![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Nov 27, 2021, 11:37 AM IST
ಜೈಪುರ್:ಐಶಾರಾಮಿ ಹೋಟೆಲ್ ನಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ ರೂಂನೊಳಗಿದ್ದ ಎರಡು ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿರುವ ಘಟನೆ ಜೈಪುರದಲ್ಲಿ ನಡೆದಿರುವುದಾಗಿ ಪೊಲೀಸರು ಶುಕ್ರವಾರ(ನವೆಂಬರ್ 26) ತಿಳಿಸಿದ್ದಾರೆ.
ಇದನ್ನೂ ಓದಿ:ಮುದ್ದೇಬಿಹಾಳ: ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ಭೇದಿಸಿದ ಪೊಲೀಸರು
ಮುಂಬಯಿ ಮೂಲದ ಉದ್ಯಮಿ ರಾಹುಲ್ ಭಾಟಿಯಾ ಅವರ ಮಗಳ ವಿವಾಹವನ್ನು ಆಯೋಜಿಸಿದ್ದ ಜೈಪುರದ ಹೋಟೆಲ್ ಕ್ಲಾರ್ಕ್ಸ್ ಅಮಿರ್ ನಲ್ಲಿ ಈ ಕಳವು ಘಟನೆ ನಡೆದಿದೆ.
ಐಶಾರಾಮಿ ಹೋಟೆಲ್ ನ ಏಳನೇ ಅಂತಸ್ತಿನ ರೂಂನಲ್ಲಿ ಭಾಟಿಯಾ ಮತ್ತು ಕುಟುಂಬ ಸದಸ್ಯರು ವಾಸ್ತವ್ಯ ಹೂಡಿದ್ದರು. ರೂಂನಲ್ಲಿ ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ವಜ್ರಾಭರಣ ಹಾಗೂ 95 ಸಾವಿರ ರೂಪಾಯಿ ನಗದು ಇತ್ತು. ಭಾಟಿಯಾ ಮತ್ತು ಕುಟುಂಬ ಸದಸ್ಯರು ಹೋಟೆಲ್ ನ ಸಭಾಂಗಣದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ವಜ್ರಾಭರಣ ಮತ್ತು ನಗದನ್ನು ಕದ್ದೊಯ್ದಿದ್ದಾರೆ ಎಂದು ಜವಾಹರ್ ಸರ್ಕಲ್ ನ ಠಾಣಾಧಿಕಾರಿ ರಾಧಾರಮಣ್ ಗುಪ್ತಾ ಪಿಟಿಐಗೆ ತಿಳಿಸಿದ್ದಾರೆ.
ಹೋಟೆಲ್ ಸಿಬಂದಿಯ ಸಹಕಾರದಿಂದಲೇ ಈ ಕಳ್ಳತನ ನಡೆದಿದೆ ಎಂದು ರಾಹುಲ್ ಭಾಟಿಯಾ ತಮ್ಮ ದೂರಿನಲ್ಲಿ ಆರೋಪಿಸಿದ್ದು, ಹೋಟೆಲ್ ನಲ್ಲಿರುವ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಲಾಗಿದೆ. ಅಲ್ಲದೇ ಹೋಟೆಲ್ ಆಡಳಿತ ಮಂಡಳಿ ಮತ್ತು ಸಿಬಂದಿಗಳ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.