Actress Died: ʼಬ್ರಹ್ಮಗಂಟು’ ಧಾರಾವಾಹಿ ಖ್ಯಾತಿ, ಸಿನಿಮಾ ನಟಿ ಶೋಭಿತಾ ಶಿವಣ್ಣ ನಿಧನ!
ಎರಡು ವರ್ಷದ ಹಿಂದೆ ಮದುವೆಯಾಗಿ ಹೈದರಾಬಾದ್ನಲ್ಲಿ ನೆಲೆಸಿದ್ದ ನಟಿ
Team Udayavani, Dec 1, 2024, 7:58 PM IST
ಬೆಂಗಳೂರು: ‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಖ್ಯಾತಿ ಪಡೆದು ‘ಎರಡೊಂದ್ಲಾ ಮೂರು’, ಎಟಿಎಂ, ‘ಒಂದ್ ಕಥೆ ಹೇಳ್ಲಾ’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ (30) ಹೈದರಾಬಾದ್ನ ತಮ್ಮ ನಿವಾಸದಲ್ಲಿ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಶೋಭಿತಾ, ಮದುವೆ ಬಳಿಕ ಹೈದರಾಬಾದ್ನಲ್ಲೇ ನೆಲೆಸಿದ್ದರು. ಇತ್ತೀಚೆಗೆ ತೆಲುಗು ಚಿತ್ರರಂಗದಲ್ಲೂ ಕಾರ್ಯನಿರ್ವಹಿಸುತ್ತಿದ್ದರು. ಶೋಭಿತಾ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆಕೆಯ ಕುಟುಂಬದವರು ಹೈದರಾಬಾದ್ಗೆ ತೆರಳಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಪಾರ್ಥಿವ ಶರೀರ ಬೆಂಗಳೂರಿಗೆ ತರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮೂಲತಃ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೇರೂರು ಗ್ರಾಮದವರಾದ ಶೋಭಿತಾ ಸಕಲೇಶಪುರದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದರು. ಬ್ರಹ್ಮಗಂಟು, ಕೃಷ್ಣ ರುಕ್ಮಿಣಿ, ಕೋಗಿಲೆ, ಮಂಗಳಗೌರಿ, ಗಾಳಿಪಟ, ಮನೆದೇವರು ಸೇರಿದಂತೆ 12ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿ ಕನ್ನಡ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ನಟಿಯ ಆತ್ಮಹತ್ಯೆಗೆ ಕಾರಣ ಏನೆಂಬುದು ಗೊತ್ತಾಗಿಲ್ಲ. ಶನಿವಾರ (ನ.30) ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಶನಿವಾರವಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿ ಶೇರ್ ಮಾಡಿದ್ದರು. ಆ ಬಳಿಕ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ.
ಚಿತ್ರರಂಗದಲ್ಲೂ ಕೆಲಸ ನಿರ್ವಹಿಸಿದ್ದ ಶೋಭಿತಾ, ಎರಡೊಂದ್ಲ ಮೂರು, ಒಂದ್ ಕಥೆ ಹೇಳ್ಲಾ, ಜಾಕ್ಪಾಟ್, ಎಟಿಎಂ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಸದ್ಯ ಅವರು ನಟಿಸಿದ್ದ “ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾ ತೆರೆಗೆ ಸಿದ್ಧಗೊಂಡಿತ್ತು. ಕಾಲೇಜು ದಿನಗಳಿಂದಲೂ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಶೋಭಿತಾ, ಬಳಿಕ ಟಿವಿ ನಿರೂಪಕಿಯಾಗಿ ತಮ್ಮ ವೃತ್ತಿಜೀವನ ಆರಂಭಿಸಿ ನಂತರ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ಅವಕಾಶ ಪಡೆದಿದ್ದರು. ಅವರ ನಿಧನಕ್ಕೆ ಸಿನಿಮಾ ಮತ್ತು ಧಾರಾವಾಹಿ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.