144 ಸೆಕ್ಷನ್‌ ಜಾರಿ: ವಿಸ್ತೃತ ವಿಚಾರಣೆ ನಡೆಯಬೇಕಿದೆ ಎಂದ ಹೈಕೋರ್ಟ್‌

ವಿಚಾರಣೆ ಜ.7ಕ್ಕೆ ಮುಂದೂಡಿಕೆ

Team Udayavani, Dec 20, 2019, 9:35 PM IST

High-court-Karnataka-New

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ನಡೆಯುವ ಹಿನ್ನೆಲೆಯಲ್ಲಿ ನಗರಾದ್ಯಂತ ಸೆಕ್ಷನ್‌ 144 ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಡಿ.18ರಂದು ಹೊರಡಿಸಿದ್ದ ಆದೇಶದ “ಕಾನೂನು ಬದ್ಧತೆ ಹಾಗೂ ಸಿಂಧುತ್ವದ’ ಕುರಿತು ವಿಸ್ತೃತ ವಿಚಾರಣೆ ನಡೆಸುವ ಅವಶ್ಯಕತೆಯಿದೆ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

“ಯಾವ ವಿಷಯದ ಬಗ್ಗೆ ಪ್ರತಿಭಟನೆ ನಡೆಯುವುದಿತ್ತು ಅನ್ನುವುದು ನಮಗೆ ಸಂಬಂಧವಿಲ್ಲ. ಆದರೆ, 144 ಸೆಕ್ಷನ್‌ ಜಾರಿಗೊಳಿಸಲು ತೆಗೆದುಕೊಳ್ಳಲಾದ ನಿರ್ಣಯದ ಪ್ರಕ್ರಿಯೆಯಲ್ಲಿ ನಿಸ್ಸಂದೇಹವಾಗಿ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲಾಗಿರುವು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದು ಮುನ್ನೆಚ್ಚರಿಕಾ ಕ್ರಮ ಆಗಿರಬಹುದು. ಆದರೆ, ನಾಗರಿಕರ ಮೂಲಭೂತ ಹಕ್ಕಗಳ ಮೇಲೆ ಪರಿಣಾಮ ಬೀರಿದೆ’.

ಅಲ್ಲದೇ, 144 ಸೆಕ್ಷನ್‌ ಜಾರಿಗೊಳಿಸುವ ಮುನ್ನ ಅದಕ್ಕೆ ಬೇಕಾದ “ಅಭಿಪ್ರಾಯ ಸಂಗ್ರಹಣೆ’ ಮಾಡಿರುವ ಅಂಶ ಆದೇಶದಲ್ಲಿ ಗೋಚರವಾಗುತ್ತಿಲ್ಲ. ಆದ್ದರಿಂದ ಪ್ರತಿಭಟನೆಗೆ ನೀಡಲಾದ ಅನುಮತಿಯನ್ನು 114 ಸೆಕ್ಷನ್‌ ಜಾರಿ ಆದೇಶದ ಮೂಲಕ ಹಿಂದಕ್ಕೆ ಪಡೆಯಬಹುದೇ? ಅದೇ ರೀತಿ ಅನುಮತಿ ವಾಪಸ್‌ ಪಡೆಯುವ ಮೊದಲು ಹಾಗೂ ನಂತರ ಅರ್ಜಿದಾರರಿಗೆ ಅವಕಾಶಗಳನ್ನು ನೀಡಲಾಗಿತ್ತೇ? ಈ ಎಲ್ಲ ಅಂಶಗಳ ಕಾನೂನು ಪರಾಮರ್ಶೆ ನಡೆಯಬೇಕಾಗಿರುವುದರಿಂದ ಈ ಎಲ್ಲ ಅರ್ಜಿಗಳ ವಿಸ್ತೃತಗಳನ್ನು ವಿಸ್ತೃತವಾಗಿ ವಿಚಾರಣೆ ನಡೆಸುವ ಅವಶ್ಯಕತೆಯಿದೆ ಎಂದು ಹೈಕೋರ್ಟ್‌ ಹೇಳಿತು.

ನಗರ ಪೊಲೀಸ್‌ ಆಯುಕ್ತರು ಹೊರಡಿಸಿದ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಪ್ರೊ. ರಾಜೀವಗೌಡ, ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಪಿಯುಸಿಎಲ್‌ ಸಂಘಟನೆ, ಕವಿತಾ ಲಂಕೇಶ್‌, ಲಿಯೋ ಸಾಲ್ಡಾನಾ, ಅಶ್ವಿ‌ನಿ ಓಬಳೇಶ್‌ ಮತ್ತಿತರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಹಾಗೂ ನ್ಯಾ. ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಾದ ಪ್ರತಿವಾದ ಆಲಿಸಿದ ಬಳಿಕ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಅನುಮತಿ ನೀಡಿ ನಂತರ ಅವುಗಳನ್ನು ಹತ್ತಿಕ್ಕಲು ಬೆಂಗಳೂರು ನಗರದಲ್ಲಿ ಸೆಕ್ಷನ್‌ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮಕ್ಕೆ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಆದರೆ, ನಿಷೇಧಾಜ್ಞೆ ಜಾರಿ ಆದೇಶಕ್ಕೆ ತಡೆ ನೀಡಬೇಕು ಎಂಬ ಅರ್ಜಿದಾರರ ಮನವಿ ಒಪ್ಪಿಲ್ಲ. ಹೇಗಿದ್ದರೂ ಶನಿವಾರ (ಡಿ.21) ನಿಷೇಧಾಜ್ಞೆ ಅವಧಿ ಮುಗಿಯಲಿದೆ. ಹಾಗಾಗಿ, ತಡೆ ನೀಡಲಾಗದು ಎಂದು ಹೇಳಿತು. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ಅರ್ಜಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು ಜ.7ಕ್ಕೆ ಮುಂದೂಡಿತು.

ಹೊಸದಾಗಿ ಅರ್ಜಿ ಸಲ್ಲಿಸಿ: ಶಾಂತಿಯುತ ಪ್ರತಿಭಟನೆ ಅಥವಾ ರ್ಯಾಲಿ ನಡೆಸಲು ಅನುಮತಿ ಕೋರಿ ಅರ್ಜಿದಾರರು ಮೂರು ದಿನಗಳಲ್ಲಿ ಪೊಲೀಸರಿಗೆ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಅದನ್ನು ಪರಿಶೀಲಿಸಿ, ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್‌ ನೀಡಿತುವ ತೀರ್ಪು ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ಆಗದಂತೆ ಅರ್ಜಿ ಸಲ್ಲಿಸಿದ 3 ದಿನಗಳಲ್ಲಿ ಪೊಲೀಸರು ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿತು.

ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರೊ. ರವಿವರ್ಮ ಕುಮಾರ್‌, ಆದಿತ್ಯ ಸೋಂಧಿ ವಾದ ಮಂಡಿಸಿದರು.

ಹೊಸದಾಗಿ ಆದೇಶ ಹೊರಡಿಸಬೇಕು
ನಗರದಲ್ಲಿ ನಿಷೇಧಾಜ್ಞೆ ಹೇರಿದ ಅವಧಿ ಡಿ.21ಕ್ಕೆ ಮುಗಿಯಲಿದ್ದು, ಅದನ್ನು ವಿಸ್ತರಿಸುವ ಸಾಧ್ಯತೆಗಳಿವೆ ಎಂದು ಅರ್ಜಿದಾರರ ಪರ ವಕೀಲರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಹಾಗಾಗುವುದಿಲ್ಲ. ಡಿ.18ರ ಆದೇಶ ಡಿ.21ಕ್ಕೆ ಕೊನೆಗೊಳ್ಳಲಿದೆ. ಒಂದೊಮ್ಮೆ ನಿಷೇಧಾಜ್ಞೆ ಮುಂದುವರಿಸುವ ಅಥವಾ ವಿಸ್ತರಿಸುವ ಪ್ರಮೆಯ ಎದುರಾದರೆ, ಸೂಕ್ತ ವರದಿಗಳನ್ನು ಪಡೆದುಕೊಂಡ ಬಳಿಕ ಅಗತ್ಯವೆನಿಸಿದರಷ್ಟೇ ನಿಷೇಧಾಜ್ಞೆ ಹೇರುವ ಬಗ್ಗೆ ಹೊಸದಾಗಿ ಆದೇಶ ಹೊರಡಿಸಬೇಕು ಎಂದು ನ್ಯಾಯಪೀಠ ತಾಕೀತು ಮಾಡಿತು.

ಎಲ್ಲಾ ಪ್ರತಿಭಟನೆಗಳು ಹಿಂಸಾರೂಪ ಪಡೆಯಲಿವೆಯೇ? ಸಿಜೆ ಪ್ರಶ್ನೆ
ಇದಕ್ಕೂ ಮುನ್ನ ಬೆಳಿಗ್ಗೆ ವಿಚಾರಣೆ ನಡೆದ ವಿಚಾರಣೆ ವೇಳೆ ಮುಖ್ಯನ್ಯಾಯಮೂರ್ತಿಗಳು, “”ಪ್ರತಿಯೊಂದು ಪ್ರತಿಭಟನೆಯೂ ಹಿಂಸಾರೂಪ ಪಡೆಯಲಿದೆಯೇ ಎಂಬ ಊಹೆಯ ಮೇರೆಗೆ ಸರ್ಕಾರ ನಿಷೇಧಾಜ್ಞೆ ಜಾರಿಗೊಳಿಸಿದೆಯೇ? ”ಎಂದು ಪ್ರಶ್ನಿಸಿತು. ಅಲ್ಲದೆ, ನೀವು ಪ್ರತಿಯೊಂದು ಪ್ರತಿಭಟನೆಯನ್ನು ನಿಷೇಧಿಸುತ್ತೀರಾ? ಸರ್ಕಾರದ‌ದ ನೀತಿಗಳ ವಿರುದ್ಧ ಯಾರೂ ಧ್ವನಿ ಎತ್ತುವಂತಿಲ್ಲವೇ? ಯಾವ ನಿಷೇಧಾಜ್ಞೆ ಜಾರಿಗೊಳಿಸುವ ಮೂಲಕ ಪ್ರತಿಭಟನೆಗೆ ಅನುಮತಿ ನೀಡಿದ್ದನ್ನು ರದ್ದುಗೊಳಿಸಿದ್ದೀರಿ, ಆ ಮೂಲಕ ಅವರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಿದ್ದೀರಿ”ಎಂದು ಪ್ರಶ್ನಿಸಿದರು

ಕಾನೂನು-ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ: ಅಡ್ವೋಕೇಟ್‌ ಜನರಲ್‌
ವಿಚಾರಣೆ ವೇಳೆ, ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿ ನಾಗರಿಕರ ಸಂವಿಧಾನದತ್ತ ಮೂಲಭೂತ ಹಕ್ಕುಗಳ ರಕ್ಷಣೆಯ ಜೊತೆಗೆ ಗಲಭೆಗಳು ನಡೆಯಬಾರದು, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಆಗಬಾರದು, ಸಾರ್ವಜನಿಕರ ಆಸ್ತಿ-ಪಾಸ್ತಿಗೆ ನಷ್ಟ ಆಗದಂತೆ ನೋಡಿಕೊಳ್ಳುವ ಸಾಂವಿಧಾನಿಕ ಜವಾಬ್ದಾರಿಯೂ ರಾಜ್ಯ ಸರ್ಕಾರದ ಮೇಲಿದೆ.

ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಶಾಂತಿಯುತ ಪ್ರತಿಭಟನೆಗೆ ಅಡ್ಡಿಯೂ ಇಲ್ಲ, ಅಭ್ಯಂತರವೂ ಇಲ್ಲ. ಆದರೆ, ಪ್ರತಿಭಟನೆಯಲ್ಲಿ ಸಮಾಜಘಾತುಕ ಶಕ್ತಿಗಳು ನುಸುಳಿ ಗಲಾಟೆ ಮಾಡಬಹುದು ಎಂಬ ಬಗ್ಗೆ ಕಳೆದ ವಾರದಿಂದ ನಿರಂತರವಾಗಿ ಗುಪ್ತಚರ ಹಾಗೂ ಇನ್ನಿತರೆ ಮೂಲಗಳಿಂದ ಸಿಕ್ಕಿದ್ದ ಮಾಹಿತಿ ಆಧಾರದಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾಯ್ದೆಯ ಪರ-ವಿರೋಧ ಎರಡೂ ಕಡೆಯ ಪ್ರತಿಭಟನೆಗಳು ನಡೆಯಲಿದ್ದವು. ಈ ಹಿನ್ನೆಲೆಯಲ್ಲಿ ಆಯುಕ್ತರು ತೀರ್ಮಾನ ತೆಗೆದುಕೊಂಡಿದ್ದಾರೆ. ಅಷ್ಟಕ್ಕೂ ವಿಶೇಷ ಸಂದರ್ಭಗಳಲ್ಲಿ ಪ್ರತಿಭಟನೆಗೆ ಅನುಮತಿ ನೀಡಿದ ನಂತರವೂ ಸೆಕ್ಷನ್‌ 144 ಜಾರಿಗೊಳಿಸಬಹುದು ಎಂದು ಸರ್ಕಾರವನ್ನು ಸಮರ್ಥಿಸಿಕೊಂಡರು.

ಮಂಗಳೂರು ಘಟನೆಗೆ ವಿಷಾದ:
ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ಇಬ್ಬರು ಮೃತಪಟ್ಟಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ವಿಷಾದವಿದೆ. ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿಯವರು ಗುರುವಾರ ತಡ ರಾತ್ರಿವರೆಗೆ ಮುಸ್ಲಿಂ ಹಾಗೂ ಕ್ರೈಸ್ತ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ. ಪ್ರತಿಭಟನೆ ಹಿಂಸಾಚಾರದ ರೂಪ ಪಡೆಯಲು ಕೇರಳದಿಂದ ಬಂದವರು ಕಾರಣ ಎಂಬ ಶಂಕೆಯಿದೆ ಎಂದು ಹೈಕೋರ್ಟ್‌ ಮುಂದೆ ಹೇಳಿದ್ದರು.

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.