ದೇಶದ ಜತೆ ಕ್ಷೇತ್ರದ ಅಭಿವೃದ್ಧಿ ಮುಖ್ಯ
ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್
Team Udayavani, Mar 26, 2019, 6:30 AM IST
- ಲೋಕಸಭೆಗೆ ಮೊದಲ ಬಾರಿ ಸ್ಪರ್ಧಿಸುತ್ತಿದ್ದೀರಿ. ಏನನ್ನಿಸುತ್ತಿದೆ?
ಚುನಾವಣೆಯಲ್ಲಿ ಸ್ಪರ್ಧಿಸಲು ದೇವರ, ಪಕ್ಷದ, ಪಕ್ಷಗಳ ನಾಯಕರ, ಜನರ ಪ್ರೇರಣೆ ಬೇಕು. ದೇವರ ಮೇಲೆ ಮತ್ತು ಜನರ ಮೇಲೆ ಭಾರ ಹಾಕಿ ಸ್ಪರ್ಧಿಸುತ್ತಿದ್ದೇನೆ. - ಸ್ಥಳೀಯವಾಗಿ ಕಾಂಗ್ರೆಸ್ ಮತ್ತು ರಾಜ್ಯದಲ್ಲಿ ಎರಡೂ ಪಕ್ಷಗಳಲ್ಲಿ ಅತೃಪ್ತಿ ಇದೆಯಲ್ಲವೆ?
ಪ್ರತಿ ಚುನಾವಣೆಯಲ್ಲಿಯೂ ಸ್ವಲ್ಪ ಮಟ್ಟಿನ ಅತೃಪ್ತಿ ಸಹಜ. ಕಳೆದ 10-15 ದಿನಗಳ ಹಿಂದೆ ಇದ್ದ ಅತೃಪ್ತಿ ಸಾಕಷ್ಟು ಶಮನವಾಗಿದೆ. ಇನ್ನೇನಾದರೂ ಅತೃಪ್ತಿ ಉಳಿದಿದ್ದರೆ ಮಾತುಕತೆ ಮೂಲಕ ನಿವಾರಿಸಲಾಗುತ್ತದೆ. ಎಲ್ಲರೂ ಒಂದಾಗಿ ಚುನಾವಣೆ ಎದುರಿಸುತ್ತೇವೆ ಎಂಬ ವಿಶ್ವಾಸವಿದೆ. - ಗೆದ್ದರೆ ಯಾವ ಪಕ್ಷದ ಕಡೆ ಇರುತ್ತೀರಿ?
ಐದು ವರ್ಷ ಎರಡೂ ಪಕ್ಷಗಳ ಜತೆ ಜತೆಯಾಗಿ ಜವಾಬ್ದಾರಿಯನ್ನು ನಿರ್ವಹಿಸುವೆ. ನನ್ನ ಪರವಾಗಿ ಕೆಲಸ ಮಾಡಿದ ಕಾರ್ಯಕರ್ತರು, ಮತ ಹಾಕಿದ ಮತದಾರರನ್ನು ಮರೆಯಲು ಸಾಧ್ಯವೆ? - ಯಾವ ಆಧಾರದಲ್ಲಿ ಮತ ಯಾಚಿಸುವಿರಿ?
ದೇವರ ದಯೆಯಿಂದ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿದಾಗ ಜನರ ಮತ್ತು ಕ್ಷೇತ್ರದ ಅಭಿವೃದ್ಧಿಯನ್ನು ಶಕ್ತಿ ಮೀರಿ ಮಾಡಿದ್ದೇನೆ. ಕ್ಷೇತ್ರದ ಹೊರಗಿನವರಿಗೂ ನಾನು ನನ್ನ ಕ್ಷೇತ್ರದಲ್ಲಿ ಮಾಡಿದ ಕೆಲಸಗಳ ಮಾಹಿತಿ ತಿಳಿದಿರುತ್ತದೆ. ಕೆಲಸ ಮಾಡದವರು ಮತ್ತು ಮಾಡಿದವರ ನಡುವಿನ ಹೋರಾಟ ಇದು. ಹೊರಗಿನವರಿಗೆ ಅವಕಾಶ ಕೊಟ್ಟರೆ ಅವರಿಗೆ ಕ್ಷೇತ್ರದ ಮೇಲೆ ಮಮಕಾರ ಇರದು ಎಂಬುದಕ್ಕೆ ಶೋಭಾ ಕರಂದ್ಲಾಜೆಯವರೇ ಉದಾಹರಣೆ. ನಮಗೆ ರಾಷ್ಟ್ರ ಮುಖ್ಯ. ಅದರ ಜತೆಗೆ ಕ್ಷೇತ್ರವೂ ಮುಖ್ಯ. ಕ್ಷೇತ್ರದ ಅಭಿವೃದ್ಧಿಯಾದರೆ ಮಾತ್ರ ರಾಷ್ಟ್ರದ ಅಭಿವೃದ್ಧಿಯಾಗುತ್ತದೆ ಎಂಬುದು ನಂಬಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.