![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 20, 2021, 7:20 AM IST
ಹೊಸದಿಲ್ಲಿ: ಜನನ ಮತ್ತು ಮರಣ ನೋಂದಣಿಗೆ ಆಧಾರ್ ಸಂಖ್ಯೆ ಬೇಕಾಗಿಲ್ಲ. ಹೀಗೆಂದು ಭಾರತದ ರಿಜಿಸ್ಟ್ರಾರ್ ಜನರಲ್ ಆದೇಶ ನೀಡಿದ್ದಾರೆ. ಜನನ ಮತ್ತು ಮರಣ ನೋಂದಣಿ ಕಾಯ್ದೆ 1969ರಲ್ಲಿ ಆಧಾರ್ ಮಾಹಿತಿ ಮೂಲಕ ನೋಂದಣಿ ಕಾಯ್ದೆಗೆ ಅವಕಾಶ ಇಲ್ಲ ಎಂದು ಇತ್ತೀಚೆಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಹೀಗಾಗಿ, ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಜನನ ಮತ್ತು ನೋಂದಣಾಧಿಕಾರಿಗಳು ಜನನ ಮತ್ತು ಮರಣ ನೋಂದಣಿ ಮಾಡುವ ಸಂದರ್ಭದಲ್ಲಿ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಜನರಿಗೆ ಸೂಚಿಸಬಾರದು ಎಂದು ರಿಜಿಸ್ಟ್ರಾರ್ ಜನರಲ್ ತಮ್ಮ ವರದಿಯಲ್ಲಿ ಉಲ್ಲೇಖೀಸಿದ್ದಾರೆ.
ಉತ್ತರ ಪ್ರದೇಶ ಮತ್ತು ಹರಿಯಾಣಗಳಲ್ಲಿ ಜನನ ಮತ್ತು ಮರಣ ನೋಂದಣಿಗೆ ಆಧಾರ್ ಬಳಕೆ ಮಾಡುತ್ತಿವೆ ಎಂದು ರಿಜಿಸ್ಟ್ರಾರ್ ಜನರಲ್ ತಿಳಿಸಿದ್ದಾರೆ. ಆದರೆ, ರಾಜ್ಯ ಸರಕಾರಗಳು ಹೇಳುವುದೇನೆಂದರೆ 2017ರ ಆಗಸ್ಟ್‌ನಲ್ಲಿ ಬಂದ ನಿರ್ದೇಶನದ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳ ಪ್ರಕಾರ ಅಸುನೀಗಿದ ವ್ಯಕ್ತಿ ಆಧಾರ್ ಕಾರ್ಡ್ ಹೊಂದಿಲ್ಲ ಎಂಬುದಕ್ಕೆ ಆತನ ಕುಟುಂಬಸ್ಥರು ಪ್ರಮಾಣ ಪತ್ರ ಸಲ್ಲಿಸಬೇಕು. 2016ರ ಆಧಾರ್ ಕಾಯ್ದೆಯ ಸೆಕ್ಷನ್ 57ರ ಪ್ರಕಾರ “ಕಾನೂನು ಪ್ರಕಾರವಾಗಿರುವ ಯಾವುದೇ ವ್ಯವಸ್ಥೆ ಮತ್ತು ಒಪ್ಪಂದವನ್ನು 12 ಅಂಕೆಗಳ ಮೂಲಕ ಖಚಿತಪಡಿಸಿಕೊಳ್ಳಲಾಗುತ್ತದೆ’
ಏರಿಕೆ: 2018ರಲ್ಲಿ 2.33 ಕೋಟಿ ಇದ್ದ ಜನನ ನೋಂದಣಿ 2019ರಲ್ಲಿ 2.48 ಕೋಟಿಗೆ ಏರಿಕೆಯಾಗಿತ್ತು. ಅದರಲ್ಲಿ ಮಹಿಳೆಯರ ಪ್ರಮಾಣ ಶೇ.52.1 ಮತ್ತು ಮಹಿಳೆಯರ ಪ್ರಮಾಣ ಶೇ. 47.9 ಆಗಿದೆ. ಮತ್ತೂಂದು ಮಹತ್ವದ ವಿಚಾರವೆಂದರೆ, ಹೆಚ್ಚಿನ ಪ್ರಮಾಣದ ಲಿಂಗಾನುಪಾತ ಅರುಣಾಚಲ ಪ್ರದೇಶ (1,024)ದಲ್ಲಿದೆ. ನಾಗಾಲ್ಯಾಂಡ್‌ನಲ್ಲಿ 1001, ಮಿಜೋರಾಂನಲ್ಲಿ 975, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹದಲ್ಲಿ 965ದಲ್ಲಿದೆ ಎಂದು “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.