ಚುನಾವಣೆ ಆಯೋಗದಲ್ಲಿ ಭಿನ್ನಾಭಿಪ್ರಾಯ ಸಹಜ

Team Udayavani, May 19, 2019, 8:25 AM IST

a-20

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಪ್ರಧಾನಿ ಮೋದಿ ವಿರುದ್ಧ ದಾಖಲಾದ ಪ್ರಕರಣಗಳ ತೀರ್ಮಾನದ ವೇಳೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದ ಚುನಾವಣಾ ಆಯುಕ್ತರಲ್ಲೊಬ್ಬರಾದ ಅಶೋಕ್‌ ಲವಾಸಾ ಮುಂದಿನ ಸಭೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ನಿರ್ಧಾರ ಕೈಗೊಂಡಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ, ಚುನಾವಣಾ ಆಯೋಗದಲ್ಲಿ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ ಎಂದಿದ್ದಾರೆ. ಮೂರು ಆಯುಕ್ತರೂ ಒಂದೇ ರೀತಿ ಅಭಿಪ್ರಾಯ ಹೊಂದಿರಬೇಕು ಎಂದೇನಿಲ್ಲ. ಅವರೇನೂ ಅವಳಿಗಳಲ್ಲ. ಈ ಹಿಂದೆಯೂ ಹಲವು ಬಾರಿ ಭಿನ್ನ ಅಭಿಪ್ರಾಯಗಳು ಮೂಡಿ ಬಂದಿದ್ದವು ಎಂದಿದ್ದಾರೆ.

ಇದು ಚುನಾವಣಾ ಆಯೋಗದ ಆಂತರಿಕ ವಿಷಯ. ಯಾವುದೇ ಊಹಾಪೋಹಗಳಿಗೆ ಅವಕಾಶವಿಲ್ಲ. ಈ ಭಿನ್ನಾಭಿಪ್ರಾಯದ ಬಗ್ಗೆ ಹಾಗೂ ಇತರ ವಿಷಯಗಳ ಕುರಿತು ಚರ್ಚಿಸಲೆಂದೇ ಮೇ 21 ರಂದು ಸಭೆ ಕರೆಯಲಾಗಿದೆ ಎಂದು ಅರೋರಾ ಹೇಳಿದ್ದಾರೆ. ಈಗಾಗಲೇ ಸಿಇಸಿಗೆ ಮೂರು ಬಾರಿ ಲವಾಸಾ ಪತ್ರ ಬರೆದು, ಚುನಾವಣಾ ಆಯೋಗದ ನಿರ್ಧಾರಗಳಲ್ಲಿ ಪ್ರಕಟವಾದ ಭಿನ್ನ ಅಭಿಪ್ರಾಯವನ್ನೂ ದಾಖಲಿಸುವಂತೆ ಕೋರಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಮೋದಿ ವಿರುದ್ಧ ದಾಖಲಾದ ಆರು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಲ್ಲಿ ಆಯೋಗ ಕ್ಲೀನ್‌ಚಿಟ್ ನೀಡಿತ್ತು. ಈ ಪೈಕಿ ಕೆಲವು ಪ್ರಕರಣಗಳಲ್ಲಿ ಮೋದಿಗೆ ನೋಟಿಸ್‌ ಕಳುಹಿಸಬೇಕು ಎಂಬ ಅಭಿಪ್ರಾಯವನ್ನು ಲವಾಸಾ ವ್ಯಕ್ತಪಡಿಸಿದ್ದರು. ಆದರೆ ಅರೋರಾ ಹಾಗೂ ಇನ್ನೊಬ್ಬ ಆಯುಕ್ತ ಸುಶೀಲ್ ಚಂದ್ರ ಅಭಿಪ್ರಾಯ ಭಿನ್ನವಾಗಿದ್ದರಿಂದ ಬಹುಮತದಂತೆ ಮೋದಿಗೆ ಕ್ಲೀನ್‌ಚಿಟ್ ನೀಡಲಾಗಿತ್ತು.

ತನಿಖೆಯಾಗಲಿ: ಕಾಂಗ್ರೆಸ್‌: ಲವಾಸಾ ಆಕ್ಷೇಪಿಸಿರುವ ವಿಷಯಗಳ ಕುರಿತು ವಿಸ್ತೃತ ತನಿಖೆ ನಡೆಯಲಿ ಎಂದು ಕಾಂಗ್ರೆಸ್‌ ಆಗ್ರಹಿಸಿದೆ. ಸಾಂಸ್ಥಿಕ ಗೌರವವನ್ನು ಹಾಳು ಮಾಡುವುದು ಮೋದಿ ಸರಕಾರದ ಧ್ಯೇಯವಾಗಿದೆ. ಚುನಾವಣಾ ಆಯೋಗವು ಮೋದಿಯ ಕೈಗೊಂಬೆಯಾಗಿದೆಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಲವಾಸಾ ವ್ಯಕ್ತಪಡಿಸಿದ ಭಿನ್ನಾಭಿಪ್ರಾಯಗಳನ್ನು ದಾಖಲಿಸುವ ಮೂಲಕ ಚುನಾÊ‌ಣಾ ಆಯೋಗವು ತನ್ನ ಗೌರವವನ್ನು ಕಾಪಾಡಿಕೊಳ್ಳ¸ೇಕು ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೆವಾಲ ಹೇಳಿದ್ದಾರೆ.

ಟಾಪ್ ನ್ಯೂಸ್

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.