ಶಿರಾ’ದಲ್ಲಿ ‘ರಾರಾ’ಜಿಸಿದ ಕಮಲ: ಬಿಎಸ್ ವೈ ಮತ್ತಷ್ಟು ಭದ್ರ, ಕೈ ರಣತಂತ್ರ ಛಿದ್ರ

Team Udayavani, Nov 10, 2020, 4:16 PM IST

ಶಿರಾ’ದಲ್ಲಿ ‘ರಾರಾ’ಜಿಸಿದ ಕಮಲ: ಬಿಎಸ್ ವೈ ಮತ್ತಷ್ಟು ಭದ್ರ, ಕೈ ರಣತಂತ್ರ ಛಿದ್ರ

ಮಣಿಪಾಲ: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಉಪಚುನಾವಣೆಯ ಫಲಿತಾಂಶ ಈಗ ಕಣ್ಣಮುಂದಿದೆ. ಎರಡೂ ಕ್ಷೇತ್ರಗಳನ್ನು ಗೆದ್ದುಕೊಂಡಿರುವ ಬಿಜೆಪಿಯು ರಾಜ್ಯದಲ್ಲಿ ತನ್ನ ನೆಲೆಯನ್ನು ಮತ್ತಷ್ಟು ವಿಸ್ತರಿಸಿದೆ. ಎಲ್ಲಾ ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ತುಮಕೂರಿನ ಶಿರಾ ಕ್ಷೇತ್ರದಲ್ಲೂ ಕೇಸರಿ ಪತಾಕೆಯನ್ನು ಹಾರಿಸುವಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮಾಜಿ ಶಾಸಕ ಮುನಿರತ್ನ ಹ್ಯಾಟ್ರಿಕ್ ಸಾಧಿಸಿದ್ದಾರೆ. ಈ ಹಿಂದೆ ಎರಡು ಬಾರಿ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಿದ್ದ ಮುನಿರತ್ನ, ಈ ಬಾರಿ ಬಿಜೆಪಿ ಪಕ್ಷ ಸೇರಿ ಇಲ್ಲೂ ತಮ್ಮ ಗೆಲುವಿನ ಓಟ ಮುಂದುವರಿಸಿದ್ದಾರೆ.

2018ರ ಶಿರಾ ಚುನಾವಣೆಯಲ್ಲಿ ಶೇ.10ರಷ್ಟೂ ಮತ ಪಡೆಯಲು ವಿಫಲವಾಗಿದ್ದ ಬಿಜೆಪಿ ಈ ಬಾರಿ ಜಯ ಸಾಧಿಸಿದ್ದು ಹಲವು ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಉಲ್ಟಾ ಮಾಡಿದೆ. ಹಿರಿಯ ರಾಜಕಾರಣಿ, ಮಾಜಿ ಸಚಿವ ಟಿಬಿ ಜಯಚಂದ್ರ ಅವರನ್ನು ಸೋಲಿಸಿ ಬಿಜೆಪಿಗೆ ಇತ್ತೀಚೆಗಷ್ಟೇ ಸೇರ್ಪಡೆಯಾದ ರಾಜೇಶ್ ಗೌಡ ವಿಧಾನಸಭೆ ಪ್ರವೇಶಿಸುವ ಅವಕಾಶ ಪಡೆದಿದ್ದಾರೆ.

ಮತಬ್ಯಾಂಕ್ ವಿಭಜನೆ

ಆರ್.ಆರ್. ನಗರ ಕ್ಷೇತ್ರದಲ್ಲಿ ಒಕ್ಕಲಿಗರು ಪ್ರಮುಖ ಮತದಾರರು. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅದೇ ಸಮುದಾಯಕ್ಕೆ ಸೇರಿದವರು. ಆದರೆ ಜೆಡಿಎಸ್ ಕೂಡಾ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೃಷ್ಣಮೂರ್ತಿಗೆ ಟಿಕೆಟ್ ನೀಡಿದ್ದರಿಂದ ಅಲ್ಲಿ ಸಮುದಾಯದ ಮತಗಳು ಒಡೆದು ಮುನಿರತ್ನಗೆ ಲಾಭವಾಯಿತು ಎನ್ನುವ ಮಾತುಗಳು ಕೇಳಿಬರುತ್ತಿದೆ.

ಮುನಿರತ್ನ

ಇದನ್ನೂ ಓದಿ:ಹಣದ ಹೊಳೆ ಹರಿಸಿ, ಅಧಿಕಾರ ದುರುಪಯೋಗ ಮಾಡಿ ಬಿಜೆಪಿ ಗೆದ್ದಿದೆ: ಸಿದ್ದರಾಮಯ್ಯ

ಶಿರಾ ಕ್ಷೇತ್ರದಲ್ಲಿ ಮೂರು ಅಭ್ಯರ್ಥಿಗಳೂ ಅಲ್ಲಿನ ಪ್ರಮುಖ ಕುಂಚಿಟಿಗ ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಹೀಗಾಗಿ ಒಂದು ಸಮುದಾಯ ಸಂಪೂರ್ಣವಾಗಿ ಒಂದು ಪಕ್ಷದ ಬೆನ್ನಿಗೆ ನಿಲ್ಲಲು ಸಾಧ್ಯವಾಗಿಲ್ಲ.

ವಿಜಯ ಶಕ್ತಿ

ಶಿರಾ

ಸುಮಾರು ಎರಡು ವಾರಗಳ ಕಾಲ ಶಿರಾದಲ್ಲಿ ಮೊಕ್ಕಾಂ ಹೂಡಿದ್ದ ಬಿಎಸ್ ವೈ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಮ್ಯಾಜಿಕ್ ಮಾಡಿದ್ದಾರೆ. ಕಳೆದ ವರ್ಷ ಮಂಡ್ಯದ ಕೆ ಆರ್ ಪೇಟೆ ಚುನಾವಣೆಯಂತೆ ಬಿಜೆಪಿ ನೆಲೆ ಇಲ್ಲದ ಶಿರಾ ಕ್ಷೇತ್ರದಲ್ಲಿ ಗೆಲುವು ತಂದಿತ್ತಿದ್ದಾರೆ. ಇದರೊಂದಿಗೆ ಕರ್ನಾಟಕದ ಪಾಲಿಗೆ ಚುನಾವಣಾ ಮಾಸ್ಟರ್ ಆಗಿ ಮೂಡಿಬಂದಿದ್ದಾರೆ.

ಇದನ್ನೂ ಓದಿ: ಶಿರಾದಲ್ಲಿ ‘ವಿಜಯ’: ಕಲ್ಪತರು ನಾಡಿನಲ್ಲಿ ಕಮಲ ಅರಳಿಸಿದ ಡಾ.ರಾಜೇಶ್ ಗೌಡ

ಕಾಂಗ್ರೆಸ್ ಒಳಪೆಟ್ಟು

ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಒಳಪೆಟ್ಟುಗಳು ಕೆಲಸ ಮಾಡಿದೆ ಎನ್ನಲಾಗುತ್ತಿದೆ. ರಾಜ್ಯ ರಾಜಕಾರಣದಲ್ಲಿ ಹಿಡಿತ ಸಾಧಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯತ್ನದಲ್ಲಿದ್ದಾರೆ. ಹೀಗಾಗಿ ಆರ್.ಆರ್.ನಗರದಲ್ಲಿ ಸಿದ್ದರಾಮಯ್ಯಗೆ ಇಷ್ಟವಿಲ್ಲದೇ ಇದ್ದರೂ ಡಿಕೆಶಿ ಅವರು ಕುಸುಮಾ ಅವರನ್ನು ಕರೆತಂದು ಟಿಕೆಟ್ ನೀಡಿದ್ದರು. ಶಿರಾದಲ್ಲಿ ಹೈಕಮಾಂಡ್ ಹೇಳುವ ಮೊದಲೇ ಸಿದ್ದರಾಮಯ್ಯ ಅವರು ಟಿ.ಬಿ ಜಯಚಂದ್ರ ಅವರ ಹೆಸರನ್ನು ಘೋಷಿಸಿದ್ದರು ಎನ್ನಲಾಗಿದೆ. ಇದೆಲ್ಲಾ ಕಾಂಗ್ರೆಸ್ ಸೋಲಿಗೆ ಕಾರಣವಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.