ರಾಜ್ಯದಲ್ಲಿ 8,500 ಸ್ಮಾರ್ಟ್‌ಕ್ಲಾಸ್ ರೂಂ ಅಭಿವೃದ್ಧಿ: ಡಾ| ಅಶ್ವತ್ಥನಾರಾಯಣ
Team Udayavani, Jul 10, 2021, 7:47 PM IST
ಬೆಂಗಳೂರು: ರಾಜ್ಯ ಸರಕಾರ ಡಿಜಿಟಲ್ ಕಲಿಕೆಗೆ ಪ್ರೋತ್ಸಾಹ ಹಾಗೂ ಆದ್ಯತೆ ನೀಡುತ್ತಿದ್ದು, 8,500 ಸ್ಮಾರ್ಟ್ ತರಗತಿ ಕೊಠಡಿಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ| ಸಿ. ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ರಾಜ್ಯದ ಉನ್ನತ ಶಿಕ್ಷಣ ವಿಭಾಗದಲ್ಲಿರುವ 8,500 ತರಗತಿ ಕೊಠಡಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸ್ಮಾರ್ಟ್‌ಕ್ಲಾಸ್ ರೂಂಗಳನ್ನಾಗಿ ಪರಿವರ್ತಿಸಲಾಗುತ್ತಿದ್ದು, ಈ ಪೈಕಿ 2,500 ಕೊಠಡಿಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ ಎಂದರು.
ಮಲ್ಲೇಶ್ವರದ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಟ್ಯಾಬ್ಲೆಟ್-ಪಿಸಿಗಳನ್ನು ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಡಿಜಿಟಲ್ ಕಲಿಕೆಗೆ ಪೂರಕವಾಗುವಂತೆ ಕಳೆದ ಶೈಕ್ಷಣಿಕ ವರ್ಷದಲ್ಲಿ 1.10 ಲಕ್ಷ ಲ್ಯಾಪ್‌ಟಾಪ್‌ಗ್ಳನ್ನು ಪದವಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಇದಕ್ಕಾಗಿ 330 ಕೋ. ರೂ. ಖರ್ಚು ಮಾಡಲಾಗಿತ್ತು. ಈ ಶೈಕ್ಷಣಿಕ ವರ್ಷದಲ್ಲಿ 1.60 ಲಕ್ಷದಷ್ಟು ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಲಾಗುತ್ತಿದೆ ಎಂದರು.
ಇದನ್ನೂ ಓದಿ :ಜು. 14ರ ವರೆಗೆ ಕರಾವಳಿಯಲ್ಲಿ ಭಾರೀ ಮಳೆ ನಿರೀಕ್ಷೆ : ಹವಾಮಾನ ಇಲಾಖೆ ಮುನ್ಸೂಚನೆ
ಸರಕಾರ ಎಲ್‌ಎಂಎಸ್‌ನಂಥ ಉತ್ತಮ ಕಲಿಕಾ ವ್ಯವಸ್ಥೆಯನ್ನು ರೂಪಿಸಿದೆ. ಇದು ದೇಶದ ಯಾವ ರಾಜ್ಯದಲ್ಲೂ ಇಲ್ಲದ ಕ್ರಾಂತಿಕಾರಿ ವ್ಯವಸ್ಥೆಯಾಗಿದೆ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳಿಗೂ ರೂಪಿಸಲು ಸಾಧ್ಯವಾಗದ ಉಪಕ್ರಮವಾಗಿದೆ ಎಂದು ತಿಳಿಸಿದರು.
ಎಲ್‌ಎಂಎಸ್ ಅತ್ಯುತ್ತಮ ಕಂಟೆಂಟ್ ಜತೆಗೆ, ಪರಿಣಾಮಕಾರಿ ಕಲಿಕೆಗೆ ಎಲ್ಲ ಆಯಾಮಗಳಲ್ಲೂ ಸಹಕಾರಿಯಾಗಿದೆ. 3.5 ಲಕ್ಷ ತರಗತಿಗಳನ್ನು ನಮ್ಮದೇ ಬೋಧಕರು ಅಪ್‌ಲೋಡ್ ಮಾಡಿದ್ದಾರೆ. ಈ ಯೋಜನೆಗೆ ಸರಕಾರ 4 ಕೋ. ರೂ. ಖರ್ಚು ಮಾಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.