ಚಿಮಿಣಿ ದೀಪದ ಬೆಳಕಿನ ಸಾಧಕಿ ಅಕ್ಷಿತಾ ಹೆಗ್ಡೆಗೆ ಜ. 14 ರಂದು ಮನೆ ಹಸ್ತಾಂತರ
Team Udayavani, Dec 20, 2020, 10:53 AM IST
ಶಿರ್ವ: ಚಿಮಿಣಿ ದೀಪದ ಬೆಳಕಿನಲ್ಲಿ ಓದಿ ಸಾಧನೆಗೈದ ಸಾಧಕಿ ಅಕ್ಷಿತಾ ಹೆಗ್ಡೆ ಅವರಿಗೆ ದಾನಿಗಳ ನೆರವಿನಿಂದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ನೇತೃತ್ವದಲ್ಲಿ ಸುಮಾರು 8.5 ಲ.ರೂ. ವೆಚ್ಚದಲ್ಲಿ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜು ಬಳಿ ನೂತನ ಮನೆ ನಿರ್ಮಾಣಗೊಳ್ಳುತ್ತಿದ್ದು, ಜ. 14ರಂದು ಗೃಹಪ್ರವೇಶ ಮತ್ತು ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.
ಅಕ್ಷಿತಾ ಅವರ ಅಸಹಾಯಕ ಪರಿಸ್ಥಿತಿಯ ಕುರಿತು 2018ರ ಜು. 24ರಂದು ಉದಯವಾಣಿ ಮುಖಪುಟದಲ್ಲಿ ವರದಿ ಪ್ರಕಟಿಸಿತ್ತು. ಅಮೆರಿಕದ ಉದ್ಯಮಿ ಪಿಲಾರು ಸಂತೋಷ್ ಶೆಟ್ಟಿ, ಅಟ್ಟಿಂಜೆ ಪ್ರದೀಪ್ ಶಂಭು ಶೆಟ್ಟಿ, ಶಿರ್ವ ನಡಿಬೆಟ್ಟು ಸಂಗೀತಾ ಹೆಗ್ಡೆ ಮತ್ತು ಶಿರ್ವ ಎಂಎಸ್‌ಆರ್‌ಎಸ್ ಕಾಲೇಜು ಅಲುಮ್ನಿ ಅಸೋಸಿಯೇಶನ್ ಮುಂಬಯಿ ಅವರು ವರದಿ ಪ್ರಕಟಗೊಂಡ ದಿನವೇ ನೆರವಿನ ಭರವಸೆ ನೀಡಿದ್ದರು.
ಮನೆ ನಿರ್ಮಿಸಲು 4 ಲ.ರೂ. ಮೌಲ್ಯದ ಜಮೀನನ್ನು ಸ್ಥಳೀಯ ದಾನಿಗಳು ನೀಡಿದ್ದು, 2018ರ ಡಿ. 13ರಂದು ಮನೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಆದರೆ ಜಮೀನು ದಾಖಲೆಯ ಬಗ್ಗೆ ಕಂದಾಯ ಇಲಾಖೆಯ ಕೆಲವು ತಾಂತ್ರಿಕ ತೊಂದರೆ ಹಾಗೂ ಕೊರೊನಾ ಲಾಕ್‌ಡೌನ್‌ನಿಂದಾಗಿ ಮನೆ ನಿರ್ಮಾಣ ಕಾರ್ಯದಲ್ಲಿ ವಿಳಂಬವಾಗಿತ್ತು. ಬೋರ್‌ವೆಲ್‌ನೊಂದಿಗೆ ಆವರಣ ಗೋಡೆಯನ್ನು ನಿರ್ಮಿಸಲಾಗಿದೆ. ಸ್ಥಳೀಯರು ಕೂಡ ಮನೆ ನಿರ್ಮಾಣ ಕಾರ್ಯದಲ್ಲಿ ಸಹಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.