ಮೂರುವರೆ ವರ್ಷ ಬಳಿಕ ಬಿಎಸ್‌ವೈ ಚುನಾವಣೆಗೆ ನಿಲ್ಲಲ್ಲ: ಕಲ್ಲಡ್ಕ ಪ್ರಭಾಕರ್ ಭಟ್
ಖುದ್ದು ಬಿಎಸ್‌ವೈ ನನಗೆ ಹೇಳಿದ್ದಾರೆಂದ ಆರ್‌ಎಸ್‌ಎಸ್ ಹಿರಿಯ ನಾಯಕ ಕಲ್ಲಡ್ಕ ಪ್ರಭಾಕರ್
Team Udayavani, Jan 19, 2020, 7:09 PM IST
ಚಿಕ್ಕಬಳ್ಳಾಪುರ: ಮುಂದಿನ ಮೂರುವರೆ ವರ್ಷದ ಕಾಲ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಲಿರುವ ಬಿ.ಎಸ್.ಯಡಿಯೂರಪ್ಪ ಬಳಿಕ ಚುನಾವಣೆಗಳಿಂದ ದೂರ ಉಳಿದು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದಾರೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕಾರ್ಯಕಾರಣಿ ಸದಸ್ಯ ಕಲ್ಲಡ್ಕ ಪ್ರಭಾಕರ್ ಭಟ್ಟರು ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಶ್ರೀ ದೇವಿ ಪ್ಯಾಲೇಸ್‌ನಲ್ಲಿ ಭಾನುವಾರ
ಸ್ಥಳೀಯ ಗಾಯಿತ್ರಿ ಸೇವಾ ಸಮಿತಿ ಹಾಗೂ ಗಾಯಿತ್ರಿ ಮಹಿಳಾ ಮಂಡಳಿ ಹಮ್ಮಿಕೊಂಡಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ತಮ್ಮನ್ನು ಬೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತಿಂಗಳ ಹಿಂದೆ ನಾನು ಅವರನ್ನು ಬೇಟಿಯಾಗಿದ್ದೆ. ಅವರೇ ಸಂತೋಷದಿಂದ ನನಗೆ ಹೇಳಿದ ಮಾತು ಇದು. ನಾನು ಮೂರುವರೆ ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ರೈತರ, ರ್ದುಬಲ ವರ್ಗಗಳ ಅಭಿವೃದ್ದಿಗೆ ಚೆನ್ನಾಗಿ ಕೆಲಸ ಮಾಡುತ್ತೇನೆ. ಮತ್ತೆ ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಪಕ್ಷ ಹಾಗೂ ಜನ ನನಗೆ ಎಲ್ಲ ರೀತಿಯ ಜವಾಬ್ದಾರಿ ಹಾಗೂ ಅಧಿಕಾರ ನೀಡಿದ್ದಾರೆ.
ಆದ್ದರಿಂದ ಪಕ್ಷಕ್ಕೋಸ್ಕರ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖುದ್ದು ನನ್ನ ಜೊತೆಗೆ ಹೇಳಿದ್ದಾರೆಂದು ಕಲ್ಲಡ್ಕ ಪ್ರಭಾಕರ್ ತಿಳಿಸಿದರು.
ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ, ಇನ್ನೂ ಮುಂದಿನ ಮೂವರೆ ವರ್ಷದ ಕಾಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಯೆ ಸರ್ಕಾರ ನಡೆಯಲಿದೆ. ಯಾರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು. ಯಡಿಯೂರಪ್ಪಗೆ ಜನರ ಬಗ್ಗೆ ದುಃಖೀತರಿಗೆ ಏನಾದರೂ ಗೌರವದಿಂದ ಮಾಡಬೇಕೆಂಬ ದೃಷ್ಠಿಯನ್ನು ಹೊಂದಿರುವ ವ್ಯಕ್ತಿ. ಮಣ್ಣಿನ ಮಗ, ರೈತನ ಮಗ ಎಂದ ಪ್ರಭಾಕರ್, ಇಡೀ ದೇಶದಲ್ಲಿ ರೈತರ ಬಜೆಟ್ ತಂದವರು ಯಾರದರೂ ಇದ್ದರೆ ಅದು ಯಡಿಯೂರಪ್ಪ ಮಾತ್ರ. ಕಳೆದ 60 ವರ್ಷದಲ್ಲಿ ಯಾರು ಮಾಡದ ಕೆಲಸವನ್ನು ಯಡಿಯೂರಪ್ಪ ರೈತರ ಪರವಾಗಿ ಬಜೆಟ್ ಮಾಡಿದರು. ಆದ್ದರಿಂದ ಅವರು ರೈತರ ಬಗ್ಗೆ ಇರುವ ಅನುಭವಿ ರಾಜಕಾರಣಿ, ಕಳೆದ 42 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿ ಬಂದ ವ್ಯಕ್ತಿ ಅವರು, ಇವತ್ತು ಯಾವುದೋ ಜಾತಿ, ಹಣದ ಆಧಾರದ ಮೇಲೆ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕಿದೆ ಎನ್ನುವುದು ತಪ್ಪು, ಅವರು ಸತತವಾಗಿ ನಡೆಸಿಕೊಂಡು ಬಂದ ಹೋರಾಟದಿಂದ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಶೂನ್ಯದಿಂದ ಕಟ್ಟಿದ್ದಾರೆ. ಹೋರಾಟಗಳ ಮುಖಾಂತರವೇ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.