್ಯ ಕೊಡುವ ಮೂಲಕ ಭಯೋತ್ಪಾದಕರನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಗಿದೆ.
ಮೋದಿಯವರನ್ನು ಯುವಕರು ಸಿಂಹದಂತೆ ಭಾವಿಸಿದ್ದಾರೆ. ಹೀಗಾಗಿ, ಮತ್ತೂಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಜನರು ಉತ್ಸುಕರಾಗಿದ್ದಾರೆ ಎಂದರು.
ರಾಜ್ಯ ಸರಕಾರದಿಂದ ಯಾವುದೇ ಕೆಲಸ ಆಗುತ್ತಿಲ್ಲ. ಸರ್ಕಾರ ಹಾಸನ, ಮಂಡ್ಯ, ರಾಮನಗರ ಈ ಮೂರು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ಈ ಜಿಲ್ಲೆಗಳಿಗೆ 12 ಸಾವಿರ ಕೋಟಿ ರೂ.ಅನುದಾನ ನೀಡಿ, ಇತರ ಜಿಲ್ಲೆಗಳಿಗೆ ತಾರತಮ್ಯ ಎಸಗಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ರಚನೆಗೊಂಡ ನಂಜುಂಡಸ್ವಾಮಿ
ವರದಿ ಜಾರಿಗೆ ತರುವ ಪ್ರಯತ್ನ ಮಾಡಿಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.