ಮದ್ರಾಸ್ ಐಐಟಿಯ 12 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢ
Team Udayavani, Apr 21, 2022, 6:37 PM IST
ಚೆನ್ನೈ : ದೇಶದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಗರಿಗೆದರುತ್ತಿದ್ದು ಮದ್ರಾಸ್ ಐಐಟಿಯಲ್ಲಿ ಕೋವಿಡ್ ಪ್ರಕರಣಗಳು ಬೆಳಕಿಗೆ ಬಂದಿವೆ. ಒಟ್ಟು 12 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃದಪಟ್ಟಿದೆ.
ವಿದ್ಯಾರ್ಥಿಗಳಲ್ಲಿ ಕೋವಿಡ್ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ತಮ್ಮ ಕಚೇರಿಯ ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲು ಸೂಚಿಸಿದ್ದಾರೆ.
ಕಾಲೇಜಿನ ಕೆಲ ವಿದ್ಯಾರ್ಥಿಗಳಲ್ಲಿ ಕೆಮ್ಮು, ಜ್ವರ ಇದ್ದ ಹಿನ್ನೆಲೆಯಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು ಇದರಲ್ಲಿ 12 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದೆ, ಈಗಾಗಲೇ ಸೋಂಕು ದೃಢಪಟ್ಟ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಡಳಿತ ಮಂಡಳಿ ಹೇಳಿದೆ.
ಕಳೆದ ಕೆಲವು ದಿನಗಳಿಂದ ದೆಹಲಿ, ಕೇರಳ, ಹರಿಯಾಣ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿದೆ.
ತಮಿಳುನಾಡಿನಲ್ಲಿ ಬುಧವಾರ 31 ಹೊಸ ಕೋವಿಡ್ ಪ್ರಕರಣಗಳನ್ನು ವರದಿಯಾಗಿವೆ, ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದ ಆರೋಗ್ಯ ಕಾರ್ಯದರ್ಶಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.