Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
ಸ್ಕ್ಯಾನಿಂಗ್ ವರದಿ ಆಧಾರದ ಮೇಲೆ ತಪಾಸಣೆ
Team Udayavani, Dec 26, 2024, 7:35 AM IST
ಮೈಸೂರು: ನಗರದ ಕಾಮಾಕ್ಷಿ ಆಸ್ಪತ್ರೆಯಲ್ಲಿ ಮಂಗಳವಾರ ನಟ ದರ್ಶನ್ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದು ಅವರ ಬೆನ್ನು ಮೂಳೆ ಸ್ವಲ್ಪ ಜರುಗಿರುವ ಬಗ್ಗೆ ವರದಿಯಲ್ಲಿ ಕಂಡು ಬಂದಿದೆ.
ದರ್ಶನ್ ಅವರ ದೇಹದ ನರಗಳು ಒತ್ತು ಹಾಕಿಕೊಂಡಿವೆ. ಇದರಿಂದಾಗಿ ಕಾಲು ನೋವು ಹೆಚ್ಚಾಗಿ, ನಡೆಯುವುದಕ್ಕೆ ಕಷ್ಟವಾಗಿದೆ. ಸಮಸ್ಯೆ ಸ್ವಲ್ಪ ಉಲ್ಬಣವಾಗಿರುವುದರಿಂದ ತುರ್ತಾಗಿ ಶಸ್ತ್ರ ಚಿಕಿತ್ಸೆ ಮಾಡಲು ಆಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯದ ಸ್ಥಿತಿಯಲ್ಲಿ ನಿಯಮಿತ ಫಿಸಿಯೋಥೆರಪಿ ಮತ್ತು ಮಾತ್ರೆಗಳಿಂದ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಲಾಗುತ್ತಿದೆ.
ಬೆನ್ನಿನ ಡಿಸ್ಕ್ನಲ್ಲಿ ನೋವು ಕಾಣಿಸಿಕೊಂಡಿದೆ. ಈ ಭಾಗದ ಮೂಳೆಗಳನ್ನು ಗಟ್ಟಿಗೊಳಿಸಲು ಅಗತ್ಯ ವ್ಯಾಯಾಮ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವ್ಯಾಯಾಮ ಮತ್ತು ಔಷಧಗಳಿಂದ ನೋವು ನಿವಾರಣೆಯಾಗದಿದ್ದರೆ ಶಸ್ತ್ರಚಿಕಿತ್ಸೆ ನಡೆಸಬೇಕಾಗುತ್ತದೆ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ.
ದರ್ಶನ್ ತಪಾಸಣೆಗೆ ಪೂರಕವಾದ ಸ್ಕ್ಯಾನಿಂಗ್ ಮೆಷಿನ್ ಮೈಸೂರಿನಲ್ಲಿ ಇಲ್ಲದ ಕಾರಣ ಸ್ಕ್ಯಾನಿಂಗ್ ಮಾಡಿಲ್ಲ. ಈ ಹಿಂದೆ ಬೆಂಗಳೂರಿನಲ್ಲಿ ಮಾಡಿಸಿದ ಸ್ಕ್ಯಾನಿಂಗ್ ವರದಿ ಆಧಾರದ ಮೇಲೆ ತಪಾಸಣೆ ಮಾಡಿದ ವೈದ್ಯರು, ಫಿಸಿಯೋಥೆರಪಿ ಹಾಗೂ ಈಗ ಕೊಟ್ಟಿರುವ ಮಾತ್ರೆಗಳು ಮುಗಿದ ಮೇಲೆ ಬೆಂಗಳೂರಿನಲ್ಲಿ ಸ್ಕ್ಯಾನಿಂಗ್ ಮಾಡಿಸಲು ಆಲೋಚನೆ ಮಾಡಿದ್ದಾರೆ. ದರ್ಶನ್ ಮತ್ತೆ ಶನಿವಾರ ತಪಾಸಣೆಗೆ ಒಳಗಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.