ವಿಜಯಪುರ : ವಿಧವಾ ವೇತನ ನೀಡಲು ಲಂಚ ಪಡೆಯುತ್ತಿದ್ದ ಗ್ರಾಮಲೆಕ್ಕಿಗ ಎಸಿಬಿ ಬಲೆಗೆ
Team Udayavani, Feb 25, 2021, 6:42 PM IST
ವಿಜಯಪುರ : ವಿಧವಾ ವೇತನ ನೀಡಲು 3 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಲೆಕ್ಕಿಗನೊಬ್ಬ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾನೆ.
ರೋಣಿಹಾಳ ಗ್ರಾಮದ ಕಾಶಿನಾಥ ಬಡಿಗೇರ ತಮ್ಮ ತಾಯಿ ರೇಖಾ ಬಡಿಗೇರ ಇವರ ಪರವಾಗಿ ವಿಧವಾ ವೇತನ ಹಾಗೂ ಆದಾಯ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ಶಿಫಾರಸು ಮಾಡಲು ರೋಣಿಹಾಳ ಗ್ರಾಮಲೆಕ್ಕಿಗ ಬಸವರಾಜ ಮಲ್ಲಪ್ಪಗೋಳ ಅರ್ಜಿದಾರರಿಗೆ 3 ಸಾವಿರ ರೂ. ಲಂಚದ ಹಣಕ್ಕೆ ಬೇಡಿಕೆ ಇರಿಸಿದ್ದರು.
ಅದರಂತೆ ಬಸವನಬಾಗೇವಾಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹತ್ತಿರದ ರಸ್ತೆಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅರ್ಜಿದಾರರಿಂದ ಲಂಚ ಪಡೆಯುತ್ತಿದ್ದ. ಈ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಚಾಮುಂಡಿ ಕ್ಷೇತ್ರದಲ್ಲಿ ಸೋತು ಅಧಿಕಾರ ಕಳೆದುಕೊಂಡರೂ ಸಿದ್ದುಗೆ ಬುದ್ದಿ ಬಂದಿಲ್ಲ : ಈಶ್ವರಪ್ಪ
ಎಸಿಬಿ ವಿಜಯಪುರ ಡಿಎಸ್ಪಿ ಎಂ.ಕೆ.ಗಂಗಲ್ ನೇತೃತ್ವದಲ್ಲಿ ಸಿಪಿಐ ಹರಿಶ್ಚಂದ್ರ, ಪಿ.ಬಿ.ಕವಟಗಿ, ಸಿಬ್ಬಂದಿ ಗಳಾದ ಅಶೋಕ ಸಿಂಧೂರ, ಸುರೇಶ ಜಾಲಗೇರಿ, ಎ.ಐ.ಶೇಖ, ಎಸ್.ಎಸ್.ಮುಂಜೆ, ಸದಾಶಿವ ಕೋಟ್ಯಾಳ, ಮಾಳಪ್ಪ ಸಲಗೊಂಡ ಇತರರು ದಾಳಿಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.