ಪರಿಶಿಷ್ಟ ಜಾತಿ, ಪಂಗಡದವರ ಸಮಸ್ಯೆ ಇತ್ಯರ್ಥಕ್ಕೆ ಕ್ರಮ: ಡಿಸಿ
Team Udayavani, Apr 9, 2022, 6:05 AM IST
ಮಂಗಳೂರು: ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನಾಂಗದವರ ಸಮಸ್ಯೆಗಳ ಇತ್ಯರ್ಥಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಅವರು ನಗರದ ಉರ್ವಾ ಸ್ಟೋರ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ / ಪಂಗಡದದವರ ವಿದ್ಯಾರ್ಥಿವೇತನ ಕಾಲಕಾಲಕ್ಕೆ ಸಂದಾಯವಾಗ ಬೇಕು. ಸರಕಾರಿ ಸೌಲಭ್ಯಗಳನ್ನು ವಿಳಂಬಿಸದೆ ಮಂಜೂರು ಮಾಡಬೇಕೆಂದು ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಸಾರ್ವಜನಿಕವಾಗಿ ಅಥವಾ ಖಾಸಗಿಯಾಗಿ ಜಾತಿ ನಿಂದನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳ ಬೇಕು; ಪರಿಶಿಷ್ಟ ಜಾತಿ/ಪಂಗಡದ ಜನರು ನೀಡುವ ದೂರುಗಳಿಗೆ ಪೊಲೀಸ್ ಅಧಿಕಾರಿ
ಗಳು ಸೂಕ್ತವಾಗಿ ಸ್ಪಂದಿಸ ಬೇಕು ಎಂದರು.
ಇದನ್ನೂ ಓದಿ:ಡಿಆರ್‌ಡಿಒದ ಕ್ಷಿಪಣಿ ಛೇದನ ಪರೀಕ್ಷೆ ಯಶಸ್ವಿ : ರಕ್ಷಣ ಸಚಿವರಿಂದ ಅಭಿನಂದನೆ
ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನಾಂಗದವರಿಗೆ ಸಾಂಸ್ಕೃತಿಕ ಸಮಾರಂಭ ಸಹಿತ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಉರ್ವಾಸ್ಟೋರ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸಬ್ಸಿಡಿ ದರದಲ್ಲಿ ಅವಕಾಶ ಕಲ್ಪಿಸಿ ಕೊಡಲಾಗುವುದು. ಆಯುಷ್ಮಾನ್ ಭಾರತ್ ಯೋಜನೆಯಡಿ ಈ ಜನಾಂಗದವರಿಗೆ ವೈದ್ಯಕೀಯ ಸೌಲಭ್ಯಗಳನ್ನು ನಿರಾಕರಿಸುವ ಆಸ್ಪತ್ರೆ ಹಾಗೂ ವೈದ್ಯರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಜಿ.ಪಂ. ಸಿಇಒ ಡಾ| ಕುಮಾರ್, ಜಿಲ್ಲಾ ಎಸ್‌ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗೇಶ್ ಬೇವಿನಮಟ್ಟಿ, ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿ ಡಾ| ದಿನೇಶ್ ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.