2 ವರ್ಷಗಳಿಂದ 1,700 ಕೋ.ರೂ. “ನರೇಗಾ ಬಾಕಿ’

ಕೇಂದ್ರದಿಂದ ಬಾರದ ಬಾಕಿ ಹಣ ಕಾರ್ಮಿಕರಿಗೆ ಸಿಗದ ಕೂಲಿ ಸಂಕಷ್ಟದಲ್ಲಿ ಕಾರ್ಮಿಕರು

Team Udayavani, Mar 30, 2020, 6:45 AM IST

2 ವರ್ಷಗಳಿಂದ 1,700 ಕೋ.ರೂ. “ನರೇಗಾ ಬಾಕಿ’

ಬೆಂಗಳೂರು: ಕೋವಿಡ್-19 ವೈರಸ್‌ ನಿಯಂತ್ರಿಸಲು ಕೇಂದ್ರ ಸರಕಾರ ದೇಶದ ಜನತೆಗೆ ಪ್ರೋತ್ಸಾಹ ಧನಗಳನ್ನು ಘೋಷಣೆ ಮಾಡುತ್ತಿದೆ. ಆದರೆ ಕಳೆದ ಎರಡು ವರ್ಷಗಳಿಂದ ರಾಜ್ಯದ ನರೇಗಾ ಕಾರ್ಮಿಕರಿಗೆ ನೀಡಬೇಕಿರುವ ಕೂಲಿ ಹಣ 1,744 ಕೋ. ರೂ. ನೀಡದೆ ಬಾಕಿ ಉಳಿಸಿಕೊಂಡಿದೆ. ಈಗ ರಾಜ್ಯಾದ್ಯಂತ ಲಾಕ್‌ಡೌನ್‌ ಜಾರಿಯಾಗಿರುವುದರಿಂದ ಇತ್ತ ಕೆಲಸವೂ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಂಥ ಸಂದರ್ಭದಲ್ಲಿ ನರೇಗಾ ಕಾರ್ಮಿಕರು ಹಳೆಯ ಬಾಕಿಯ ನಿರೀಕ್ಷೆಯಲ್ಲಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕಳೆದ ಎರಡು ದಿನಗಳ ಹಿಂದೆ ನರೇಗಾ ಕೂಲಿ ಕಾರ್ಮಿಕರಿಗೆ ಎರಡು ತಿಂಗಳುಗಳ ಕೂಲಿಯನ್ನು ಮುಂಗಡವಾಗಿಯೇ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಈಗಾಗಲೇ ದುಡಿದ ಕೂಲಿಯೂ ಬರದಿರುವುದರಿಂದ ಹಳೆಯ ಬಾಕಿಯನ್ನಾದರೂ ಸರಕಾರ ಮೊದಲು ನೀಡಲಿ ಎಂಬ ಬೇಡಿಕೆ ಕೂಲಿ ಕಾರ್ಮಿಕರದ್ದಾಗಿದೆ.
ರಾಜ್ಯ ಸರಕಾರವೂ ಕೂಡ ನರೇಗಾ ಕಾರ್ಮಿಕರ 755 ಕೋ. ರೂ. ಕೂಲಿ ಹಣ ಬಾಕಿ ಉಳಿಸಿಕೊಂಡಿದೆ. 2018-19 ನೇ ಸಾಲಿನ 32.81 ಕೋ.ರೂ. ಕೂಲಿ ಮತ್ತು 119.17 ಕೋ. ರೂ. ಸಾಮಗ್ರಿ ಖರೀದಿ ಹಣ, 2019-20 ನೇ ಸಾಲಿನ 53.61 ಕೋ. ರೂ. ಕೂಲಿ ಹಣ ಮತ್ತು 549.81 ಕೋ.ರೂ. ಸಾಮಗ್ರಿ ಹಣವನ್ನು ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದೆ.

ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ 2005 ರ ಸೆಕ್ಸೆನ್‌ 3(3)ರ ಪ್ರಕಾರ ವಾರಕ್ಕೊಮ್ಮೆ ಅಥವಾ ಹಾಜರಾತಿ ಮುಕ್ತಾಯಗೊಳಿಸಿದ 15 ದಿನಗಳಲ್ಲಿ ಕೂಲಿ ನೀಡಬೇಕೆಂಬ ನಿಯಮ ಇದೆ. ಆದರೂ ಕೇಂದ್ರ ಸರಕಾರ ನಿಗದಿತ ಸಮಯದಲ್ಲಿ ಕೂಲಿ ಹಣ ಬಿಡುಗಡೆ ಮಾಡದಿರುವುದರಿಂದ ಕಾರ್ಮಿಕರು ಸಂಕಷ್ಟ ಎದುರಿಸುವಂತಾಗಿದೆ.

ನರೇಗಾ ಯೋಜನೆ ಅಡಿಯಲ್ಲಿ 2015-16 ನಿಂದ ಇಲ್ಲಿಯವರೆಗೆ ರಾಜ್ಯ ಸರಕಾರ 3,513 ಕೋ.ರೂ. ಪಾವತಿಸಿದ್ದು, ಅದರಲ್ಲಿ ಕೇಂದ್ರ ಸರಕಾರ 3,097.10 ಕೋ. ರೂ. ಮರು ಪಾವತಿ ಮಾಡಿದೆ. ಇನ್ನೂ 416 .12 ಕೋ.ರೂ. ಗಳನ್ನು ಕೇಂದ್ರ ಸರಕಾರ ಮರು ಪಾವತಿ ಮಾಡಬೇಕಿದೆ.

ಗೊಂದಲದ ಆದೇಶ
ರಾಜ್ಯ ಸರಕಾರ ಈಗ ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ವೈಯಕ್ತಿಕವಾಗಿ ಯಾವುದೇ ಆ್ಯಕ್ಷನ್‌ ಪ್ಲಾನ್‌ ಇಲ್ಲದೇ ಕಾಮಗಾರಿ ಕೈಗೆತ್ತಿಕೊಳ್ಳಲು ಸರಕಾರ ಅವಕಾಶ ಕಲ್ಪಿಸಿ ಆದೇಶಿಸಿದೆ. ಇದು ಪಿಡಿಒ ಮತ್ತು ಪಂಚಾಯತ್‌ ಸದಸ್ಯರು ಬೇಕಾದವರಿಗೆ ಮಾತ್ರ ಅನುಕೂಲ ಕಲ್ಪಿಸಲು ಮಾಡಿಕೊಟ್ಟಂತಾಗುತ್ತದೆ ಎಂಬ ಆರೋಪ ಕೇಳಿ ಬರುತ್ತಿದೆ.

ಕೋವಿಡ್-19 ಭೀತಿ: ಕೂಲಿಗೆ ಕತ್ತರಿ
ನರೇಗಾ ಯೋಜನೆ ಅಡಿ ನೋಂದಾಯಿತ ಕೂಲಿ ಕಾರ್ಮಿಕರಿಗೆ ವಾರ್ಷಿಕ ನೂರು ದಿನಗಳ ಕೂಲಿ ಒದಗಿಸಲಾಗುತ್ತದೆ. ಈ ವರ್ಷ ರಾಜ್ಯದಲ್ಲಿ ಪ್ರವಾಹ ಉಂಟಾಗಿರುವುದರಿಂದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ 150 ದಿನಗಳ ಕೂಲಿ ಕೊಡಲು ರಾಜ್ಯ ಸರಕಾರ ಕೇಂದ್ರದಿಂದ ಅನುಮತಿ ಪಡೆದಿದೆ. ಆದರೆ ಈಗ ರಾಜ್ಯಾದ್ಯಂತ ಕೋವಿಡ್-19 ವೈರಸ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ನರೇಗಾ ಯೋಜನೆ ಅಡಿಯಲ್ಲಿ ಸಾರ್ವಜನಿಕ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಹಳೆಯ ಕೂಲಿಯ ಹಣವೂ ಬಾರದೆ ಈಗಲೂ ಕೂಲಿ ಸಿಗದೆ ನರೇಗಾ ಕಾರ್ಮಿಕರು ಕಂಗಾಲಾಗಿದ್ದಾರೆ. ಅಲ್ಲದೆ ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಿದ್ದ ಕಾರ್ಮಿಕರೂ ಈಗ ಕೋವಿಡ್-19 ಭೀತಿಯಿಂದ ಹಳ್ಳಿಗಳಿಗೆ ತೆರಳಿದ್ದು, ಅವರಿಗೂ ಉದ್ಯೋಗ ಒದಗಿಸುವ ಸವಾಲು ರಾಜ್ಯ ಸರಕಾರದ ಮುಂದಿದೆ.

-ಶಂಕರ ಪಾಗೋಜಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.