29 ಜಿಲ್ಲೆಗಳಲ್ಲಿ ಬ್ಲ್ಯಾಕ್ ಫಂಗಸ್ : ರಾಜ್ಯಾದ್ಯಂತ 446 ಪ್ರಕರಣ ಪತ್ತೆ
Team Udayavani, May 25, 2021, 7:15 AM IST
ಬೆಂಗಳೂರು : ರಾಜ್ಯದ 29 ಜಿಲ್ಲೆಗಳಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳು 446ಕ್ಕೆ ಏರಿವೆ. ಒಟ್ಟು 12 ಸೋಂಕುಪೀಡಿತರು ಸಾವಿಗೀಡಾಗಿದ್ದು, 433 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾಲ್ಕೈದು ಜಿಲ್ಲೆಗಳಲ್ಲಿ ಮಾತ್ರ ವರದಿಯಾದ್ದ ಫಂಗಸ್ ಪ್ರಕರಣಗಳು ದಾವಣಗೆರೆ ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿಯೂ ಕಾಣಿಸಿಕೊಂಡಿವೆ. ದಾವಣಗೆರೆಯಲ್ಲಿಯೂ ಶಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಅಧಿಕೃತ ಫಲಿತಾಂಶ ಲಭ್ಯವಾಗಿಲ್ಲ. ಒಂದೇ ವಾರದಲ್ಲಿ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಳವಾಗಿವೆ. ಮೇ 17ರಂದು 98 ಇದ್ದು, ಸದ್ಯ 446ಕ್ಕೆ ಏರಿವೆ. ಸರಕಾರಿ ಆಸ್ಪತ್ರೆಗಳಲ್ಲಿ ದಾಖಲಾಗದೆ ಖಾಸಗಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆಯೂ ಹೆಚ್ಚಿದೆ. ಧಾರವಾಡದಲ್ಲಿ ನೂರರ ಸಮೀಪಕ್ಕೆ ಫಂಗಸ್ ಪ್ರಕರಣಗಳು ವರದಿಯಾಗಿದ್ದು ಆತಂಕ ಹೆಚ್ಚಿಸಿದೆ.
ಪ್ರತೀ ವಾರ 400 ಮಂದಿಗೆ ಸೋಂಕು?
ರಾಜ್ಯದಲ್ಲಿ ಪ್ರತೀ ವಾರ 400ಕ್ಕೂ ಹೆಚ್ಚು ಮಂದಿ ಬ್ಲ್ಯಾಕ್ ಫಂಗಸ್ ಕಾಯಿಲೆಗೆ ತುತ್ತಾಗಬಹುದೆಂದು ಅಂದಾಜಿಸಲಾಗಿದ್ದು, ಆಂಪೋಟೆರಿಸಿನ್-ಬಿ ಚುಚ್ಚುಮದ್ದಿನ 20 ಸಾವಿರ ವಯಲ್ಗಳನ್ನು ಪೂರೈಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸ ಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ರೋಗಿಗಳಿಗೆ 10ರಿಂದ 12 ದಿನ ಚಿಕಿತ್ಸೆ ನೀಡಬೇಕಿದ್ದು, ಪ್ರತೀ ದಿನ 4 ವಯಲ್ಗಳಂತೆ ಪ್ರತೀ ರೋಗಿಗೆ ಒಟ್ಟು 50 ವಯಲ್ಗಳ ಅಗತ್ಯವಿದೆ. ಈ ಆಧಾರದಲ್ಲಿ 20 ಸಾವಿರ ವಯಲ್ಗಳನ್ನು ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.