ಲಂಚ ಸ್ವೀಕರಿಸುತ್ತಿದ್ದ ಕಲಬುರಗಿ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಲಕ್ಕಪ್ಪ ಎಸಿಬಿ ಬಲೆಗೆ
Team Udayavani, Oct 6, 2020, 6:31 PM IST
ಕಲಬುರಗಿ: ಹೊಸ ಕಾಲೇಜು ಕಟ್ಟಡಕ್ಕೆ ಅಗ್ನಿಶಾಮಕ ಇಲಾಖೆಯ ಅನುಮತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಕಲಬುರಗಿ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಎಸ್.ಇ.ಲಕ್ಕಪ್ಪ ಮಂಗಳವಾರ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.
ನಗರದ ಸಿಐಬಿ ಕಾಲೋನಿಯ ನಾಗರಾಜ ಗಿರಿ ಎಂಬುವವರು ಹೊಸದಾಗಿ ಪಿಯುಸಿ ಕಾಲೇಜು ಆರಂಭಿಸುತ್ತಿದ್ದು, ಅಗ್ನಿಶಾಮಕ ಇಲಾಖೆಯಿಂದ ನಿರಾಪೇಷಣಾ ಪತ್ರ (ಎನ್ಒಸಿ) ಪಡೆಯಲು ಅರ್ಜಿ ಸಲ್ಲಿಸಿದ್ದರು.
ಎನ್ಒಸಿ ನೀಡಲು ಎಸ್.ಇ.ಲಕ್ಕಪ್ಪ 75 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಮಧ್ಯಾಹ್ನ 2 ಗಂಟೆಗೆ ಅಗ್ನಿಶಾಮಕ ಕಚೇರಿಯಲ್ಲೇ ನಾಗರಾಜ ಅವರಿಂದ 75 ಸಾವಿರ ರೂ. ಲಂಚದ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಲಕ್ಕಪ್ಪ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ್ದಾರೆ.
ಇದನ್ನೂ ಓದಿ :ಇನ್ಮುಂದೆ ಬರಲಿದೆ ಗೂಗಲ್ ಪೇಪರ್ ಫೋನ್ : ಇದು ಜಗತ್ತೆ ನಿಬ್ಬೆರಗಾಗಿಸುವ ಹೊಸ ಅವಿಷ್ಕಾರ
ಎಸಿಬಿ ಎಸ್.ಪಿ. ಮಹೇಶ್ ಮೇಘಣ್ಣವರ್, ಡಿ.ಎಸ್.ಪಿ. ವೀರೇಶ ಕರಡಿಗುಡ್ಡ, ಇನ್ಸ್ ಪೆಕ್ಟರ್ ಗಳಾದ ಎಂಡಿ ಇಸ್ಮಾಯಿಲ್, ರಾಘವೇಂದ್ರ ಭಜಂತ್ರಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿ ಆರ್.ಎಫ್.ಓ. ಲಕ್ಕಪ್ಪರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.