ಅಕ್ರಮ ಮನೆಗಳ ಸಕ್ರಮ
Team Udayavani, Jan 24, 2020, 6:45 AM IST
ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿಕೊಂಡವರ ಮನೆ ಸಕ್ರಮ
2012ಕ್ಕಿಂತ ಮೊದಲು ಕಟ್ಟಿದ 20ಗಿ30, 30ಗಿ40 ಅಡಿ ಮನೆಗೆ ಅನ್ವಯ
ಬೆಂಗಳೂರು: ಕಂದಾಯ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. 2012ರ ಜ.1ಕ್ಕಿಂತ ಮುನ್ನ ಕಂದಾಯ ಜಮೀನಿನಲ್ಲಿ ಮನೆ ಕಟ್ಟಿಕೊಂಡ ಬಡವರ ಮನೆಗಳನ್ನು ಸಕ್ರಮಗೊಳಿಸಲು ನಿರ್ಧರಿಸಲಾಗಿದೆ.
ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್. ಅಶೋಕ್, ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಅನ್ವಯ ನಗರ ಪ್ರದೇಶಗಳಲ್ಲಿ 94ಸಿ, ಗ್ರಾಮೀಣ ಪ್ರದೇಶಗಳಲ್ಲಿ 94ಸಿಸಿ ಕಲಂಗಳನ್ನು ತಿದ್ದುಪಡಿ ಮಾಡ ಲಾಗಿದೆ ಎಂದಿದ್ದಾರೆ. ಇದರನ್ವಯ ಕಂದಾಯ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಬಡವರ ಮನೆಗಳನ್ನು ಸಕ್ರಮ ಗೊಳಿಸಲಾಗುವುದು. 20ಗಿ30 ಮತ್ತು 30ಗಿ40 ಅಡಿ ಅಳತೆಯ ಮನೆಗಳಿಗೆ ಮಾತ್ರ ಇದು ಅನ್ವಯ ವಾಗಲಿದ್ದು, ರಾಜ್ಯಾದ್ಯಂತ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ಫಲಾನುಭವಿಗಳ ಗುರುತು
ಅರ್ಹ ಫಲಾನುಭವಿಗಳನ್ನು ಗುರುತಿಸಲು ಮತದಾರರ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಮನೆಗಳಿಗೆ ಪಡೆದಿರುವ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಮುಂತಾದ ದಾಖಲೆಗಳನ್ನು ಈಗಾಗಲೇ ಪರಿಶೀಲಿಸಿ, ಅರ್ಹರನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.
ಶ್ಮಶಾನಕ್ಕೆ ಜಮೀನು: ಸೂಚನೆ
ರಾಜ್ಯದಲ್ಲಿ ಪ್ರತಿಯೊಂದು ಹಳ್ಳಿಗೆ ಕಂದಾಯ ಇಲಾಖೆಯ ಮೂಲಕ ಕನಿಷ್ಠ 5 ಎಕರೆ ಕಂದಾಯ ಜಮೀನು ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ಹಳ್ಳಿಗೂ ಶ್ಮಶಾನ ಜಮೀನು ನೀಡಬೇಕು. ಕಂದಾಯ ಇಲಾಖೆ ಜಮೀನು ಇಲ್ಲದಿದ್ದರೂ ಇಲಾಖೆ ಮೂಲಕ ಖಾಸಗಿ ಜಮೀನು ಖರೀದಿಸಿ ಶ್ಮಶಾನಕ್ಕೆ ಜಮೀನು ಮಂಜೂರು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಕಟ್ಟಡ, ವಸತಿ ನಿಲಯ, ಅಂಗನವಾಡಿ, ಶ್ಮಶಾನ ಸಹಿತ ಇತರ ಸಾರ್ವಜನಿಕರ ಉಪಯೋಗಕ್ಕೆ 1,190 ಎಕರೆ ಜಮೀನು ಹಂಚಿಕೆ ಮಾಡಲಾಗಿದೆ ಎಂದು ಸಚಿವ ಅಶೋಕ್ ಹೇಳಿದರು.
ಅಕ್ರಮ ಸಕ್ರಮ ಅರ್ಜಿ ವಿವರ2,53,072 ಸಲ್ಲಿಕೆಯಾಗಿರುವ ಅರ್ಜಿ
2,53,072 ಸಲ್ಲಿಕೆಯಾಗಿರುವ ಅರ್ಜಿ
60,061 ಅರ್ಜಿ ಮಂಜೂರಾತಿ
1,47,465 ಅರ್ಜಿ ತಿರಸ್ಕಾರ
45,546 ವಿಲೇವಾರಿಗೆ ಬಾಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.