Agriculture; ರಾಜ್ಯದ 51 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ: ಸಿಎಂ ಸಿದ್ದರಾಮಯ್ಯ
ಇನ್ನೂ 32 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಬಾಕಿ 2,91,940 ಕ್ವಿಂ. ಬಿತ್ತನೆ ಬೀಜ, 11,62,498 ಮೆ.ಟನ್ ರಸಗೊಬ್ಬರ ಮಾರಾಟ
Team Udayavani, Jul 10, 2024, 7:25 AM IST
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 82.48 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು ಇದುವರೆಗೆ 50.91 ಲಕ್ಷ ಹೆಕ್ಟೇರ್ ಬಿತ್ತನೆ ಮಾಡಲಾಗಿದೆ ಇನ್ನೂ 32 ಲಕ್ಷ ಹೆಕ್ಟೇರ್ ಬಿತ್ತನೆ ಮಾಡಬೇಕಾ ಗಿದ್ದು ಈ ಬಾರಿ ಎಲ್ಲ ಕಡೆ ಉತ್ತಮ ಮಳೆಯಾಗಿರುವ ಕಾರಣ ಬಿತ್ತನೆ ಗುರಿ ಸಾಧಿಸುವ ಭರವಸೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಬಿತ್ತನೆ ಬಳಿಕ ಮಳೆಯಾಗದೇ ಮೊಳಕೆಯಲ್ಲೇ ಹಾಳಾಗಿ ರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಪ್ರಸ್ತುತ ಸಾಲಿನಲ್ಲಿ 2,91,940 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದ್ದು, ಬೀಜ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದೆ ಎಂದರು.
11,62,498 ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿದ್ದು, ಇನ್ನೂ 15,16,007 ಮೆಟ್ರಿಕ್ ಟನ್ ದಾಸ್ತಾನು ಇದೆ. ರಸಗೊಬ್ಬರ ಸಮರ್ಪಕವಾಗಿ ವಿತರಣೆಗೆ ಎಲ್ಲ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರೈತರಿಗೆ ಬೆಳೆ ವಿಮೆ ಸರಿಯಾಗಿ ದೊರೆಯುವುದನ್ನು ಖಾತ್ರಿಪಡಿಸಲು ಬೆಳೆ ಕಟಾವು ಪ್ರಯೋಗವನ್ನು ಹೆಚ್ಚಿಸಬೇಕು. ಈ ಸಂದರ್ಭದಲ್ಲಿ ರೈತ ಪ್ರತಿನಿಧಿ ಸಹ ಸ್ಥಳದಲ್ಲಿ ಹಾಜರಿರಬೇಕು ಎಂದರು.
ಕಳೆದ ಸಾಲಿನಲ್ಲಿ ಬೆಳೆವಿಮೆ ಯೋಜನೆಯಡಿ 24,52,393 ರೈತರು ನೋಂದಣಿ ಮಾಡಿದ್ದು ಪ್ರಸ್ತುತ ಮುಂಗಾರಿನಲ್ಲಿ ಇದು ವರೆಗೆ 5,08,550 ರೈತರು ನೋಂದಣಿ ಮಾಡಿದ್ದಾರೆ. ಇನ್ನೂ 1,943,843 ರೈತರು ನೋಂದಣಿ ಮಾಡಬೇಕಾ ಗಿದೆ. ಬೆಳೆ ವಿಮೆ ಲಾಭ ರೈತರಿಗೆ ಗರಿಷ್ಠ ಪ್ರಮಾಣದಲ್ಲಿ ದೊರೆಯುವುದನ್ನು ಖಾತ್ರಿಪಡಿಸಬೇಕು. ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಿಂದ ಕೆಲವು ರಾಜ್ಯಗಳು ಹೊರ ಬಂದಿವೆ.
ಬೆಳೆ ವಿಮೆ ಯೋಜನೆಯ ಸಮರ್ಪಕ ಅನುಷ್ಠಾನ ಕುರಿತು ಪರಿಶೀಲನೆ ನಡೆಸಲು ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಹಿರಿಯ ಸಚಿವರ ಸಭೆಯನ್ನು ನಡೆಸಲಾಗುವುದು. ರೈತರಿಗೆ ಬೆಳೆವಿಮೆಯ ಲಾಭ ಪೂರ್ಣವಾಗಿ ದೊರೆಯುವಂತೆ ಮಾಡುವುದು ನಮ್ಮ ಗುರಿಯಾಗಬೇಕು ಎಂದರು.
ಬೆಳೆ ಸಮೀಕ್ಷೆ ಸಮರ್ಪಕವಾಗಿ ನಡೆಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಬೆಳೆ ಸಮೀಕ್ಷೆ ಶೇ.100ರಷ್ಟು ಕೈಗೊಳ್ಳಬೇಕು. ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಸಾಕಷ್ಟು ಅನುದಾನ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕು. ಈ ಕುರಿತು ರೈತರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.