ಮೈತ್ರಿ ಏರ್ಪಡದ ಬಂಗಾಲದಲ್ಲಿ ಜಯ ಯಾರಿಗೆ ?


Team Udayavani, Mar 24, 2019, 11:28 AM IST

mamata

ದೇಶದಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿ ಇರುವ ಪಶ್ಚಿಮ ಬಂಗಾಲದಲ್ಲಿ ಲೋಕ ಸಮರಕ್ಕೆ ಸಿದ್ಧತೆ ಸಮರೋಪಹಾದಿಯಲ್ಲೇ ನಡೆಯುತ್ತಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ಪಶ್ಚಿಮ ಬಂಗಾಲ ಬಲಿಷ್ಠ ನೆಲೆ. ಕಾಂಗ್ರೆಸ್‌, ಎಡರಂಗ ಪಕ್ಷಗಳು ಅಸಿತ್ವದಲ್ಲಿದೆ. ಬಿಜೆಪಿ ಬಂಗಾಲದಲ್ಲಿ ಅಷ್ಟೇನು ಬಲಿಷ್ಠವಾಗಿಲ್ಲದಿದ್ದರೂ ನಿರ್ಲಕ್ಷಿಸುವಂತಿಲ್ಲ.

ಎಡರಂಗ ಮತ್ತು ಟಿಎಂಸಿ ರಾಜ್ಯದಲ್ಲಿ ಅತ್ಯಂತ ಬಲಿಷ್ಠವಾಗಿದೆ. 25 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಜ್ಯೋತಿ ಬಸು ಕಮ್ಯುನಿಸ್ಟ್‌ ಪಕ್ಷದ ನಾಯಕ. ಈ ಒಂದೇ ಇತಿಹಾಸ ಬಂಗಾಲದಲ್ಲಿ ಎಡರಂಗದ ಬಲಾ-ಬಲವನ್ನು ಹೇಳುತ್ತದೆ. ಆದರೆ ಕಮ್ಯನಿಸ್ಟ್‌ ಸಾಮರ್ಥ್ಯವನ್ನು ಮಣಿಸಿ ಕಾಂಗ್ರೆಸ್‌ ಕೆಲವು ಅವಧಿಗೆ ಸರಕಾರವನ್ನು ನೀಡಿದ್ದರೆ, ಬಳಿಕ ಮಮತಾ ಬ್ಯಾನರ್ಜಿ ನಾಯಕತ್ವದ ತೃಣಮೂಲ ಕಾಂಗ್ರೆಸ್‌ ರಾಜ್ಯದ ಚುಕ್ಕಾಣಿ ಹಿಡಿದಿತ್ತು. ಮಹಾಘಟ್‌ಬಂಧನ್‌ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌ ಪ್ರತ್ಯೇಕವಾಗಿಯೇ ಚುನಾವಣೆ ಎದುರಿಸುತ್ತಿವೆ.

ಏರ್ಪಡದ ಮೈತ್ರಿ
ಪಶ್ಚಿಮ ಬಂಗಾಲ ಈ ಬಾರಿ ತೀವ್ರ ಹಣಾ ಹಣಿಗೆ ಸಾಕ್ಷಿಯಾಗಲಿದೆ. ಕಾಂಗ್ರೆಸ್‌ ಮತ್ತು ಎಡರಂಗ ಮೈತ್ರಿ ಮಾತುಕತೆ ನಡೆಸಿತ್ತಾದರೂ ಸೀಟು ಹಂಚಿಕೆಯಲ್ಲಿ ಒಮ್ಮತ ಮೂಡದ ಕಾರಣ ಬರೀ ಕೈಯಲ್ಲಿ ಹಿಂದಿರುಗಿದವು. ಬಂಗಾಲದಲ್ಲಿ ಯಾವುದೇ ಮೈತ್ರಿ ಏರ್ಪಡದೆ ಇರುವುದು ಟಿಎಂಸಿಗೆ ರಹದಾರಿಯಾಗುವ ಸಾಧ್ಯತೆ ಹೆಚ್ಚು.

ಮಮತಾಗೆ ಬಿಜೆಪಿಯ ಚಿಂತೆ
2016ರ ವಿಧಾನಸಭಾ ಚುನಾವಣೆ ಯಲ್ಲಿ ಬಿಜೆಪಿ ನೆಲೆ ಕಂಡುಕೊಂಡಿದೆ. ಇದು ಸಹಜವಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ನಿದ್ದೆ ಕೆಡಿಸಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಶೇ. 17 ಮತಗಳಿಸಿ, 2 ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಇದಾದ 2 ವರ್ಷಗಳ ಬಳಿಕ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತಗಳಿಕೆಯ ಪ್ರಮಾಣ ಶೇ. 10ಕ್ಕೆ ಇಳಿದರೂ 3 ಕ್ಷೇತ್ರಗಳಲ್ಲಿ ವಿಜಯದ ಪತಾಕೆ ಹಾರಿಸಿತ್ತು.

ಈ ಚುನಾವಣೆಯಲ್ಲಿ ಟಿಎಂಸಿ ಪ್ರಚಂಡ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಏರಿತ್ತು. 294 ವಿಧಾನಸಭಾ ಕ್ಷೇತ್ರಗಳ ಬಲಾಬಲವಿರುವ ಬಂಗಾಲದಲ್ಲಿ 211 ಸ್ಥಾನಗಳು ಟಿಎಂಸಿ ಪಾಲಾದರೆ, 74 ಕ್ಷೇತ್ರಗಳನ್ನು ಕಾಂಗ್ರೆಸ್‌-ಎಡರಂಗ ಹಂಚಿಕೊಂಡಿತ್ತು. ಆದರೆ ಬಿಜೆಪಿ 3 ಸ್ಥಾನಗಳಿಸುವ ಮೂಲಕ ವಿಪಕ್ಷ ಸ್ಥಾನದಲ್ಲಿ ಕುಳಿತುಕೊಂಡಿತ್ತು ಎಂಬುದು ಗಮನಾರ್ಹ.

ಮದರಿಹತ್‌, ಕಾಂಘಾಪುರ್‌ ಸದರ್‌, ಬಸಿನಾಬ್‌ ನಗರ್‌ ಅಧಿಕ ವೋಟ್‌ ಶೇರ್‌ ಗಳಿಸುವ ಮೂಲಕ ಕಮಲ ಪಾಳಯದಲ್ಲಿ ಗೆಲುವಿನ ನಗೆ ಕಂಡರು. ಉತ್ತರ ಬಂಗಾಳದ ಮದರಿಹತ್‌ ವಿಧಾನಸಭಾ ಕ್ಷೇತ್ರದಲ್ಲಿ 44 ಶೇ. ಮತಗಳಿಸುವ ಮೂಲಕ ಮನೋಜ್‌ ಟಿಗ್ಗ ಎಂಬವರು ದಾಖಲೆ ನಿರ್ಮಿಸಿದ್ದರು. ಇದು ಎಡರಂಗದ “ರೆವಲ್ಯೂಶನರಿ ಸೋಷಿಯಲ್‌ ಪಾರ್ಟಿ’ಯ ಕೈಯಲ್ಲಿತ್ತು.

ಬಳಿಕ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟಿಎಂಸಿ ಅನ್ನು ಕೆಲವೆಡೆ ಪರಾಜಯ ಗೊಳಿಸಿದರೆ, ಕೆಲವೆಡೆ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾ ಯಿತು. ವಿಧಾನಸಭೆಗೆ ನಡೆದ ಮಹಾಸ್ಥಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಎಂಸಿ ಜಯಗಳಿಸಿದ್ದರೆ, ಬಿಜೆಪಿ ಕೇವಲ 62,827 ಮತಗಳ ಅಂತರದಲ್ಲಿ ಸೋಲೊಪ್ಪಿಕೊಳ್ಳುವುದರ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಈ ಮೂಲಕ ಕಾಂಗ್ರೆಸ್‌ ಹಾಗೂ ಎಡರಂಗವನ್ನು ಮೂರನೇ ಸ್ಥಾನಕ್ಕೆ ದೂಡಿತ್ತು.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.