Teacher’s Day; ವೃತ್ತಿನಿಷ್ಠ ಶಿಕ್ಷಕರಿಂದ ದೇಶಕ್ಕೆ ಭದ್ರ ಬುನಾದಿ
Team Udayavani, Sep 6, 2024, 1:01 AM IST
ಬಂಟ್ವಾಳ: ಭವಿಷ್ಯದ ಭಾರತವನ್ನು ನಿರ್ಮಿಸುವ ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಹೊಣೆ ಹೊತ್ತಿರುವ ಶಿಕ್ಷಕರು ತಮ್ಮ ಕರ್ತವ್ಯ ವನ್ನು ನಿಷ್ಠೆಯಿಂದ ಮಾಡಿದಾಗ ದೇಶಕ್ಕೂ ಭದ್ರ ಬುನಾದಿ ಹಾಕಿದಂತೆ ಆಗಲಿದೆ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಹೇಳಿದರು.
ಗುರುವಾರ ಬಂಟರ ಭವನದಲ್ಲಿ ಜಿಲ್ಲಾಡಳಿತ ಮತ್ತು ಜಿ.ಪಂ., ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ ಡಿಡಿಪಿಇ ಕಚೇರಿ, ಬಿಇಒ ಕಚೇರಿ, ಬಂಟ್ವಾಳ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಸಹಯೋ ಗದಲ್ಲಿ ಜರಗಿದ ಜಿಲ್ಲಾ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿದರು.
ಗ್ರಾಮೀಣ ಭಾಗಗಳ ಸರಕಾರಿ ಶಾಲೆಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕಿದ್ದು, ಶಿಕ್ಷಕರು ತಾವು ಹಳ್ಳಿಯ ಶಾಲೆಯಲ್ಲಿದ್ದೇವೆ ಎಂಬ ಕೀಳರಿಮೆ ಹೊಂದದೆ ಕರ್ತವ್ಯ ನಿರ್ವಹಿಸಬೇಕಿದೆ ಎಂದರು.
ಕೆಲಸದ ಒತ್ತಡವು ಶಿಕ್ಷಕರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದ್ದು, ಅವರ ಮಾನಸಿಕ ಒತ್ತಡ ನಿವಾರಣೆಗೆ ಪ್ರಕೃತಿಯೊಂದಿಗೆ ಕಾರ್ಯಕ್ರಮ ಆಯೋಜಿಸುವ ಇಂಗಿತ ವ್ಯಕ್ತಪಡಿಸಿದರು. ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಡಿ.ಎಸ್.ಮಮತಾ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು.
21 ಮಂದಿ ಶಿಕ್ಷಕರಿಗೆ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ಶಿಕ್ಷಕರು, ಸಾಧಕ ಶಿಕ್ಷಕರನ್ನು ಗೌರವಿಸಲಾಯಿತು. ಎಸೆಸೆಲ್ಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಶಿಕ್ಷಕರ ಮಕ್ಕಳನ್ನು ಅಭಿನಂದಿಸಲಾಯಿತು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕೆ., ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ತಹಶೀಲ್ದಾರ್ ಅರ್ಚನಾ ಡಿ.ಭಟ್, ತಾ.ಪಂ. ಇಒ ಸಚಿನ್‌ಕುಮಾರ್, ಡಯೆಟ್ ಪ್ರಾಂಶುಪಾಲೆ ರಾಜಲಕ್ಷ್ಮಿ ಮತ್ತಿತರರು ಉಪಸ್ಥಿತರಿ ದ್ದರು.ಡಿಡಿಪಿಐ ವೆಂಕಟೇಶ ಸುಬ್ರಾ ಯ ಪಟಗಾರ್ ಸ್ವಾಗತಿಸಿದರು. ಜಿ. ಸ. ಪ್ರಾ. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಪ್ರಸ್ತಾವಿಸಿದರು. ಬಂಟ್ವಾಳ ಬಿಇಒ ಮಂಜುನಾಥನ್ ಎಂ.ಜಿ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.