ಮತದಾನಕ್ಕೆ ಏನೇನು ದಾಖಲೆಗಳು?
Team Udayavani, Apr 6, 2019, 6:00 AM IST
ಉಡುಪಿ/ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತದಾನಕ್ಕೆ ತೆರಳುವಾಗ ಚುನಾವಣಾ ಆಯೋಗವು ನೀಡಿದ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ(ಎಪಿಕ್)ಯನ್ನು ತೋರಿಸಿ ಮತದಾನ ಮಾಡುವಂತೆ ತಿಳಿಸಲಾಗಿದೆ. ಒಂದು ವೇಳೆ ಗುರುತಿನ ಚೀಟಿ(ಎಪಿಕ್) ಹಾಜರುಪಡಿಸಲು ಅಸಾಧ್ಯವಾದಲ್ಲಿ ಇದರ ಬದಲು ಈ ಕೆಳಗಿನ 11 ವಿವಿಧ ಬಗೆಯ ದಾಖಲಾತಿಗಳ ಪೈಕಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿದೆ.
ಪಾಸ್‌ಪೋರ್ಟ್, ಚಾಲನಾ ಪರವಾನಿಗೆ, ಕೇಂದ್ರ/ರಾಜ್ಯ ಸರಕಾರ/ ಸಾರ್ವಜನಿಕ ಉದ್ದಿಮೆ ಸಂಸ್ಥೆ/ ಸಾರ್ವಜನಿಕ ನಿಯಂತ್ರಿತ ಸಂಸ್ಥೆಯು ತಮ್ಮ ಉದ್ಯೋಗಿಗಳಿಗೆ ನೀಡಿದ ಭಾವಚಿತ್ರ ಸಹಿತ ಸೇವಾ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್/ ಅಂಚೆ ಕಚೇರಿಯ ಪಾಸ್ ಬುಕ್, ಪಾನ್ ಕಾರ್ಡ್, ಎನ್‌ಪಿಆರ್ ಅಡಿಯಲ್ಲಿ ಆರ್‌ಜಿಐಯವರು ನೀಡಿದ ಸ್ಮಾರ್ಟ್ ಕಾರ್ಡ್, ಎಂ.ಎನ್.ಆರ್.ಇ.ಜಿ. ನೀಡಿರುವ ಜಾಬ್‌ಕಾರ್ಡ್, ಕಾರ್ಮಿಕ ಇಲಾಖೆ ನೀಡಿರುವ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಸಂಸತ್ ಸದಸ್ಯರು/ ಶಾಸಕ ರಿಗೆ ನೀಡಲಾದ ಅಧಿಕೃತ ಸರಕಾರಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಇವುಗಳಲ್ಲಿ ಯಾವುದಾದರೊಂದು ದಾಖಲೆಗಳನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.