India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

ರಹಸ್ಯವಾಗಿ ಜೀವನ ಸಾಗಿಸುವ ಕಾಲ ಬರುತ್ತದೆ ಎಂಬುದನ್ನು ಊಹಿಸಿರಲಿಲ್ಲ

Team Udayavani, Nov 14, 2024, 5:37 PM IST

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

ಕಳೆದ ಐದಾರು ತಿಂಗಳ ಹಿಂದೆ ಎರಡು ಸೂಟ್‌ ಕೇಸ್‌ ಗಳನ್ನು ಹಿಡಿದುಕೊಂಡು ಮಹಿಳೆಯೊಬ್ಬಳು ಕಾರಿನಿಂದ ಕೆಳಗಿಳಿಯುತ್ತಿರುವ ದೃಶ್ಯದ ವಿಡಿಯೋ  ವೈರಲ್‌ ಆಗಿತ್ತು. ಹೌದು ಇದು ಬೇರೆ ಯಾರೂ ಅಲ್ಲ, ಬಾಂಗ್ಲಾದೇಶದಿಂದ ಪದಚ್ಯುತಗೊಂಡ ಶೇಖ್‌ ಹಸೀನಾ ಅವರದ್ದು! ಇದೀಗ ಹಸೀನಾ ಭಾರತದಲ್ಲಿ ನಿಗೂಢವಾಗಿ ಕಾಲಕಳೆಯುತ್ತಿದ್ದಾರೆ.

ಆರಂಭದಲ್ಲಿ ಶೇಖ್‌ ಹಸೀನಾ ಬೇರೆ ದೇಶದಲ್ಲಿ ಆಶ್ರಯ ಪಡೆಯಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಕಳೆದ ಆಗಸ್ಟ್‌ 5ರಂದು ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಲವಂತದಿಂದ ದೇಶ ತೊರೆಯುವಂತೆ ಮಾಡಿದ್ದು, ನಂತರ ಹಸೀನಾ ಭಾರತದಲ್ಲಿ ನಿರಾಶ್ರಿತರಾಗಿ ಆಶ್ರಯ ಪಡೆದಿದ್ದರು.

ಇದೀಗ ಅವಾಮಿ ಲೀಗ್‌ ಪಕ್ಷದ ವರಿಷ್ಠೆ. ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಭಾರತದಲ್ಲಿ ಠಿಕಾಣಿ ಹೂಡಿ ಇಂದಿಗೆ ಬರೋಬ್ಬರಿ 100 ದಿನಗಳಾಗಿವೆ ಎಂದು ವರದಿ ವಿವರಿಸಿದೆ. ಶೇಖ್‌ ಹಸೀನಾ ವಾಸ್ತವ್ಯ ರಹಸ್ಯವಾಗಿ ಇಡಲಾಗಿತ್ತು.

ಕೆಲವು ಮಾಧ್ಯಮಗಳ ವರದಿ ಪ್ರಕಾರ, ಶೇಖ್‌ ಹಸೀನಾ ದೆಹಲಿಯ ಬಿಗಿ ಭದ್ರತೆಯ ಪ್ರದೇಶದಲ್ಲಿನ ಬಂಗಲೆಯೊಂದರಲ್ಲಿ ವಾಸ್ತವ್ಯ ಹೂಡಿದ್ದು, 24×7 ಬಂದೋಬಸ್ತ್‌ ನೀಡಲಾಗಿದೆ ಎಂದು ವರದಿ ವಿವರಿಸಿದೆ. ಶೇಖ್‌ ಹಸೀನಾಗೆ ದೆಹಲಿ ಅಪರಿಚಿತವಲ್ಲ. ಯಾಕೆಂದರೆ 1975ರಲ್ಲಿ ಬಾಂಗ್ಲಾದೇಶದ ಅಧ್ಯಕ್ಷ, ಹಸೀನಾ ತಂದೆ ಮುಜಿಬುರ್‌ ರಹಮಾನ್‌ ಅವರನ್ನು ಹತ್ಯೆಗೈದ ಸಂದರ್ಭದಲ್ಲಿಯೂ ಹಸೀನಾ ಮತ್ತು ಸಹೋದರಿ ದೆಹಲಿಯಲ್ಲಿ ಆಶ್ರಯ ಪಡೆದಿದ್ದರು.

ಕ್ಷಿಪ್ರ ಕ್ರಾಂತಿಯಲ್ಲಿ ಸೇನಾ ಅಧಿಕಾರಿಗಳ ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಶೇಖ್‌ ಹಸೀನಾ ಮತ್ತು ಸಹೋದರಿ ಶೇಖ್‌ ರೆಹಾನಾ ಅಂದು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದರು. 1975ರಿಂದ 1981ರವರೆಗೆ ಹಸೀನಾ, ತನ್ನ ಮಕ್ಕಳು, ಪತಿ ಹಾಗೂ ಸಹೋದರಿ ಜತೆ ಸುಮಾರು ಆರು ವರ್ಷಗಳ ಕಾಲ ಯಾರಿಗೂ ಗುರುತು ಪತ್ತೆಹಚ್ಚದ ರೀತಿಯಲ್ಲಿ ವಾಸವಾಗಿದ್ದರು.

ನಂತರ ಬಾಂಗ್ಲಾದೇಶಕ್ಕೆ ಮರಳಿದ್ದ ಶೇಖ್‌ ಹಸೀನಾ ರಾಜಕೀಯ ಪಕ್ಷದ ಮುಖ್ಯಸ್ಥರಾಗಿ ಸಾಕಷ್ಟು ಶ್ರಮಪಟ್ಟ ಬಳಿಕ ದೇಶದ ಪ್ರಧಾನಿ ಹುದ್ದೆಗೆ ಏರಿದ್ದರು. ತನ್ನ ಆಪತ್ಕಾಲದಲ್ಲಿ ನೆರವು ನೀಡಿದ ಭಾರತಕ್ಕೆ ಹಸೀನಾ ಅಭಿನಂದನೆ ತಿಳಿಸಿದ್ದರು.

ನಾನು ಎರಡನೇ ಬಾರಿ ಭಾರತದಲ್ಲಿ ರಹಸ್ಯವಾಗಿ ಜೀವನ ಸಾಗಿಸುವ ಕಾಲ ಬರುತ್ತದೆ ಎಂಬುದನ್ನು ಊಹಿಸಿರಲಿಲ್ಲ ಎಂದು ಹಸೀನಾ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಇಂಡಿಯಾ ಟುಡೇ ಮೂಲಗಳ ಪ್ರಕಾರ, ಶೇಖ್‌ ಹಸೀನಾ ಅವರ ಭದ್ರತೆಗಾಗಿ ಎನ್‌ ಎಸ್‌ ಜಿ ಕಮಾಂಡೋಸ್‌ ಗಳನ್ನು ನಿಯೋಜಿಸಲಾಗಿದೆ. ಬಾಹ್ಯವಾಗಿಯೂ ಬಿಗಿ ಭದ್ರತೆ ನೀಡಲಾಗಿದೆ. ಏತನ್ಮಧ್ಯೆ ಭಾರತದಲ್ಲಿರುವ ಹಸೀನಾ ಬ್ರಿಟನ್‌ ನಲ್ಲಿ ಆಶ್ರಯ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ..

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank ಆಕ್ರೋಶ: ರಜಾಕಾರರ ದಾಳಿ & ಖರ್ಗೆ ಕುಟುಂಬದ ದುರಂತ, ಸಿಎಂ ಯೋಗಿ ಮಾತಿನ ಮರ್ಮವೇನು?

Priyank ಆಕ್ರೋಶ: ರಜಾಕಾರರ ದಾಳಿ & ಖರ್ಗೆ ಕುಟುಂಬದ ದುರಂತ, ಸಿಎಂ ಯೋಗಿ ಮಾತಿನ ಮರ್ಮವೇನು?

Explainer: M4 ರೈಫಲ್ಸ್‌ ಜಮ್ಮು-ಕಾಶ್ಮೀರ ಉಗ್ರರಿಗೆ ಹೇಗೆ ತಲುಪುತ್ತಿದೆ, M4 ಎಷ್ಟು ಮಾರಕ?

Explainer: M4 ರೈಫಲ್ಸ್‌ ಜಮ್ಮು-ಕಾಶ್ಮೀರ ಉಗ್ರರಿಗೆ ಹೇಗೆ ತಲುಪುತ್ತಿದೆ, M4 ಎಷ್ಟು ಮಾರಕ?

ಜಗತ್ತಿನ ಐದು ನಿಷೇಧಿತ ಸ್ಥಳಗಳು…ಸಾರ್ವಜನಿಕರಿಂದ ದೂರ ಇರುವ ಈ ಪ್ರದೇಶಗಳ ವಿಶೇಷತೆ ಏನು?

ಜಗತ್ತಿನ ಐದು ನಿಷೇಧಿತ ಸ್ಥಳಗಳು…ಸಾರ್ವಜನಿಕರಿಂದ ದೂರ ಇರುವ ಈ ಪ್ರದೇಶಗಳ ವಿಶೇಷತೆ ಏನು?

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.