ಟ್ರಕ್ ಡಿಕ್ಕಿ ಹೊಡೆದು ಬಸ್ಸಿನ ಫುಟ್‌ಬೋರ್ಡ್ ಮೇಲೆ ನಿಂತಿದ್ದ 3 ವಿದ್ಯಾರ್ಥಿಗಳ ದಾರುಣ ಅಂತ್ಯ
Team Udayavani, Mar 12, 2024, 2:39 PM IST
ತಮಿಳುನಾಡು: ಬಸ್ಸಿನ ಫುಟ್‌ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ಟ್ರಕ್ಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ ನಡೆದಿದೆ.
ತಿರುಚ್ಚಿ-ಚೆನ್ನೈ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ನ ಫುಟ್‌ಬೋರ್ಡ್‌ನಲ್ಲಿ ವಿದ್ಯಾರ್ಥಿಗಳು ನಿಂತಿದ್ದಾಗ ಈ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್ ಸಿರುಕನಲ್ಲೂರು ತಲುಪಿದ ವೇಳೆ ಕಂಟೈನರ್ ಲಾರಿಯೊಂದು ಬಸ್ಸಿನ ಸನಿಹಕ್ಕೆ ಬಂದು ಡಿಕ್ಕಿಯಾಗಿದೆ ಈ ವೇಳೆ ಫುಟ್‌ಬೋರ್ಡ್ ಮೇಲೆ ನಿಂತಿದ್ದ ಮೂವರು ವಿದ್ಯಾರ್ಥಿಗಳು ಎರಡು ವಾಹನಗಳ ನಡುವೆ ಸಿಲುಕಿ ಅಪ್ಪಚ್ಚಿಯಾಗಿದ್ದಾರೆ. ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದ ಕಾರಣ ಮೂವರು ವಿದ್ಯಾರ್ಥಿಗಳು ಫುಟ್‌ಬೋರ್ಡ್ ಮೇಲೆ ನಿಂತು ದೇಹದ ಭಾಗ ಬಸ್ಸಿನಿಂದ ಹೊರಗಿತ್ತು ಎನ್ನಲಾಗಿದೆ.
ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಗಾಯವಾಗಿದ್ದು ಆತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ವಿಷಯ ತಿಳಿದ ಮೇಲ್ಮರುವತ್ತೂರು ಪೊಲೀಸರು ಸ್ಥಳಕ್ಕೆ ಧಾವಿಸಿ. ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೃತದೇಹ ಭಾಗಗಳನ್ನು ಸೇರಿಸಿ ಶವಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: BJP; ಹರ್ಯಾಣದಲ್ಲಿ ಸಿಎಂ ಬದಲಾವಣೆ; ನಯಾಬ್ ಸಿಂಗ್ ಸೈನಿಗೆ ಪಟ್ಟಕಟ್ಟಿದ ಬಿಜೆಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.