ಅಭಿವೃದ್ಧಿ ಆಧಾರದಲ್ಲಿಯೇ ಮತ ಯಾಚನೆ : ನಳಿನ್ ಕುಮಾರ್ ಕಟೀಲ್
Team Udayavani, Apr 16, 2019, 5:10 PM IST
ಮಂಗಳೂರು : ಕಳೆದ ಐದು ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಜಿಲ್ಲೆಯ ಸಮಗ್ರ ಅಭಿವ್ಧೃಗಾಗಿ 16505 ಕೋ.ರೂ ಅನುದಾನವನ್ನು ಕೇಂದ್ರದಿಂದ ತರಲಾಗಿದೆ. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವ ವೃದ್ಧಿಯಾಗಿದ್ದು, ದೇಶ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡೇ ನಾವು ಈ ಬಾರಿ ಮತ ಯಾಚಿಸುತ್ತಿದ್ದೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸುರತ್ಕಲ್‍ನಲ್ಲಿ ಸೋಮವಾರ ನಡೆದ ರೋಡ್ ಶೋದಲ್ಲಿ ಅವರು ಮಾತನಾಡಿದರು. ನಾವು ನಮ್ಮ ಪ್ರಧಾನಿ ಸಾಧನೆಗಳನ್ನು, ಅಭಿವ್ಧೃ ಕೆಲಸಗಳನ್ನು ಹೇಳಿ ಮತಕೇಳುತ್ತಿದ್ದೇವೆ. ಕಳೆದ ಹತ್ತು ವರ್ಷಗಳಲ್ಲಿ ನಾನು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ನಡೆಸಿದ ಅಭಿವೃದ್ಧಿಗಳನ್ನು ಜನತೆ ಗಮನಿಸಿದ್ದಾರೆ. ಕರಾವಳಿಯಲ್ಲಿ ರೈಲ್ವೆ ನಿಲ್ದಾಣ ಹಾಗೂ ಮಾರ್ಗ ಅಭಿವೃದ್ದಿಗಾಗಿ 1244 ಕೋ.ರೂ, ರಾಷ್ಟ್ರೀಯ ಹೆದ್ದಾರಿ ಪ್ರಾಕಾರಕ್ಕೆ 7646 ಕೋ.ರೂ , ಬಂದರು ಹಾಗೂ ಮೀನುಗಾರಿಕಾ ಜಟ್ಟಿ ನಿರ್ಮಾಣಕ್ಕೆ 230 ಕೋ.ರೂ. ಅನುದಾನ ಬಿಡುಗಡೆಯಾಗಿದೆ. ಮಂಗಳೂರು ನಗರಕ್ಕೆ ಸ್ಮಾರ್ಟ್ ಸಿಟಿ -ಅಮೃತ ಯೋಜನೆಯಲ್ಲಿ 161.ರೂ. ಅನುದಾನ ಬಂದಿದೆ. ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ ಹಾಗೂ ಅಭಿವೃದ್ದಿಗೆ 297 ಕೋ.ರೂ. ರಾಷ್ಟ್ರೀಯ ಹೆದ್ದಾರಿ – ಮಂಗಳೂರು ಉಪವಿಭಾಗಕ್ಕೆ 4367 ಕೋ.ರೂ. ಅನುದಾನ ಒದಗಿಸಲಾಗಿದೆ ಎಂದು ಅವರು ಹೇಳಿದರು.
ಕೇಂದ್ರ ಸರಕಾರದ ಮುದ್ರಾ ಯೋಜನೆಯಡಿಯಲ್ಲಿ ಜಿಲ್ಲೆಯ 90571 ಫಲಾನುಭವಿಗಳಿಗೆ 1380 ಕೋ.ರೂ. ಸಾಲ ಒದಗಿಸಿ, ಉದ್ಯೋಗ ಕಲ್ಪಿಸುವ ಪ್ರಯತ್ನ ಮಾಡಲಾಗಿದೆ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ 8075 ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ 81.66 ಕೋ.ರೂ ನೆರವು ನೀಡಲಾಗಿದೆ. ಹೀಗೆ ಅನೇಕ ಬಡವರ ಪರ ಕೆಲಸಗಳು ಜಿಲ್ಲೆಯಲ್ಲಿ ಆಗಿದೆ ಎಂದರು ನಳಿನ್ ಕುಮಾರ್ ಕಟೀಲ್ ಹೇಳಿದರು.
ಸಂಸದರ ಅದರ್ಶ ಗ್ರಾಮ ಯೋಜನೆಯಡಿ ಸುಳ್ಯದ ಬಳ್ಪವನ್ನು ಸರ್ವಾಂಗೀಣ ಅಭಿವೃದ್ದಿಪಡಿಸಲಾಗುತ್ತಿದೆ. ಇದು ರಾಜ್ಯದಲ್ಲಿಯೇ ಗಮನ ಸೆಳೆಯತಕ್ಕ ಮಟ್ಟಕ್ಕೆ ಅಭಿವ್ಧೃ ಯಾಗಿದೆ . ಕಳೆದ 5 ವರ್ಷಗಳಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಯಡಿ 17.50 ಕೋ.ರೂಯನ್ನು ಸಂಪೂರ್ಣವಾಗಿ ಕ್ಷೇತ್ರದ ಅಭಿವೃದ್ದಿಗಾಗಿ ಬಳಸಿಕೊಳ್ಳಲಾಗಿದೆ. ಗ್ರಾಮೀಣ ನೀರು ಸರಬರಾಜು , ಪ್ರಧಾನ ಮಂತ್ರಿ ಸಡಕ್ ಯೋಜನೆ , ಪ್ರವಾಸೋದ್ಯಮ ಅಭಿವೃದ್ದಿ , ಆರೋಗ್ಯ ಇಲಾಖೆ , ಶಿಕ್ಷಣ ಇಲಾಖೆಗಳಿಗೂ ಕೇಂದ್ರ ಸರಕಾರದಿಂದ ಗರಿಷ್ಟ ಪ್ರಮಾಣದಲ್ಲಿ ಅನುದಾನವನ್ನು ತಂದುಕೊಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ನುಡಿದರು.
ಪ್ಲಾಸ್ಟಿಕ್ ಪಾರ್ಕ್ , ಸ್ಮಾರ್ಟ್ ಪೋರ್ಟ್
ಈ ಬಾರಿ ಕರಾವಳಿಯ ಜನತೆ ನನಗೆ ಮತ್ತೊಮ್ಮೆ ಆಶೀರ್ವಾದ ಮಾಡಬೇಕು ಎಂದು ಹೇಳಿದ ಅವರು, ಈ ಅವಯಲ್ಲಿ ಪ್ಲಾಸ್ಟಿಕ್ ಪಾರ್ಕ್ , ಕೋಕನೆಟ್ ಪಾರ್ಕ್ , ವಿಶೇಷ ಕೃಷಿ ವಲಯ , ಸ್ಮಾರ್ಟ್ ಪೋರ್ಟ್ , ಐಟಿ ಪಾರ್ಕ್ ಮುಂತಾದ ಯೋಜನೆಗಳನ್ನು ಕರಾವಳಿ ಭಾಗಕ್ಕೆ ತರಲು ಈಗಾಗಲೇ ಆರಂಭಿಕ ಪ್ರಕ್ರಿಯೆಗಳು ನಡೆದಿವೆ. ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ತ್ವಾತಿಕ ಒಪ್ಪಿಗೆ ದೊರೆತಿದ್ದು , 1000 ಕೋ.ರೂ. ಬಿಡುಗಡೆಯ ಭರವಸೆ ದೊರೆತಿದೆ. ಇವುಗಳನ್ನು ಸಮರ್ಪಕ ರೀತಿಯಲ್ಲಿ ಅನುಷ್ಠಾನಗೊಳಿಸುತ್ತೇನೆ. ಈ ಮೂಲಕ ಕರಾವಳಿಯಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ಈ ಸಂದರ್ಭ ಕೇಂದ್ರ ಸಚಿವ ಶ್ರೀ ಸುರೇಶ್ ಪ್ರಭು , ಸುರತ್ಕಲ್ ಶಾಸಕ ಡಾ. ಭರತ್ ಶೆಟ್ಟಿ , ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್ , ರಂದೀಪ್ ಕಾಂಚನ್ , ಸುಧಾಕರ್ ಅಡ್ಯಾರ್ , ಅಶೋಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.