ಅಪ್ಪನ ಕ್ಷೇತ್ರದಲ್ಲಿ ಈ ಬಾರಿ ಕಾರ್ತಿಗೆ ಗೆಲ್ಲುವ ತವಕ


Team Udayavani, Apr 8, 2019, 6:30 AM IST

appana-kshetra

ಶಿವಗಂಗಾ ಲೋಕಸಭಾ ಕ್ಷೇತ್ರ ಎನ್ನುವುದು ತಮಿಳುನಾಡಿನಲ್ಲಿ ಕಾಂಗ್ರೆಸ್‌ನ ಭದ್ರ ಕೋಟೆ ಎಂಬ ಅಂಶ 1980ರಿಂದ 2014ರ ವರೆಗೆ ಸಾಬೀತಾಗಿತ್ತು. ಆ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಪಳನಿಯಪ್ಪನ್‌ ಚಿದಂಬರಂ ಏಳು ಬಾರಿ ಮತ್ತು ಆರ್‌.ಸ್ವಾಮಿನಾಥನ್‌ ಒಂದು ಬಾರಿ ಗೆದ್ದಿದ್ದಾರೆ. ಸದ್ಯ ಎಐಎಡಿಎಂಕೆಯ ಪಿ.ಆರ್‌.ಸೆಂಥಿಲ್‌ನಾಥನ್‌ ಸಂಸದರಾಗಿದ್ದಾರೆ. ಈ ಸಾಲಿನಲ್ಲಿ ಸ್ಪರ್ಧೆಗೆ ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಕಾಂಗ್ರೆಸ್‌ ಅನುವು ಮಾಡಿಕೊಟ್ಟಿದೆ. ಅದು ಪಕ್ಷದ ನಾಯಕ ಇ.ಎಂ.ಸುದರ್ಶನ ನಾಚಿಯಪ್ಪನ್‌ ಬಹಿರಂಗವಾಗಿಯೇ ದನಿಯೆ ತ್ತಿದ್ದಾರೆ. ಕ್ಷೇತ್ರದ ಜನರು ಚಿದಂಬರಂ ಕುಟುಂಬದವರನ್ನು ದ್ವೇಷಿಸುತ್ತಿದ್ದಾರೆ ಮತ್ತು ಅವರಿಂದ ಏನು ಪ್ರಯೋಜನ­ವಾಗಿಲ್ಲ ಎಂದು ಟೀಕಿಸಿದ್ದರು.

ಕಾರ್ತಿ ವಿರುದ್ಧ ಐಎನ್‌ಎಕ್ಸ್‌ ಮಾಧ್ಯಮ ಲಂಚ ಪ್ರಕರಣ, ಏರ್‌ಸೆಲ್‌ ಮ್ಯಾಕ್ಸಿಸ್‌ ಡೀಲ್‌ ಕೇಸ್‌ನಲ್ಲಿ ಅಕ್ರಮ ಎಸಗಿದ ಆರೋಪವಿದೆ. ಸದ್ಯ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. 1984-1999ರ ವರೆಗೆ ಮಾಜಿ ಸಚಿವ ಪಿ.ಚಿದಂಬರಂ ಈ ಕ್ಷೇತ್ರದಲ್ಲಿ ಗೆದ್ದಿದ್ದರು. 1999-2004ರಲ್ಲಿ ಇ.ಎಂ.ಸುದರ್ಶನ ನಾಚಿಯಪ್ಪನ್‌ ಕಾಂಗ್ರೆಸ್‌ನ ಸಂಸದರಾಗಿದ್ದರು. 2004-2014ರ ವರೆಗೆ ಚಿದಂಬರಂ ಅವರೇ ಮತ್ತೆ ಗೆದ್ದಿದ್ದರು. 2014ರಲ್ಲಿ ಕಾರ್ತಿ ಚಿದಂಬರಂ ಸ್ಪರ್ಧಿಸಿದ್ದರಾದರೂ, 1,04, 678 ಮತಗಳನ್ನು ಪಡೆದು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದರು. ಹೀಗಾಗಿ ಕಳೆದು ಹೋಗಿರುವ ಕ್ಷೇತ್ರವನ್ನು ಮತ್ತೆ ಪಡೆಯಲು ಕಾರ್ತಿ ಹರಸಾಹಸ ಪಡಬೇಕಾಗಿದೆ. ಕಾಂಗ್ರೆಸ್‌ನಲ್ಲಿಯೇ ಮಾಜಿ ಸಚಿವರ ಪುತ್ರನ ಸ್ಪರ್ಧೆಗೆ ಪ್ರಬಲ ವಿರೋಧವೂ ಇದೆ. ಎಐಎಡಿಎಂಕೆಯಿಂದ ಹಾಲಿ ಸಂಸದರೇ ಮತ್ತೆ ಕಣಕ್ಕೆ ಇಳಿದಿದ್ದಾರೆ. ಬಿಜೆಪಿಯಿಂದ ಎಚ್‌.ರಾಜಾ ಕಣದಲ್ಲಿದ್ದಾರೆ.

ಕಾಂಗ್ರೆಸ್‌ ಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿರುವುದರಿಂದ ಅದು ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ. ಹೀಗಾಗಿ, ಆ ಪಕ್ಷದ ಮತಗಳು ಕಾರ್ತಿ ಚಿದಂಬರಂಗೆ ನೆರವಾಗಲಿದೆಯೋ ನೋಡಬೇಕಾಗಿದೆ. ಏ.18ರಂದು ಈ ಕ್ಷೇತ್ರದ ಜನರು ಹಕ್ಕು ಚಲಾವಣೆ ನಡೆಸಲಿದ್ದಾರೆ.

ಜಾತಿ ಲೆಕ್ಕಾಚಾರ: ಈ ಕ್ಷೇತ್ರದಲ್ಲಿ ತಮಿಳುನಾಡಿನಲ್ಲಿ ವ್ಯಾಪರ, ಉದ್ದಿಮೆಗೆ ಹೆಸರುವಾಸಿಯಾಗಿರುವ ಚೆಟ್ಟಿಯಾರ್‌ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಈ ಸಮುದಾಯದ ಪ್ರಮಾಣವೇ ಶೇ.8-10ರ ಪ್ರಮಾಣದಲ್ಲಿದೆ. ದಲಿತರು, ತೇವರ್‌ ಮತ್ತು ಕೊನಾರ್ಸ್‌ ಸಮುದಾಯಕ್ಕೆ ಸೇರಿದವರೂ ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

2014ರ ಚುನಾವಣೆ
– ಪಿ.ಆರ್‌.ಸೆಂಥಿಲ್‌ನಾಥನ್‌ (ಎಐಎಡಿಎಂಕೆ) –  4,75,993
– ದೊರೈ ರಾಜಾ ಶುಭಾ (ಡಿಎಂಕೆ) – 2,46, 608

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.