![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 9, 2022, 4:23 PM IST
ಬೆಂಗಳೂರು: ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ. ಇತ್ತೀಚಿನ 10 ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕದ ವಿಷಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಬೆಂಗಳೂರಿನಲ್ಲಿ ನಿಮ್ಹಾನ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ಬ್ರೈನ್ ಹೆಲ್ತ್ ಇನಿಷೆಯೇಟಿವ್ ಕಾರ್ಯಕ್ರಮದಲ್ಲಿ ಮಾತನಾಡಿದವ ಅವರು, ನಾವು ಎಷ್ಟು ವರ್ಷ ಬದುಕುತ್ತೇವೆ ಎನ್ನುವುದರ ಜೊತೆಗೆ ಹೇಗೆ ಬದುಕುತ್ತೇವೆ ಎನ್ನುವುದು ಕೂಡ ಮುಖ್ಯವಾಗಿದೆ. ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನಿಮ್ಹಾನ್ಸ್‌ನಂತಹ ಸಂಸ್ಥೆ ಇರುವುದು ನಮ್ಮ ರಾಜ್ಯದ ಸೌಭಾಗ್ಯವಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಬ್ರೈನ್‌ಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿದೆ. ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಸ್ಟ್ರೋಕ್, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂಕಿ-ಅಂಶಗಳ ಪ್ರಕಾರ ಮಾನಸಿಕ ಅರೋಗ್ಯದಿಂದಲೇ ಸುಮಾರು 7-8% ಜನರು ಸಾವಿಗೀಡಾಗುತ್ತಿದ್ದು, ಇದು ಸಾವಿಗೆ ಕಾರಣವಾಗಿರುವ ಅಂಶಗಳ ಪೈಕಿ 2ನೇ ಸ್ಥಾನ ಪಡೆದಿದೆ ಎಂದರು.
ಭಾರತ ಸರ್ಕಾರ T- MANAS ಮೂಲಕ ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಭಿಯಾನವನ್ನು ಮಾಡುತ್ತಿದೆ. ರಾಜ್ಯ ಸರ್ಕಾರ ಹಬ್ & ಸ್ಪೋಕ್ ಮಾಡೆಲ್ ಮೂಲಕ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾನ್ಸ್ ನೆರವಿನೊಂದಿಗೆ ಪೈಲಟ್ ಪ್ರಾಜೆಕ್ಟ್ ಮಾಡುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ಈ ಸೇವೆ ರಾಜ್ಯದ ಎಲ್ಲಾ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಪಿಎಚ್ ಸಿ ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಕೌನ್ಸಿಲಿಂಗ್ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ 3 ತಿಂಗಳ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಎನ್‌ಎಂ, ಸಿಎಚ್‌ಒಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೂ ಈ ಸಂಬಂಧ ತರಬೇತಿ ನೀಡಿ ಮಾನಸಿಕ ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಅನ್ನುವ ಬಗ್ಗೆ ತಿಳಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.