Alanda: ಗ್ರಾಮ ಪಂಚಾಯಿತಿ ಮಾಜಿ ಸದಸ್ಯನಿಗೆ ಗುಂಡಿಟ್ಟು ಕೊಂದ ದುಷ್ಕರ್ಮಿಗಳು!
ಘಟನಾ ಸ್ಥಳಕ್ಕೆ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಭೇಟಿ
Team Udayavani, Sep 13, 2024, 9:09 PM IST
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ವಾಗ್ದಾರಿ ರಸ್ತೆಯ ಖಾನಾಪುರ ಬಳಿ ಗುಂಡಿಕ್ಕಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಬರ್ಬರ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ವಿಶ್ವನಾಥ್ ಜಮಾದಾರ (50) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆಯಾದ ವಿಶ್ವನಾಥ್ ಪಡುಸಾವಳಿಯಿಂದ ಆಳಂದ ಪಟ್ಟಣಕ್ಕೆ ಬೈಕ್ ನಲ್ಲಿ ಬರುತ್ತಿದ್ದರು. ಎದುರಿಗೆ ಮತ್ತೊಂದು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ಸ್ಥಳಕ್ಕೆ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹತ್ಯೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.