ಕೊಡಗಿನ ಸೊಸೆಯಾಗುತ್ತಿದ್ದಾರೆ ಸ್ಯಾಂಡಲ್ ವುಡ್ ಬೆಡಗಿ ಅದಿತಿ ಪ್ರಭುದೇವ : ವರ ಯಾರು ಗೊತ್ತಾ ?
Team Udayavani, Dec 27, 2021, 10:29 PM IST
ಮಡಿಕೇರಿ : ಸ್ಯಾಂಡಲ್ ವುಡ್ ಬೆಡಗಿ ದಾವಣಗೆರೆ ಮೂಲದ ಅದಿತಿ ಪ್ರಭುದೇವ ಕೊಡಗಿನ ಸೊಸೆಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದ್ದು, ವಿವಾಹದ ನಿಶ್ಚಿತಾರ್ಥವಾಗಿದೆ.
ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತ ದಂಪತಿಗಳ ಪುತ್ರ ಯಶಸ್ವಿಯನ್ನು ಅದಿತಿ ವರಿಸಲಿದ್ದಾರೆ. ಯಶಸ್ವಿ ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು, ಕೃಷಿ ಕ್ಷೇತ್ರದ ಕಡೆಗೂ ಒಲವು ಹೊಂದಿದ್ದಾರೆ. ಗ್ರಾಮೀಣ ಭಾಗದ ಸೊಗಡಿನ ಬಗ್ಗೆ ಅತೀವ ಅಭಿಮಾನ ಹೊಂದಿರುವ ಮತ್ತು ಕೃಷಿಕ ಕುಟುಂಬದ ಬಗ್ಗೆ ಆಸಕ್ತಿಯಿದ್ದ ಅದಿತಿ ತಮ್ಮ ನಿರೀಕ್ಷೆಯ ಹುಡುಗನೊಂದಿಗೆ ದಾಂಪತ್ಯ ಜೀವನಕ್ಕೆ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ. ಈಗಾಗಲೇ ನಿಶ್ಚಿತಾರ್ಥದ ಫೋಟೋಗಳು ವೈರಲ್ ಆಗಿದ್ದು, ಅದಿತಿ ಹಾಗೂ ಯಶಸ್ವಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ.
ಅದಿತಿ ಸೋಮವಾರಪೇಟೆಯ ಸೊಸೆಯಾಗುತ್ತಿರುವ ಬಗ್ಗೆ ಅಲ್ಲಿನ ಸನಿ ಅಭಿಮಾನಿಗಳು ಹರ್ಷಗೊಂಡಿದ್ದಾರೆ.
ಮೊದಲಿಗೆ ನಿರೂಪಕಿಯಾಗಿ ತೆರೆ ಮೇಲೆ ಕಾಣಿಸಿಕೊಂಡ ಅದಿತಿ ಬಳಿಕ ‘ಗುಂಡ್ಯಾನ್ ಹೆಂಡ್ತಿ’ ಧಾರವಾಹಿಯ ಮೂಲಕ ಕಿರುತೆರೆ ಪ್ರವೇಶಿಸಿದ್ದರು. 2017 ರಲ್ಲಿ ನಟ ಅಜಯ್ ರಾವ್ ಜೊತೆ ‘ಧೈರ್ಯಂ’ ಚಿತ್ರದಲ್ಲಿ ನಟಿಸುವ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದರು. ಸದ್ಯ ಅನೇಕ ಸಿನಿಮಾ ಆಫರ್ ಗಳನ್ನು ಕೈಯಲ್ಲಿಟ್ಟುಕೊಂಡು ಕನ್ನಡ ಚಿತ್ರರಂಗದ ಬ್ಯುಸಿ ನಟಿಯಾಗಿದ್ದಾರೆ.
ಇದನ್ನೂ ಓದಿ : ಕಾರ್ಮಿಕ ಸಾವನ್ನಪ್ಪಿದ ಸುದ್ದಿ ಮನೆಯವರಿಗೆ ತಿಳಿಸಲು ಹೋದ ಮಾಲೀಕನು ಹೃದಯಾಘಾತದಿಂದ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.