Agriculture: ಸಾವಯವ ಕೃಷಿಗೆ ಗಮನ ಕೊಡಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ
ಬ್ರಹ್ಮಾವರದಲ್ಲಿ ಕೃಷಿ ಮೇಳ ಉದ್ಘಾಟನೆ
Team Udayavani, Oct 27, 2024, 1:34 AM IST
ಬ್ರಹ್ಮಾವರ: ಕೃಷಿಯಲ್ಲಿ ರಾಸಾಯನಿಕ ಅತಿಯಾಗಿ ಬಳಸುವು ದರಿಂದ ಮಣ್ಣಿನ ಫಲವತ್ತತೆ ಮತ್ತು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ರೈತರು ಇದನ್ನು ಗಂಭೀರ ವಾಗಿ ಪರಿಗಣಿಸಿ, ಸಾವಯವ ಕೃಷಿಯತ್ತ ಹೆಚ್ಚಿನ ಗಮನ ಹರಿಸುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಕರೆ ನೀಡಿದರು.
ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರದ ಆವರಣದಲ್ಲಿ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಆರಂಭ ಗೊಂಡ ಎರಡು ದಿನಗಳ ಕೃಷಿ ಮೇಳ ಉದ್ಘಾಟಿಸಿ ಮಾತನಾಡಿದರು. ಕೃಷಿ ಕ್ಷೇತ್ರ ಗಂಭೀರ ಸಮಸ್ಯೆಗಳಿಂದ ಬಳಲುತ್ತಿದ್ದು, ಮುಂದೊಂದು ದಿನ ತುತ್ತು ಅನ್ನಕ್ಕೂ ಸಮಸ್ಯೆ ಆದೀತು. ಆದ್ದರಿಂದ ಕೃಷಿಗೆ ಪ್ರಾಧಾನ್ಯತೆ ನೀಡಿ ರೈತರನ್ನು ಉತ್ತೇಜಿಸಬೇಕಿದೆ ಎಂದರು. ಕೃಷಿಕರು ಮತ್ತು ಕೃಷಿ ಕ್ಷೇತ್ರ ಪ್ರಾಕೃತಿಕ, ಮಾರುಕಟ್ಟೆ ಮತ್ತು ಕಾರ್ಮಿಕರ ಸಮಸ್ಯೆ ಮುಂತಾದ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಸರಕಾರ ರೈತರನ್ನು ಆಧರಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಕೋಟದ ಜನತಾ ಫಿಶ್ ಮೀಲ್ ಮತ್ತು ಆಯಿಲ್ ಪ್ರೊಡಕ್ಟ್ಸ್‌ನ ಎಂಡಿ ಆನಂದ ಸಿ. ಕುಂದರ್ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸಿ. ಇಂದಿನ ಪಠ್ಯ ಪುಸ್ತಕಗಳಲ್ಲಿ ಕೃಷಿ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಪಾಠ ಇರಬೇಕು. ಆಗ ಮಕ್ಕಳಿಗೆ ಅರಿವು ಮೂಡೀತು. ಜನಪ್ರತಿನಿಧಿಗಳ ಈ ನಿಟ್ಟಿನಲ್ಲಿ ಗಮನರಿಸಬೇಕು ಎಂದು ಹೇಳಿದರು.
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿ.ವಿ. ಕುಲಪತಿ ಡಾ| ಆರ್.ಸಿ. ಜಗದೀಶ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕರನ್ನು ಸಮ್ಮಾನಿಸಲಾಯಿತು. ಡಾ| ಧನಂಜಯ ಸ್ವಾಗತಿಸಿ, ಸಂತೋಷ್ ಶೆಟ್ಟಿ ನೀಲಾವರ ನಿರೂಪಿಸಿದರು. ಡಾ| ಶಂಕರ್ ಎಂ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.