ಸಾಧ್ವಿಗೆ ಸುಲಭವಿದೆಯೇ ದಾರಿ?
Team Udayavani, May 6, 2019, 6:00 AM IST
ದೇಶದಲ್ಲಿ ಮಂಡಲ್ ವರದಿ ಜಾರಿಗೆ ತಂದಿದ್ದ ಮಾಜಿ ಪ್ರಧಾನಿ ವಿಶ್ವನಾಥ್ ಪ್ರತಾಪ್ ಸಿಂಗ್ ಜನತಾ ದಳ ಅಭ್ಯರ್ಥಿಯಾಗಿ ಗೆದ್ದಿದ್ದ ಕ್ಷೇತ್ರವೇ ಉತ್ತರ ಪ್ರದೇಶದ ಫತೇಪುರ. ಒಂದರ್ಥದಲ್ಲಿ ಈ ಕ್ಷೇತ್ರ ದೇಶಾದ್ಯಂತ ಅವರಿಂದಲೇ ಖ್ಯಾತಿ ಗಳಿಸಿತು.
1984ರ ಚುನಾವಣೆವರೆಗೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹುರಿಯಾಳುಗಳು ಹೆಚ್ಚಿನ ಬಾರಿ ಗೆದ್ದಿದ್ದರು. 1998 ಮತ್ತು 199ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 2004, 2009ರಲ್ಲಿ ಬಿಎಸ್‌ಪಿ, ಎಸ್‌ಪಿ ಅಭ್ಯರ್ಥಿಗಳು ಗೆದ್ದಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಸಾಧ್ವಿ ನಿರಂಜನಾ ಜ್ಯೋತಿ 4,85,994 ಮತಗಳನ್ನು ಪಡೆದು ಆಯ್ಕೆಯಾಗಿದ್ದರು. ಅಂದು ಅವರ ಗೆಲುವಲ್ಲಿ ನರೇಂದ್ರ ಮೋದಿ ಅಲೆ ಪ್ರಮುಖ ಪಾತ್ರ ವಹಿಸಿತ್ತು, ಈ ಬಾರಿ ಸಾಧ್ವಿಯ ವರ್ಚಸ್ಸೂ ಉತ್ತಮವಾಗಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ಎಸ್‌ಪಿ-ಬಿಎಸ್‌ಪಿ ಮೈತ್ರಿ ಕೂಟದ ಅಭ್ಯರ್ಥಿ ಬಿಂಡಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಸಾಚನ್ 2009ರಲ್ಲಿ ಸಮಾಜವಾದಿ ಪಕ್ಷದಿಂದ ಗೆದ್ದಿದ್ದರು.
ಜಾತಿ ಲೆಕ್ಕಾಚಾರ: ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಇವೆ. ಸಾಮಾನ್ಯ ವರ್ಗದ ಮತದಾರರು 5.30 ಲಕ್ಷ, ಹಿಂದುಳಿದ ವರ್ಗಕ್ಕೆ ಸೇರಿದವರ ಸಂಖ್ಯೆ 5.50 ಲಕ್ಷ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು 2.60 ಲಕ್ಷ, ಎಸ್‌ಸಿ ಸಮುದಾಯಕ್ಕೆ ಸೇರಿದವರು 4.69 ಲಕ್ಷ, ದಿವ್ಯಾಂಗರು 8 ಸಾವಿರ ಮಂದಿ ಇದ್ದಾರೆ.
ಆರು ಕ್ಷೇತ್ರಗಳು: ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಹನಾಬಾದ್, ಬಿಂಡಿR, ಫತೇಪುರ್, ಆಯಾಶಹಾ, ಹುಸೈನ್‌ಗಂಜ್, ಖಗಾ ಎಂಬ ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ ಖಗಾ ವಿಧಾನಸಭಾ ಕ್ಷೇತ್ರ ಎಸ್‌ಸಿಗೆ ಮೀಸಲಾಗಿ ಇರಿಸಲಾಗಿದೆ. ಜೆಹಾನಾಬಾದ್ ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಹೀಗಾಗಿ, ಹಾಲಿ ಸಂಸದರಿಗೆ ಗೆಲುವು ಸುಲಭ ಎಂದು ಹೇಳಲಾಗುತ್ತಿದೆ.
ಈ ಬಾರಿ ಎಸ್‌ಪಿ ಮತ್ತು ಬಿಎಸ್‌ಪಿ ಜತೆಗೂಡಿ ಉತ್ತರ ಪ್ರದೇಶದಲ್ಲಿ ಚುನಾವಣೆ ಎದುರಿಸಲು ನಿರ್ಧರಿಸಿವೆ. ಹೀಗಾಗಿ, ಮುಸ್ಲಿಂ, ಎಸ್‌ಸಿ, ಎಸ್‌ಟಿ ಸಮುದಾಯದ ಮತಗಳು ಹೆಚ್ಚು ವಿಭಜನೆಯಾಗದು ಎಂದು ಹೇಳಲಾಗುತ್ತಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ ವಿವಿಧ ಯೋಜನೆಗಳನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವರ್ಚಸ್ಸನ್ನು ಮುಂದಿಟ್ಟುಕೊಂಡು ಬಿಜೆಪಿ ಮತ ಕೇಳುತ್ತಿದೆ. ಇನ್ನು ಕಾಂಗ್ರೆಸ್ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳು ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು, ಕೇಂದ್ರದ ನಿಲುವುಗಳನ್ನು ಮುಂದಿಟ್ಟುಕೊಂಡು ಮತ ಯಾಚಿಸುತ್ತಿವೆ.
ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ಅಂದರೆ ಕಾಂಗ್ರೆಸ್, ಎಸ್‌ಪಿ-ಬಿಎಸ್‌ಪಿ ಮತ್ತು ಬಿಜೆಪಿ ನಡುವೆ ಹೋರಾಟ ಇದೆ. ನೇರವಾಗಿ ಬಿಜೆಪಿ ಮತ್ತು ಎಸ್‌ಪಿ-ಬಿಎಸ್‌ಪಿ ಅಭ್ಯರ್ಥಿಗಳ ನಡುವೆ ಹೋರಾಟ ಇದೆ.
ಈ ಕ್ಷೇತ್ರ ಅತ್ಯಂತ ಹಿಂದುಳಿದಿದೆ. ಜಿಲ್ಲೆಯ ಪ್ರಧಾನ ಕೇಂದ್ರದಲ್ಲಿಯೇ ಸರಿಯಾದ ರೀತಿಯ ಒಳಚರಂಡಿ ವ್ಯವಸ್ಥೆಯೇ ಇಲ್ಲ. ಇದರ ಜತೆಗೆ ಉದ್ಯೋಗ ಸೃಷ್ಟಿಗಾಗಿ ಸರಿಯಾದ ರೀತಿಯ ಕೈಗಾರಿಕೆಗಳೇ ಇಲ್ಲ. 2013ರಲ್ಲಿ ಸಮಾಜವಾದಿ ಪಕ್ಷದ ಆಡಳಿತದ ಅವಧಿಯಲ್ಲಿ ಜಾರಿ ಮಾಡಲಾಗುತ್ತದೆ ಎಂದು ಹೇಳಲಾಗಿದ್ದ ಟ್ರಾಮಾ ಸೆಂಟರ್ ಇನ್ನೂ ಕೂಡ ಆರಂಭಿಕ ಹಂತದಲ್ಲಿಯೇ ಇದೆ ಎನ್ನುತ್ತಾರೆ ಬಿಜೆಪಿ ವಿರೋಧಿ ಅಭ್ಯರ್ಥಿಗಳು. ಆದರೆ ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜಿಲ್ಲೆಯನ್ನು ಅತ್ಯಂತ ಹಿಂದುಳಿದ ಜಿಲ್ಲೆ ಎಂದು ಘೋಷಣೆ ಮಾಡಿ, ಹಲವು ಯೋಜನೆಗಳನ್ನು ತರುವ ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯಾಗಿದೆ ಎನ್ನುತ್ತಾರೆ ಸಾಧ್ವಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.