![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 4, 2022, 11:52 AM IST
ಮಂಡ್ಯ: ಹಸುಗೂಸುವಿನೊಂದಿಗೆ ಜಿಲ್ಲಾಸ್ಪತ್ರೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು ದಂಡ ಪಾವತಿಸುವವರೆಗೂ ತಾಯಿ ಮತ್ತು ಮಗುವನ್ನು ವಾಹನ ದಟ್ಟಣೆಯ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿರಿಸಿದ ಪೊಲೀಸ್ ಅಧಿಕಾರಿಯ ಅಮಾನವೀಯ ನಡೆಗೆ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ:ಟಿ20 ವಿಶ್ವಕಪ್: ಕಿವೀಸ್ ವಿರುದ್ಧ ಹ್ಯಾಟ್ರಿಕ್ ಪಡೆದ ಐರಿಷ್ ವೇಗಿ ಲಿಟಲ್
ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿ ಯಗುಚಗುಪ್ಪೆ ಗ್ರಾಮದ ಅಭಿಷೇಕ್ ತನ್ನ ಬೈಕ್‌ನಲ್ಲಿ ಹಸುಗೂಸು ಹಾಗೂ ಪತ್ನಿಯನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದಾನೆ. ಅಭಿಷೇಕ್ ಹೆಲ್ಮೆಟ್ ಧರಿಸದ ಹಿನ್ನೆಲೆಯಲ್ಲಿ ಕರ್ತವ್ಯ ದಲ್ಲಿದ್ದ ಸಂಚಾರಿ ಎಎಸ್‌ಐ ರಘುಪ್ರಕಾಶ್ ಬೈಕ್ ಅಡ್ಡಗಟ್ಟಿ ಕೀ ಕಸಿದು 500 ರೂ. ದಂಡ ಪಾವತಿಸಿ ಬೈಕ್ ತೆಗೆದುಕೊಂಡು ಹೋಗುವಂತೆ ತಾಕೀತು ಮಾಡಿದರು.
ಇದರಿಂದಾಗಿ ಅಭಿಷೇಕ್ ಪತ್ನಿ ಹಾಗೂ ಮಗುವನ್ನು ರಾಷ್ಟ್ರೀಯ ಹೆದ್ದಾರಿಯ ಪಾದಚಾರಿ ಮಾರ್ಗದಲ್ಲಿ ಕುಳ್ಳಿರಿಸಿ ವಿವಿ ರಸ್ತೆಯ ಎಟಿಎಂಗೆ ತೆರಳಿ ಹಣ ಡ್ರಾ ಮಾಡಿಕೊಂಡು ಬಂದು ದಂಡ ಪಾವತಿಸಿ, ಬೈಕ್ ಪಡೆದು ಪತ್ನಿ ಹಾಗೂ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಎಎಸ್‌ಐ ರಘುಪ್ರಕಾಶ್ ಮಾನವೀಯತೆಯಿಂದ ವರ್ತಿಸಿ ನ್ಯಾಯಾಲಯದಲ್ಲಿ ದಂಡ ಪಾವತಿಸುವಂತೆ ತಿಳಿ ಹೇಳಿ ಬೈಕ್ ಸವಾರನನ್ನು ಕಳುಹಿಸಬೇಕಿತ್ತು. ಆದರೆ ಈ ವರ್ತನೆ ಎಷ್ಟು ಸರಿ ಎಂಬ ಟೀಕೆ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.