81.35 ಕೋಟಿ ಜನರಿಗೆ ಕೇಂದ್ರದಿಂದ ಉಚಿತ ಪಡಿತರ
Team Udayavani, Jul 3, 2021, 6:50 AM IST
ದೇಶದಲ್ಲಿ ಕಳೆದೆರಡು ವರ್ಷಗಳಿಂದ ಕೊರೊನಾದಿಂದಾಗಿ ಅದೆಷ್ಟೋ ಕುಟುಂಬಗಳು ಆಹಾರಕ್ಕಾಗಿ ಪರದಾಡುವಂತಾಗಿದೆ. ದಿನಗೂಲಿಯಿಂದ ಜೀವನ ಸಾಗಿಸುತ್ತಿದ್ದವರಿಗೆ ಈಗ ದುಡಿಮೆಯೂ ಇಲ್ಲ, ತಿನ್ನಲು ಆಹಾರವೂ ಇಲ್ಲ ಎಂಬಂಥ ಸ್ಥಿತಿ ನಿರ್ಮಾಣವಾಗಿದೆ. ಬಡವರ ಸಂಕಷ್ಟಕ್ಕೆ ಸ್ಪಂದಿಸಿರುವ ಕೇಂದ್ರ ಸರಕಾರ ಉಚಿತ ಪಡಿತರ ವಿತರಿಸುವ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪ್ರಕಟಿಸಿರುವಂತೆ ಮುಂದಿನ ದೀಪಾವಳಿ ತನಕ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಲಭಿಸಲಿದೆ. ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಜಾರಿಗೊಳಿಸಲಾದ ಲಾಕ್‌ಡೌನ್ ಅವಧಿಯಲ್ಲಿ 2020ರ ಎಪ್ರಿಲ್‌ನಿಂದ ನವೆಂಬರ್‌ವರೆಗೆ ಉಚಿತ ಪಡಿತರ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅದರಂತೆಯೇ ಈ ವರ್ಷ ಆರಂಭದಲ್ಲಿ ಮೇಯಿಂದ ಜುಲೈವರೆಗೆ ಬಡವರಿಗೆ ಉಚಿತ ಪಡಿತರ ವಿತರಣೆಯ ಘೋಷಣೆ ಮಾಡಲಾಗಿತ್ತಾದರೂ ಇದೀಗ ಇದನ್ನು ನವೆಂಬರ್‌ವರೆಗೆ ವಿಸ್ತರಿಸಲಾಗಿದ್ದು ಇದಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕೇಂದ್ರ ಸರಕಾರದ ಅಂದಾಜಿನಂತೆ ಈ ಯೋಜನೆಯಡಿ ದೇಶದ 80 ಕೋಟಿ ಮಂದಿಗೆ ಉಚಿತ ಪಡಿತರ ಲಭಿಸಲಿದೆ. ಅಷ್ಟು ಮಾತ್ರವಲ್ಲದೆ ಈ ಯೋಜನೆಯ ಫಲಾನುಭವಿಗಳ ಆಯ್ಕೆ ಸಂಬಂಧ ಕೇಂದ್ರ ಸರಕಾರ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಸಂಬಂಧಪಟ್ಟಂತೆ ಪ್ರತ್ಯೇಕ ಮಾನದಂಡವನ್ನು ರೂಪಿಸಿದೆ.
ಅಂಕಿಅಂಶಗಳ ಪ್ರಕಾರ ಯೋಜ ನೆಯ ಗರಿಷ್ಠ ಪ್ರಯೋಜನವನ್ನು ಉತ್ತರ ಪ್ರದೇಶದ ಜನತೆ ಪಡೆಯಲಿದೆ. ಈ ರಾಜ್ಯದ ಸುಮಾರು 20 ಕೋಟಿ ಜನಸಂಖ್ಯೆ ಯಲ್ಲಿ 15.21 ಕೋಟಿ ಅಂದರೆ ಸುಮಾರು ಶೇ. 76ರಷ್ಟು ಜನರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇವರಿಗೆ ಸರ ಕಾರ ಪ್ರತೀ ತಿಂಗಳು 5 ಕೆ.ಜಿ. ಅಕ್ಕಿ ಅಥವಾ ಗೋಧಿ ನೀಡುತ್ತಿದೆ.
81.35 ಕೋಟಿಗೆ ಏರಿಕೆ
ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸರಕಾರ ಉಚಿತ ಪಡಿತರ ನೀಡುತ್ತಿದ್ದು ಬಡತನ ರೇಖೆಗಿಂತ ಕೆಳಗಿರುವವರ ಜತೆಯಲ್ಲಿ ಕೋವಿಡ್‌ನಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವವರನ್ನು ಸ್ಥಳೀಯ ಮಟ್ಟದಲ್ಲಿ ಗುರುತಿಸಿ, ಪರೀಶಿಲನೆ ನಡೆಸಿ ಅವರನ್ನೂ ಈ ಯೋಜನೆಯ ಫಲಾನುಭವಿಗಳ ಪಟ್ಟಿಗೆ ಸೇರ್ಪಡೆಗೊಳಿ ಸಲಾಗಿದೆ. ಇದರಿಂದಾಗಿ ಪ್ರಸಕ್ತ ವರ್ಷ ಉಚಿತ ಪಡಿತರ ಪಡೆಯಲಿರುವ ಫಲಾನುಭವಿಗಳ ಸಂಖ್ಯೆ 81.35 ಕೋಟಿಗೆ ಏರಿಕೆಯಾಗಿದೆ.
ಸಪ್ತ ರಾಜ್ಯಗಳ ಚುನಾವಣೆಯತ್ತ ದೃಷ್ಟಿ?
2022ರಲ್ಲಿ ದೇಶದ ಏಳು ರಾಜ್ಯಗಳ ವಿಧಾನ ಸಭೆಗಳಿಗೆ ಚುನಾವಣೆ ನಡೆಯಲಿದೆ. ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಗುಜರಾತ್, ಮಣಿಪುರ, ಪಂಜಾಬ್, ಹಿಮಾಚಲಪ್ರದೇಶ ವಿಧಾನ ಸಭೆಗಳಿಗೆ ಚುನಾವಣೆ ನಡೆಯಲಿದೆ. ಇದೀಗ ಕೇಂದ್ರ ಸರಕಾರ ಘೋಷಿಸಿರುವ ಉಚಿತ ಪಡಿತರ ಯೋಜನೆಯಡಿಯಲ್ಲಿ ಈ ರಾಜ್ಯಗಳಿಗೆ ಸೇರಿದ 20 ಕೋಟಿಗೂ ಅಧಿಕ ಮಂದಿಗೆ ಉಚಿತ ಪಡಿತರ ಲಭಿಸಲಿದೆ. ಸದ್ಯ ಕೋವಿಡ್‌ನ 2ನೇ ಅಲೆ ದೇಶದ ಬಹುತೇಕ ರಾಜ್ಯಗಳಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮತ್ತು ಇನ್ನಿತರ ಕಠಿನ ನಿರ್ಬಂಧಗಳನ್ನು ಸಡಿಲಿಸಿ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಇದರ ಹೊರತಾಗಿಯೂ ಮುಂಬರುವ ವಿಧಾನ ಸಭೆ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿ ಕೊಂಡೇ ಕೇಂದ್ರ ಸರಕಾರ ಉಚಿತ ಪಡಿತರ ಯೋಜನೆಯನ್ನು ನವೆಂಬರ್‌ವರೆಗೆ ಮುಂದುವರಿಸುವ ತೀರ್ಮಾನ ಕೈಗೊಂಡಿದೆ ಎಂದು ರಾಜಕೀಯ ವಲಯ ದಲ್ಲಿ ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.