Alvas Award: ಪಂಡಿತ್ ಎಂ. ವೆಂಕಟೇಶ್ ಕುಮಾರ್‌ಗೆ 2024ರ ‘ಆಳ್ವಾಸ್ ವಿರಾಸತ್’ ಪ್ರಶಸ್ತಿ
Team Udayavani, Oct 28, 2024, 1:53 AM IST
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 30 ವರ್ಷಗಳಿಂದ ನಡೆಯುತ್ತ ಬರುತ್ತಿರುವ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ ಈ ಬಾರಿ ಡಿ. 10ರಿಂದ 15ರ ವರೆಗೆ ನಡೆಯಲಿದ್ದು ಪ್ರಸಿದ್ಧ ಹಿಂದೂಸ್ಥಾನಿ ಗಾಯಕ ಮತ್ತು ಗುರು ಪದ್ಮಶ್ರೀ ಪಂಡಿತ್ ಎಂ. ವೆಂಕಟೇಶ್ ಕುಮಾರ್ ಅವರಿಗೆ “ಆಳ್ವಾಸ್ ವಿರಾಸತ್-2024′ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪ್ರಕಟಿಸಿದ್ದಾರೆ.
ಗುರು ಪುಟ್ಟರಾಜ ಗವಾಯಿ ಅವರಿಂದ ಗ್ವಾಲಿಯರ್ ಮತ್ತು ಕಿರಾಣಾ ಘರಾಣಾ ಶೈಲಿಯ ಎಲ್ಲ ಹೊಳಹುಗಳನ್ನು ಕಲಿತ ವೆಂಕಟೇಶ ಕುಮಾರರು ಕರ್ಣಾಟಕ ಸಂಗೀತದಲ್ಲೂ ಹೆಸರಾದವರು. ಭಕ್ತಿ ಸಂಗೀತದಲ್ಲಿ ಕನ್ನಡ ವಚನ ಮತ್ತು ದಾಸರ ಪದ ಗಾಯನದಲ್ಲಿಯೂ ಪ್ರಸಿದ್ಧರು.
ಪದ್ಮಶ್ರೀ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಕರ್ನಾಟಕ ಸಂಗೀತ ನಾಟ್ಯ ಅಕಾಡೆಮಿ ಪ್ರಶಸ್ತಿ, ಭೀಮಸೇನ ಜೋಶಿ ಪ್ರಶಸ್ತಿ, ಕಾಳಿದಾಸ ಪ್ರಶಸ್ತಿಗಳೇ ಮೊದಲಾದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿರುವ ಅವರು ದೇಶ ವಿದೇಶಗಳ ಪ್ರಮುಖ ಸಂಗೀತ ಸಭಾಗಳಲ್ಲಿ ಕಚೇರಿ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.