Aditya L1:ಸೂರ್ಯನ ಅಧ್ಯಯನ-ಭೂಮಿಗೆ ಎರಡನೇ ಸುತ್ತನ್ನು ಯಶಸ್ವಿಯಾಗಿ ಪೂರೈಸಿದ ಆದಿತ್ಯ ಎಲ್ 1
Team Udayavani, Sep 5, 2023, 3:09 PM IST
ಬೆಂಗಳೂರು: ಸೂರ್ಯನ ಅಧ್ಯಯನಕ್ಕಾಗಿ ಉಡಾವಣೆಗೊಂಡಿರುವ ಭಾರತದ ಆದಿತ್ಯ ಎಲ್ 1 ಭೂಮಿಯ ಸುತ್ತ ಎರಡನೇ ಸುತ್ತನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದಾಗಿ ಮಂಗಳವಾರ (ಸೆಪ್ಟೆಂಬರ್ 05) ಇಸ್ರೋ ತಿಳಿಸಿದೆ.
ಇದನ್ನೂ ಓದಿ:Teacher’s Day: ತಮ್ಮ ಶಿಕ್ಷಕಿಯನ್ನು ನೆನಪಿಸಿಕೊಂಡು ಭಾವುಕರಾದ ಶಾಸಕ ಗಾಲಿ ಜನಾರ್ದನ ರೆಡ್ಡಿ
ಮಂಗಳವಾರ ನಸುಕಿನ ವೇಳೆ ಸೂರ್ಯಯಾನದ ಆದಿತ್ಯ ಎಲ್ 1 ಉಪಗ್ರಹ ಭೂಮಿಯನ್ನು ಎರಡನೇ ಬಾರಿ ಯಶಸ್ವಿಯಾಗಿ ಸುತ್ತುಹಾಕಿರುವುದಾಗಿ ಹೇಳಿದೆ.
ಇಸ್ರೋದ ಮಾರಿಷಸ್ ನ ಗ್ರೌಂಡ್ ಸ್ಟೇಶನ್, ಬೆಂಗಳೂರು ಮತ್ತು ಪೋರ್ಟ್ ಬ್ಲೇರ್ ಜಂಟಿಯಾಗಿ ಸೆಟಲೈಟ್ ಕಾರ್ಯಾಚರಣೆ ಕುರಿತು ನಿಗಾ ವಹಿಸಿದ್ದು, ಮಾಹಿತಿ ಕಲೆ ಹಾಕಿರುವುದಾಗಿ ಇಸ್ರೋ ವಿವರಿಸಿದೆ.
ಈಗಾಗಲೇ ಭೂಮಿಗೆ ಎರಡನೇ ಸುತ್ತನ್ನು ಪೂರೈಸಿರುವ ಆದಿತ್ಯ ಎಲ್ 1 ಅನ್ನು ಸೆಪ್ಟೆಂಬರ್ 10ರ ರಾತ್ರಿ 2.30ಕ್ಕೆ ಮೂರನೇ ಕಕ್ಷೆಗೆ ಏರಿಸುವ ಕಾರ್ಯ ನಡೆಯಲಿದೆ ಎಂದು ಇಸ್ರೋ ತಿಳಿಸಿದೆ. ಪ್ರಸ್ತುತ ಆದಿತ್ಯ ಎಲ್ 1 282 ಕಿಮೀ X 40225 ಕಿಲೋ ಮೀಟರ್ ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ.
Aditya-L1 Mission:
The second Earth-bound maneuvre (EBN#2) is performed successfully from ISTRAC, Bengaluru.ISTRAC/ISRO’s ground stations at Mauritius, Bengaluru and Port Blair tracked the satellite during this operation.
The new orbit attained is 282 km x 40225 km.
The next… pic.twitter.com/GFdqlbNmWg
— ISRO (@isro) September 4, 2023
ಭಾರತದ ಮೊದಲ ಆದಿತ್ಯ ಎಲ್ 1 ಸೆಟಲೈಟ್ ಅನ್ನು ಸೆಪ್ಟೆಂಬರ್ 2ರಂದು ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿತ್ತು. ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ಸೆಂಟರ್ ಕಕ್ಷೆ ಬದಲಾವಣೆ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.