ಉಡುಪಿ ಜಿಲ್ಲೆಯಲ್ಲಿ ಚರ್ಮಗಂಟು ರೋಗದಿಂದ 74 ಜಾನುವಾರು ಸಾವು

ಗರಿಷ್ಠ ಪರಿಹಾರದ ನಿರೀಕ್ಷೆಯಲ್ಲಿ ಹೈನುಗಾರರು : ರೋಗ ಹಬ್ಬುವಿಕೆ ಪ್ರಮಾಣ ನಿಯಂತ್ರಣಕ್ಕೆ

Team Udayavani, Feb 22, 2023, 11:18 AM IST

poll

ಉಡುಪಿ: ಹೈನುಗಾರಿಕೆ, ಕೃಷಿಕ ಸಮೂಹವನ್ನೇ ಬೆಚ್ಚಿ ಬೀಳಿಸಿರುವ ಚರ್ಮಗಂಟು ರೋಗಕ್ಕೆ ಜಿಲ್ಲೆಯಲ್ಲಿ ಈವರೆಗೂ 74 ಜಾನುವಾರುಗಳು ಸಾವನ್ನಪ್ಪಿವೆ. ಡಿಸೆಂಬರ್‌, ಜನವರಿ ತಿಂಗಳಲ್ಲಿ ರೋಗ ಪ್ರಮಾಣ ಹೆಚ್ಚಿದ್ದು, ಜಾನುವಾರುಗಳ ಜೀವ ಹಿಂಡಿತ್ತು, ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಜಾನುವಾರು ರೋಗಬಾಧೆಯಿಂದ ಬಳಲುತ್ತಿವೆ. ಜಿಲ್ಲೆಯಲ್ಲಿ 2,57,184 ಲಕ್ಷ ಜಾನುವಾರುಗಳಿದ್ದು, ಸಂಪೂರ್ಣ ಲಸಿಕೆ ಹಾಕಿಸುವ ಪ್ರಕ್ರಿಯೆ ಜಿಲ್ಲೆ ಪಶುವೈದ್ಯರು, ಸಿಬಂದಿ ತಂಡ ಮುಗಿಸಿದೆ. ಕುಂದಾಪುರ, ಹೆಬ್ರಿ, ಬ್ರಹ್ಮಾವರ, ಕಾರ್ಕಳ ಭಾಗದಲ್ಲಿ ಹೈನುಗಾರಿಕೆ ಹೆಚ್ಚಿದೆ.

ಆರಂಭದಲ್ಲಿ ಬೇರೆ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹಬ್ಬಿದ್ದು, ಅನಂತರ ಉಡುಪಿ ಜಿಲ್ಲೆಯಲ್ಲಿಯೂ ಕಾಣಿಸಿಕೊಂಡಿರುವುದು ಹೈನುಗಾರಿಕೆ, ಕೃಷಿಕ ವರ್ಗದವರಲ್ಲಿ ತೀರ ಆತಂಕಕ್ಕೆ ಕಾರಣವಾಗಿತ್ತು. ಹೈನುಗಾರರು ಚರ್ಮಗಂಟು ರೋಗದಿಂದ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಹಸುಗಳು ಆರ್ಥಿಕ ಶಕ್ತಿಯ ಜತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದಿವೆ. ಬೈಂದೂರು, ಹೆಬ್ರಿ, ಬ್ರಹ್ಮಾವರ ಭಾಗದಲ್ಲಿ ಹೆಚ್ಚು ಜಾನುವಾರುಗಳು ಮೃತಪಟ್ಟಿದೆ. ಪ್ರಸ್ತುತ ಚರ್ಮಗಂಟು ರೋಗ ಹಬ್ಬುವಿಕೆ ಪ್ರಮಾಣ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದು, ಈಗಾಗಲೆ ಮೃತಪಟ್ಟ ಜಾನುವಾರುಗಳ ಸಾಕಣೆದಾರರಿಗೆ ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದೆ.

ಶೀಘ್ರದಲ್ಲೇ ಪರಿಹಾರ
ರೋಗ ಪ್ರಮಾಣ ಸಂಪೂರ್ಣ ಇಳಿಮುಖವಾಗಿದ್ದು, ಹೈನುಗಾರರು ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಎಲ್ಲ ದನಗಳಿಗೆ ಲಸಿಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ನಿರಂತರ ಲಸಿಕೆ ಹಾಕುವುದು, ಕ್ವಾರಂಟೈನ್‌ ನೀತಿ, ವ್ಯವಸ್ಥಿತ ಚಿಕಿತ್ಸೆಯಿಂದ ರೋಗ ಹಬ್ಬುವ ಪ್ರಮಾಣ ನಿಯಂತ್ರಿಸಲು ಸಾಧ್ಯವಾಯಿತು. ಈಗಾಗಲೇ ಸಾವನ್ನಪ್ಪಿರುವ ಹಸುಗಳಿಗೆ ಪರಿಹಾರ ನೀಡಲು ಸರಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಹೈನುಗಾರರಿಗೆ ಪರಿಹಾರ ದೊರೆಯಲಿದೆ.
-ಡಾ| ಶಂಕರ್‌ಶೆಟ್ಟಿ, ಉಪ ನಿರ್ದೇಶಕರು, ಪಶು ಸಂಗೋಪನ ಇಲಾಖೆ, ಉಡುಪಿ ಜಿಲ್ಲೆ

ಸರಕಾರ ಕ್ರಮ ಕೈಗೊಳ್ಳಲಿ
ಮೂರು ವರ್ಷಗಳ ಅವಧಿಗೆ ಸಾಮೂಹಿಕ ಜಾನುವಾರು ವಿಮೆ ಅಡಿಯಲ್ಲಿ ದ.ಕ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಜಿಲ್ಲೆಯಲ್ಲಿ 50 ಸಾವಿರ ದನಗಳಿಗೆ ವಿಮೆ ಮಾಡಿಸಲಾಗಿದೆ. ಇದರಲ್ಲಿ ಶೇ.75 ವಿಮಾ ಮೊತ್ತವನ್ನು ಒಕ್ಕೂಟವೇ ಭರಿಸಲಿದ್ದು, ಉಳಿದ ಶೇ.25 ಮೊತ್ತವನ್ನು ದನ ಸಾಕಣೆದಾರರು ಭರಿಸಬೇಕು. ದನಗಳಿಗೆ ವಿಮೆ ಮಾಡಿಸದವರು ಈ ವಿಮಾ ಸೌಲಭ್ಯ ಪಡೆಯಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ. ಚರ್ಮಗಂಟು ರೋಗದಿಂದ ಸಾವನ್ನಪ್ಪಿರುವ ಜಾನುವಾರುಗಳಿಗೆ ಸರಕಾರ ಗರಿಷ್ಠ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳಬೇಕು.
– ಸಾಣೂರು ನರಸಿಂಹ ಕಾಮತ್‌, ರಾಜ್ಯ ಸಂಚಾಲಕ, ಸಹಕಾರ ಭಾರತೀ ಹಾಲು ಪ್ರಕೋಷ್ಠ

ಪರಿಹಾರ ಮೊತ್ತವೆಷ್ಟು ?
ಒಟ್ಟು ದನಗಳ ಸಂಖ್ಯೆಗೆ ಹೋಲಿಸಿದಲ್ಲಿ ಸಾವಿನ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆ ಇದೆ. ಸಾವನ್ನಪ್ಪಿರುವ ಜಾನುವಾರುಗಳಿಗೆ ಸರಕಾರದಿಂದ ಪರಿಹಾರ ಸಿಗಲಿದೆ. ಕರುವಿಗೆ 5 ಸಾವಿರ ರೂ., ಹಸುವಿಗೆ 10 ಸಾವಿರ ರೂ., ಎತ್ತುಗಳಿಗೆ 30 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

ರೋಗಬಾಧಿತ – ಸಾವನ್ನಪ್ಪಿದ ಹಸುಗಳ ವಿವರ
ತಾಲೂಕು       ಬಾಧಿತ      ಚಿಕಿತ್ಸೆ        ಸಾವು
ಉಡುಪಿ             225            77                 6
ಕಾಪು                 355             33                5
ಬ್ರಹ್ಮಾವರ         1,629         7                  18
ಕುಂದಾಪುರ       409          18                  5
ಬೈಂದೂರು       1,553         17                 16
ಕಾರ್ಕಳ             1,031         10                 9
ಹೆಬ್ರಿ                  1,167          56                15
ಒಟ್ಟು             6,369       218             74

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.