ವನ್ಯಜೀವಿ ದಾಳಿಯಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ 10 ಲ. ರೂ. ಪರಿಹಾರ
Team Udayavani, Sep 27, 2019, 5:32 AM IST
ಬೆಂಗಳೂರು: ವನ್ಯಜೀವಿ ಮತ್ತು ಮಾನವ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬದವರಿಗೆ ನೀಡುವ ಪರಿಹಾರ ಮೊತ್ತವನ್ನು 10 ಲ. ರೂ. ಗಳಿಗೆ ಏರಿಕೆ ಮಾಡುವ ಪ್ರಸ್ತಾವಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಅಧ್ಯಕ್ಷರಾದ ಸಿಎಂ ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಗುರುವಾರ ನಡೆದ 12ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿದ್ದ ವನ್ಯಜೀವಿ ಮಂಡಳಿ ಸದಸ್ಯರಾದ ಸಂಜಯ್ ಗುಬ್ಬಿ, ಡಾ|ಎನ್.ಸಿ. ಶಿವಪ್ರಕಾಶ್ ಅವರು ಈ ವಿಷಯ ಪ್ರಸ್ತಾವಿಸಿ ವನ್ಯಜೀವಿ- ಮಾನವ ಸಂಘರ್ಷದಿಂದ ಪ್ರತಿ ವರ್ಷ ಹಲವರು ಮೃತಪಡುತ್ತಿದ್ದು, ಅವರಿಗೆ ನೀಡುತ್ತಿರುವ ಪರಿಹಾರ ಮೊತ್ತ ಕಡಿಮೆ ಇದೆ. ಹಾಗಾಗಿ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗೆ ಹೆಚ್ಚಳಕ್ಕೆ ಸೂಚನೆ ನೀಡಿದರು ಎಂದು ಮೂಲಗಳು ಹೇಳಿವೆ.
ಕರಡಿ ವನ್ಯಧಾಮ ಘೋಷಣೆ
ಹಾಸನ ವಿಭಾಗದ ಅರಸೀಕೆರೆ ವಲಯದ ಹಿರೇಕಲ್ಲುಗುಡ್ಡ, ರಾಮೇನಹಳ್ಳಿ, ಚಾಕನಕಟ್ಟೆ, ಗರುಡನಗಿರಿ ಅರಣ್ಯ ವ್ಯಾಪ್ತಿಯ ಸುಮಾರು 10,088.37 ಹೆಕ್ಟೇರ್ ಪ್ರದೇಶವನ್ನು “ಕರಡಿ ವನ್ಯಧಾಮ’ವನ್ನಾಗಿ ಘೋಷಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ.
ಭೂಗರ್ಭ ಸ್ಥಾವರ: ಅಧ್ಯಯನ
ಶರಾವತಿ ಜಲಾನಯನ ಪ್ರದೇಶದಲ್ಲಿರುವ ತಲಕಲಲೆ ಮತ್ತು ಗೇರುಸೊಪ್ಪ ಜಲಾಶಯದ ಮಧ್ಯದಲ್ಲಿ 2000 ಮೆ.ವ್ಯಾ. ವಿದ್ಯುತ್ ಉತ್ಪಾದನೆಗೆ ಭೂಗರ್ಭ ಸ್ಥಾವರ ಸ್ಥಾಪನೆಗೆ ಸರ್ವೆ ಮತ್ತು ಭೂಗರ್ಭ ಶಿಲಾ ರಚನೆ ಅಧ್ಯಯನ ಕೈಗೊಳ್ಳಲು ಮಂಡಳಿ ಸಭೆ ಅನುಮತಿ ನೀಡಿದೆ.
ಮಡಿಕೇರಿ ಬ್ರಹ್ಮಗಿರಿ ವನ್ಯಜೀವಿ ವಿಭಾಗದ ಬ್ರಹ್ಮಗಿರಿ ವನ್ಯಧಾಮದ ಉರಟಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಕೇರಳ ಸರಕಾರದಿಂದ ಕೂಟುಹೊಳೆ ಸೇತುವೆ ನಿರ್ಮಾಣಕ್ಕಾಗಿ 0.177 ಹೆಕ್ಟೇರ್ ಅರಣ್ಯ ಪ್ರದೇಶ ನೀಡಲು ಒಪ್ಪಿಗೆ ನೀಡಲಾಗಿದೆ. ಆದರೆ ಮರ ಕಡಿಯದಂತೆ ಷರತ್ತು ವಿಧಿಸಲಾಗಿದೆ. ಕಾರ್ಕಳ ತಾಲೂಕಿನ ನೆಲ್ಲಿಗುಡ್ಡ ಕ್ರಾಸ್‌ನಿಂದ ಕೂಡ್ಲುವರೆಗೆ ಸಂಪರ್ಕಿಸುವ ರಸ್ತೆಯು ಸೋಮೇಶ್ವರ ವನ್ಯ ಜೀವಿಧಾಮದಲ್ಲಿ 9 ಕಿ.ಮೀ. ಡಾಮರು ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಪರಿವರ್ತಿಸಲು ಸಹ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ಹೇಳಿವೆ. ಆನೆಗಳನ್ನು ಹಿಮ್ಮೆಟ್ಟಿಸುವ ಗಾರ್ಡ್‌ಗಳ ವೇತನ ಹೆಚ್ಚಳ ಮಾಡಬೇಕೆಂಬ ಅರಣ್ಯ ಇಲಾಖೆ ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.