ಆಗುಂಬೆ ಘಾಟಿ ಗುಡ್ಡ ಕುಸಿತ ಭೀತಿ, ಅಧಿಕ ಭಾರದ ವಾಹನ ಸಂಚಾರಕ್ಕೆ ನಿಷೇಧ
Team Udayavani, Aug 16, 2019, 2:51 PM IST
ಶಿವಮೊಗ್ಗ: ಕಳೆದ ಕೆಲ ದಿನಗಳಿಂದ ಭಾರೀ ಮಳೆ ಆಗುತ್ತಿದ್ದು ಪರಿಣಾಮವಾಗಿ ಜನ ಜೀವನದೊಟ್ಟಿಗೆ ಕೆಲ ಪ್ರದೇಶದಲ್ಲಿ ಸಂಚಾರ ಮಾರ್ಗ ಅಸ್ತವ್ಯಸ್ತಗೊಂಡಿವೆ.
ಮಲೆನಾಡಿನಲ್ಲಿ ಭಾಗದಲ್ಲಿ ಅಧಿಕ ಮಳೆ ಆಗುತ್ತಿದ್ದು ಹಲವಡೆ ಗುಡ್ಡ ಕುಸಿತದ ಭೀತಿಯಿಂದ ಸಂಚಾರ ಮಾರ್ಗವನ್ನು ಸ್ಥಗಿತಗೊಳಿಸಲಾಗಿದೆ.ತೀರ್ಥಹಳ್ಳಿ ಹಾಗೂ ಉಡುಪಿ ಮಧ್ಯದ ಮಾರ್ಗ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿಯುವ ಆತಂಕವಿದ್ದು ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಬಿ.ಶಿವಕುಮಾರ್ ಆದೇಶಿಸಿದ್ದಾರೆ.
ಕಳೆದ ಮಳೆಗಾಲದಲ್ಲಿ ಗುಡ್ಡ ಕುಸಿದ ಪರಿಣಾಮವಾಗಿ ಮೇ ಒಂದು ತಿಂಗಳ ಕಾಲ ಶಾಶ್ವತ ಕಾಮಗಾರಿಯ ಅನುಕೂಲಕ್ಕಾಗಿ ವಾಹನ ಸಂಚಾರ ನಿಷೇಧಿಸಲಾಗಿತ್ತು.ಕೆಲ ಸಮಯದ ಬಳಿಕ ಮಿನಿ ಬಸ್, ಜೀಪು, ವ್ಯಾನ್, ಕಾರು, ದ್ವಿಚಕ್ರ, ಎಲ್‌ಸಿವಿ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. 12 ಟನ್‌ಗಿಂತ ಕಡಿಮೆ ಇರುವ ವಾಹನಗಳಿಗೆ ಮಳೆಗಾಲ ಮುಗಿಯುವವರೆಗೆ ನಿಷೇಧ ಹೇರಲಾಗಿತ್ತು. ಈಗ ಅದೇ ಆದೇಶವನ್ನು ಮುಂದುವರೆಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.