ಬಿಹಾರ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾದ ಎಲ್ ಜೆಪಿ: NDAಗೆ ಆಘಾತ !
Team Udayavani, Oct 4, 2020, 6:18 PM IST
ಬಿಹಾರ: ಲೋಕ ಜನಶಕ್ತಿ ಪಕ್ಷವು (LJP) ಬಿಹಾರದಲ್ಲಿ ಮುಂಬರುವ ಮೂರು ಹಂತದ ವಿಧಾನಸಭಾ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಭಾನುವಾರ ನಡೆದ ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ದೂರವಾಗುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಒಂದೊಂದೆ ಮಿತ್ರಪಕ್ಷಗಳನ್ನು ಕಳೆದುಕೊಳ್ಳುತ್ತಿರುವ ಎನ್ ಡಿಎಗೆ ಈ ನಿರ್ಧಾರ ಆಘಾತ ನೀಡಿದೆ. ಸ್ಥಾನ ಹಂಚಿಕೆಯ ವಿಷಯವಾಗಿ ಅಸಮಾಧಾನ ಹೊಂದಿದ್ದ ಎಲ್ ಜೆಪಿ ಹೆಚ್ಚಿನ ಸ್ಥಾನದಲ್ಲಿ ಸ್ಪರ್ಧಿಸುವ ಬೇಡಿಕೆ ಮುಂದಿಟ್ಟಿತ್ತು. ಕಳೆದ ಬಾರಿ ಮಹಾಘಟಬಂಧನ್ ನಲ್ಲಿ ಗುರುತಿಸಿಕೊಂಡಿದ್ದ ಜೆಡಿಯು ಈ ಬಾರಿ ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವುದು ಎಲ್ ಜೆಪಿ-ಬಿಜೆಪಿ-ಜೆಡಿಯು ನಡುವಿನ ಸ್ಥಾನ ಹಂಚಿಕೆ ಬಿಕ್ಕಟ್ಟಿಗೆ ಕಾರಣವಾಗಿತ್ತು.
ಎಲ್ ಜೆಪಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ನೇತೃತ್ವದಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆದಿದೆ. ಆ ಮೂಲಕ 143 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ ಜೆಪಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ತಿಳಿದುಬಂದಿದೆ. ಏಕಾಂಗಿಯಾಗಿ ಸ್ಪರ್ಧಿಸುವುದನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾಲಿದ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ
ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್
ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?
ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ
ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.