ಪರಿಸರ ಸ್ನೇಹಿ ಚುನಾವಣೆಗೆ ಉಡುಪಿ ಜಿಲ್ಲಾಡಳಿತ ಮಾದರಿ


Team Udayavani, Apr 15, 2019, 6:30 AM IST

dc

ಉಡುಪಿ: ಪರಿಸರ ಸ್ನೇಹಿಯಾದ ಆಡಳಿತಕ್ಕೆ ಹಲವಾರು ಕ್ರಮಗಳನ್ನು ಕೈಗೊಂಡು ಜಾರಿಗೆ ತಂದಿದ್ದ ಜಿಲ್ಲಾಡಳಿತ ಇದೀಗ ಲೋಕಸಭಾ ಚುನಾವಣೆಯನ್ನೂ ಪರಿಸರ ಸ್ನೇಹಿ ನೆಲೆಯಲ್ಲಿ ಸಿದ್ಧತೆ ನಡೆಸಿ ಇನ್ನೊಂದು ದಿಟ್ಟ ಹೆಜ್ಜೆ ಇರಿಸಿದೆ.

ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಿಸು ವಾಗ ಚುನಾವಣೆಯನ್ನು ಪರಿಸರ ಸ್ನೇಹಿಯಾಗಿ ನಡೆಸಲು ಒತ್ತು ನೀಡುವುದಾಗಿ ದಿಲ್ಲಿಯಲ್ಲಿ ಕೇಂದ್ರ
ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಪ್ರಕಟಿಸಿದ್ದರು. ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಚುನಾವಣೆ ಘೋಷಣೆಯ ಆರಂಭದಲ್ಲಿಯೇ ಎಲ್ಲಾ ರಾಜ ಕೀಯ ಪಕ್ಷಗಳು, ಅಭ್ಯರ್ಥಿಗಳ ಸಭೆ ನಡೆಸಿ ಪರಿಸರ ಸ್ನೇಹಿ ಚುನಾವಣೆ ನಡೆಸಲು ಸಹಕಾರ ಕೋರಿತ್ತು.

ಈ ಹಿಂದೆ ಚುನಾವಣೆ ಎಂದರೆ ರಸ್ತೆಯುದ್ದಕ್ಕೂ ಬ್ಯಾನರ್‌, ಬಂಟಿಂಗ್ಸ್‌, ಪಕ್ಷದ ಧ‌Ìಜಗಳು ಸಾಮಾನ್ಯ ವಾಗಿತ್ತು. ಸಾರ್ವಜನಿಕ ಸ್ಥಳಗಳ ಗೋಡೆಗಳಲ್ಲೂ ಚುನಾವಣೆಯ ಭರಾಟೆ ಎದ್ದು ಕಾಣುತ್ತಿದ್ದವು. ಆದರೆ ಪ್ರಸ್ತುತ ಜಿಲ್ಲೆಯಲ್ಲಿ ಚುನಾವಣೆ ಕುರಿತ ರಾಜಕೀಯ ಪಕ್ಷಗಳ/ಅಭ್ಯರ್ಥಿಗಳ ಬಗ್ಗೆ ಪ್ಲಾಸ್ಟಿಕ್‌ ಫ್ಲೆಕ್ಸ್‌, ಕಟೌಟ್‌, ಬಂಟಿಂಗ್ಸ್‌ಗಳು ಅಪರೂಪವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆದು ಬ್ಯಾನರ್‌, ಕಟೌಟ್‌, ಬಂಟಿಂಗ್ಸ್‌ ಹಾಕಲು ಅವಕಾಶ ಇದ್ದರೂ, ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳಿಂದ ಇವುಗಳಿಗೆ ಅನುಮತಿ ಕೋರಿ ಅರ್ಜಿಗಳು ಬಂದಿಲ್ಲ.

ವಾಯು ಮಾಲಿನ್ಯ ತಡೆಗಟ್ಟಲು ಯಾವುದೇ ರೀತಿಯ ವಾಹನ ರ್ಯಾಲಿ, ಬೈಕ್‌ ರ್ಯಾಲಿಗಳಿಗೆ ಸಂಬಂಧಿಸಿದಂತೆ, ರಾಜಕೀಯ ಪಕ್ಷದ/ಅಭ್ಯರ್ಥಿಗಳ ಸಭೆಯಲ್ಲಿ ಚರ್ಚಿಸಲಾಗಿತ್ತು. ಅಂದು ಪರಿಸರ ಸ್ನೇಹಿ ಚುನಾವಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದ ಅವರು ಯಾವುದೇ ರ್ಯಾಲಿ ಗಳಿಗೆ ಜಿಲ್ಲಾಡಳಿತದ ಅನುಮತಿಯನ್ನು ಕೋರದೆ ಪರಿಸ‌ರದ ಬಗ್ಗೆ ಕಾಳಜಿಯನ್ನು ಪ್ರದರ್ಶಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರಸಕ್ತ ಲೋಕಸಭಾ ಚುನಾವಣೆ ಯನ್ನು ಪರಿಸರ ಸ್ನೇಹಿಯಾಗಿ ನಡೆಸಲು ಎಲ್ಲ ಅಭ್ಯರ್ಥಿಗಳು ಮತ್ತು ಪಕ್ಷಗಳು ಸಹಕಾರ ನೀಡಿರು ವುದು ಶ್ಲಾಘನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹೆಫಿÕಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಜಿಲ್ಲಾಡಳಿತವು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತಾಲೂಕು ಕೇಂದ್ರಗಳಲ್ಲಿ ಆಯೋಜಿಸಿದ್ದ ತರಬೇತಿ ಯಲ್ಲಿ ಕಾಫಿ, ಟೀ ಕುಡಿಯಲು ಪೇಪರ್‌ನಿಂದ ಮಾಡಿದ ಗ್ಲಾಸ್‌ಗಳು , ಊಟಕ್ಕೆ ಅಡಿಕೆ ಹಾಳೆಯ ತಟ್ಟೆ , ಕುಡಿಯಲು ನೀರಿನ ಕ್ಯಾನ್‌ಗಳನ್ನು ಇಟ್ಟು ಪ್ಲಾಸ್ಟಿಕ್‌ ಮುಕ್ತ ತರಬೇತಿ ಕೇಂದ್ರ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.