Alleged: ಇದು 60 ಪರ್ಸೆಂಟ್ ಲಂಚದ ಕಾಂಗ್ರೆಸ್ ಸರಕಾರ: ಎಚ್.ಡಿ.ಕುಮಾರಸ್ವಾಮಿ ಆರೋಪ
ವಿಧಾನಸೌಧದಲ್ಲಿ ಸಚಿವರೇ ರಾಜಾರೋಷವಾಗಿ ಲಂಚ ಪಡೆಯುತ್ತಿದ್ದಾರೆ, ಆರೋಪ ಮಾಡುವುದಾದರೆ ದಾಖಲೆ ಸಹಿತ ಸಾಬೀತುಪಡಿಸಿ: ಸಿದ್ದರಾಮಯ್ಯ ಸವಾಲು
Team Udayavani, Jan 6, 2025, 7:40 AM IST
ಮೈಸೂರು: ಕಾಂಗ್ರೆಸ್ ಸರಕಾರದಲ್ಲಿ ಲಂಚದ ಪ್ರಮಾಣ ಶೇ. 60ಕ್ಕೆ ತಲುಪಿದೆ. ಬಡವರಿಗೆ ಕೊಡುವ ಮನೆಗಳ ಹಂಚಿಕೆಯಲ್ಲಿಯೂ ಲಂಚ ಪಡೆಯಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮಾತನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ. ಮೊದಲು ಪಿಡಿಒ (ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ) ಲಂಚ ಪಡೆಯುತ್ತಿದ್ದರು. ಈಗ ವಿಧಾನಸೌಧದಲ್ಲಿ ಸಚಿವರೇ ರಾಜಾರೋಷವಾಗಿ ಪಡೆಯುತ್ತಿದ್ದಾರೆ. ಇವರ “ಸತ್ಯಮೇವ ಜಯತೆ’ ಬರೀ ಜಾಹೀರಾತಿಗೆ ಸೀಮಿತ ಎಂದು ಕುಟುಕಿದರು.
ಗಾಂಧೀಜಿ ಅವರ ಸತ್ಯಮೇವ ಜಯತೆ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆದುಕೊಳ್ಳುತ್ತಿದ್ದಾರಾ? ಅವರ ಆತ್ಮಕ್ಕೆ ಅವರೇ ಉತ್ತರ ಕೊಟ್ಟುಕೊಳ್ಳಲಿ. ಹಣ ಲೂಟಿ ಮಾಡುವುದಕ್ಕೆ ಇತಿಮಿತಿ ಇಲ್ಲವೇ? ಎಂದು ಕುಮಾರಸ್ವಾಮಿ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ರಾಜ್ಯದ ಗುತ್ತಿಗೆದಾರರ ಪರಿಸ್ಥಿತಿ ಶೋಚನೀಯವಾಗಿದೆ. ಕಾಂಗ್ರೆಸ್ ಪಕ್ಷದ ಪರವಾಗಿರುವ ಗುತ್ತಿಗೆದಾರರು ಇವತ್ತಿನ ಪರಿಸ್ಥಿತಿ ನೋಡಿದರೆ ಹಿಂದಿನ ಬಿಜೆಪಿ ಸರಕಾರವೇ ಚೆನ್ನಾಗಿತ್ತು ಎನ್ನುತ್ತಿದ್ದಾರೆ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ದರವನ್ನು ಒಮ್ಮೆಲೇ ಶೇ. 15ರಷ್ಟು ಏರಿಕೆ ಮಾಡಿರುವ ಸರಕಾರ ಮಧ್ಯಮ ವರ್ಗದ ಜನರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ. “ಅತ್ತೆಯದನ್ನು ಅಳಿಯ ದಾನ ಮಾಡಿದ’ ಎನ್ನುವ ಗಾದೆಮಾತಿನಂತೆ ಅವರಿಂದ ಕಿತ್ತು ಅವರಿಗೆ ಕೊಡುವುದಕ್ಕೆ ಇವರೇ ಆಗಬೇಕಾ? ಪ್ರಯಾಣ ದರ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆಯಾಗಲಿದೆ. ಯಾವುದೇ ಮಂತ್ರಿಯ ಮಕ್ಕಳು, ಶಾಸಕರ ಮಕ್ಕಳು ಸರಕಾರಿ ಬಸ್‌ನಲ್ಲಿ ಓಡಾಡುವುದಿಲ್ಲ. ಓಡಾಡುವವರೆಲ್ಲಾ ಜನ ಸಾಮಾನ್ಯರು. ದಿನಕ್ಕೆ 10 ರೂಪಾಯಿ ಹೆಚ್ಚಿಗೆಯಾದರೂ ಅದು ಅವರಿಗೆ ಹೊರೆಯೇ ಎಂದು ಕಳವಳ ವ್ಯಕ್ತಪಡಿಸಿದರು.
ಜನರು ಕೊಡಬೇಕು
ವಿಪಕ್ಷವಾಗಿ ರಾಜ್ಯದಲ್ಲಿ ಬಿಜೆಪಿ ವಿಫಲಗೊಂಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ನಾನು ಹೇಳುವುದಲ್ಲ. ಜನರು ಸರ್ಟಿಫಿಕೆಟ್ ಕೊಡುತ್ತಾರೆ ಎಂದರು.
ಮಾಂಸ ಖರೀದಿಗೆ ಎಷ್ಟು ಕಷ್ಟ ಪಡುತ್ತಾರೆ, ಗೊತ್ತಾ?’
ಬಸ್ ಪ್ರಯಾಣ ದರ ಏರಿಕೆ ಪ್ರಶ್ನಿಸಿದರೆ ಮಾಂಸ ತಿನ್ನುವುದಿಲ್ಲವೇ ಎಂದು ಸಚಿವರು ಹಾರಿಕೆಯ ಉತ್ತರ ನೀಡುತ್ತಾರೆ. ಬಡವರು ಮಾಂಸ ತಿನ್ನುವುದರ ಮೇಲೆ ಇವರಿಗೇಕೆ ಕಣ್ಣು? ಬಡ ಮಧ್ಯಮ ವರ್ಗದವರು ವಾರಕ್ಕೆ ಒಮ್ಮೆ ಮಾಂಸ ಖರೀದಿ ಮಾಡಲು ಎಷ್ಟು ಕಷ್ಟಪಡುತ್ತಾರೆ ಎಂದು ಇವರಿಗೆ ಗೊತ್ತಿದೆಯಾ? ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅದಕ್ಕೆ ಇವರ ಕಾರ್ಯಕ್ರಮ ಏನು? ಅಷ್ಟು ಪರಿಜ್ಞಾನ ಬೇಡವೇ ಇವರಿಗೆ ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.
ಗ್ಯಾರಂಟಿ ಯೋಜನೆ ದಯವಿಟ್ಟು ನಿಲ್ಲಿಸಬೇಡಿ: ಕೇಂದ್ರ ಸಚಿವ
ಮಳವಳ್ಳಿ: ಜನರಿಗೆ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಹೇಗಾದರೂ ಮಾಡಿ ನಿಲ್ಲಿಸಬೇಕೆಂದು ರಾಜ್ಯದ ಕಾಂಗ್ರೆಸ್ ಸರಕಾರ ಕಾರಣ ಹುಡುಕುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ವ್ಯಂಗ್ಯವಾಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಯಾವುದೇ ಕಾರಣಕ್ಕೂ ಉಚಿತ ಯೋಜನೆಗಳನ್ನು ನಿಲ್ಲಿಸಬೇಡಿ ಎಂದು ಆಗ್ರಹಿಸಿದರು.
ಆರೋಪ ಮಾಡುವುದಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಸಿದ್ದರಾಮಯ್ಯ ಸವಾಲು
ವಿಪಕ್ಷಗಳಿಗೆ ಕೇವಲ ಆರೋಪ ಮಾಡುವುದೇ ಕೆಲಸವಾಗಿಬಿಟ್ಟಿದೆ. ಏನೇ ಆರೋಪ ಮಾಡುವುದಿದ್ದರೂ ದಾಖಲೆಗಳ ಸಹಿತ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ನಮ್ಮ ಸರಕಾರದಲ್ಲಿ ಶೇ. 60 ಕಮಿಷನ್ ಪಡೆಯಲಾಗಿದೆ ಎಂದು ಆರೋಪಿಸುವವರು ಮೊದಲು ಅದನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡುವುದು ಸರಿಯಲ್ಲ. ಎಚ್.ಡಿ.ಕುಮಾರಸ್ವಾಮಿ ಈ ಹಿಂದೆಯೂ ಹಲವಾರು ಆರೋಪ ಮಾಡಿದ್ದಾರೆ. “ಹಿಟ್‌ಆ್ಯಂಡ್ ರನ್’ನಲ್ಲಿ ಅವರು ಸಿದ್ಧಹಸ್ತರು. ಒಂದು ಆರೋಪವನ್ನೂ ಸಾಬೀತುಪಡಿಸಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.