ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ದಾಖಲಾಗಿವೆ 1,228 ಮಹಿಳಾ ದೌರ್ಜನ್ಯ ಪ್ರಕರಣಗಳು
Team Udayavani, Dec 8, 2019, 8:10 PM IST
ಬೆಂಗಳೂರು: ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ 11 ತಿಂಗಳಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಸೇರಿ ಒಟ್ಟು 1,228 ಪ್ರಕರಣಗಳು ದಾಖಲಾಗಿವೆ.
ಪೊಲೀಸ್ ಅಂಕಿ ಅಂಶಗಳ ಪ್ರಕಾರ ಜ.1ರಂದು ನ.30ರವರೆಗೆ ನಗರದಲ್ಲಿ 133 ಅತ್ಯಾಚಾರ, 304 ಪೋಕ್ಸೋ, 719 ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಶೇ.75-80ರಷ್ಟು ಪ್ರಕರಣಗಳಲ್ಲಿ ಮಾತ್ರ ಇತ್ಯರ್ಥ(ಪೊಲೀಸ್ ತನಿಖೆ ಮುಕ್ತಾಯಗೊಂಡಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ) ವಾಗಿದೆ ಎಂಬ ಅಂಶ ಬೆಳಕಿಗೆ ಬಂದಿದೆ.
ಆಘಾತಕಾರಿ ಅಂಶವೆಂದರೆ ಅಪ್ರಾರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ(ಪೋಕ್ಸೋ) ಪ್ರಕರಣಗಳೇ ಅಧಿಕವಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಇತ್ಯರ್ಥವಾಗುತ್ತಿಲ್ಲ. ಕೆಲವೊಮ್ಮೆ ದೂರುದಾರು ಸಾಕ್ಷ್ಯ ನುಡಿಯಲು ಹಿಂದೇಟು ಹಾಕುತ್ತಾರೆ. ಜತೆಗೆ ಸ್ಥಳ ಬದಲಾವಣೆ ಮಾಡುತ್ತಾರೆ.
ಅಂತಹ ಸಂತ್ರಸ್ತರನ್ನು ಪತ್ತೆ ಹಚ್ಚಿ ಹೇಳಿಕೆ ದಾಖಲಿಸುವುದೇ ದೊಡ್ಡ ಸವಾಲಾಗಿದೆ. ಅಲ್ಲದೆ, ಆರೋಪಿಗಳಿಂದ ಬೆದರಿಕೆ ಹಾಗೂ ಹಣದ ಆಮಿಷಕ್ಕೆ ಒಳಗಾಗಿ ವಿಚಾರಣೆಯಿಂದ ದೂರ ಉಳಿಯುತ್ತಾರೆ. ಆದರೂ ಕೆಲವೊಮ್ಮೆ ಸಂತ್ರಸ್ತರನ್ನು ಹುಡುಕಿ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡುತ್ತವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಶಾಲಾ ಮಕ್ಕಳು ಮತ್ತು ಕೂಲಿ ಕಾರ್ಮಿಕರ ಮಕ್ಕಳ ಮೇಲಿನ ದೌರ್ಜನ್ಯಗಳೇ ಅಧಿಕವಾಗಿವೆ. ಈ ಬಗ್ಗೆ ಪೋಷಕರು ಶಾಲಾ ಶಿಕ್ಷಕರು ಮಕ್ಕಳ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸಬೇಕಿದೆ. ಅಲ್ಲದೆ, ತಮ್ಮ ಮಕ್ಕಳಿಗೆ ಸ್ಪರ್ಶಜ್ಞಾನ(ಕೆಟ್ಟ ಹಾಗೂ ಒಳ್ಳೆಯ)ದ ಬಗ್ಗೆ ತಿಳುವಳಿಕೆ ನೀಡಬೇಕು. ಆಗ ಮಾತ್ರ ಒಂದಷ್ಟು ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟರು.
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲೂ ಸಂತ್ರಸ್ತೆ ಹಾಗೂ ಆಕೆಯ ಕುಟುಂಬ ಸದಸ್ಯರು ಸರಿಯಾಗಿ ತನಿಖೆಗೆ ಸಹಕಾರ ನೀಡುವುದಿಲ್ಲ. ಕೆಲವೊಮ್ಮೆ ಸಾಕ್ಷ್ಯಗಳ ಕೊರತೆ ಉಂಟಾಗುತ್ತದೆ. ಮತ್ತೂಂದೆಡೆ ವೈಯಕ್ತಿಕ ಕಾರಣಕ್ಕೆ ದೂರುಗಳನ್ನು ನೀಡುತ್ತಾರೆ.ಅನಂತರ ಆರೋಪಿ ಗುರುತಿಸಲು ಕರೆದಾಗ ವಿಚಾರಣೆಯಿಂದ ದೂರ ಉಳಿಯುತ್ತಾರೆ. ಇನ್ನೊಂದೆಡೆ ನ್ಯಾಯಾಲಯ ಕೂಡ ನಿಧಾನಗತಿಯಲ್ಲಿ ವಿಚಾರಣೆ ನಡೆಸುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಕಳೆದೆರಡು ವರ್ಷಗಳ ಅಂಕಿ ಅಂಶಗಳಲ್ಲೂ ದಾಖಲಾದ ಪ್ರಕರಣಕ್ಕೂ ಇತ್ಯರ್ಥಗೊಂಡ ಪ್ರಕರಣಗೊಂಡ ಪ್ರಕರಣಗಳಿಗೂ ಸಾಕಷ್ಟು ವ್ಯತ್ಯಸವಿದೆ.
- 2017 ಮತ್ತು 2018ರಲ್ಲಿ ದಾಖಲಾಗಿದ್ದ 131 ಅತ್ಯಾಚಾರ ಪ್ರಕರಣಗಳ ಎಲ್ಲ ಪ್ರಕರಣಗಳು ಇತ್ಯರ್ಥವಾಗಿದೆ. ಹಾಗೆಯೇ ಕಳೆದೆರಡು ವರ್ಷಗಳಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣಗಳ ಪೈಕಿ 2017ರಲ್ಲಿ 417ಮತ್ತು 2018ರಲ್ಲಿ 402 ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೈಂಗಿಕ ದೌರ್ಜನ್ಯಗಳ ಪೈಕಿ 2017ರಲ್ಲಿ 891ಹಾಗೂ 2018ರಲ್ಲಿ 721 ಪ್ರಕರಣಗಳ ಪೊಲೀಸ್ ತನಿಖೆ ಮುಕ್ತಾಯಗೊಂಡಿದೆ ಎಂಬುದು ಪೊಲೀಸ್ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.