Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
ಅಂತಾರಾಷ್ಟ್ರೀಯ ಸ್ಮಾರಕಗಳನ್ನಾಗಿ ಮಾಡಿ, ದೇಶಕ್ಕೆ ಮಾದರಿಯಾಗಿ ಗೌರವಿಸಿದ್ದು ಬಿಜೆಪಿ
Team Udayavani, Dec 25, 2024, 6:45 AM IST
ಬೆಂಗಳೂರು: ಕಾಂಗ್ರೆಸ್ ಎಂಬುದು ತಿಪ್ಪೆ ಇದ್ದಂತೆ. ಕೆದಕಿದಷ್ಟೂ ದುರ್ವಾಸನೆ ಬರುತ್ತದೆ ಎಂದಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಮತ ಬ್ಯಾಂಕ್‌ಗಾಗಿ ಬಳಸಿದ ನಕಲಿ ಗಾಂಧಿಗಳ ಕಾಂಗ್ರೆಸ್ ಇದು ಎಂದು ಜರಿದಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಮುಂದಿಟ್ಟುಕೊಂಡು ಕೆಲ ಸಂಘಟನೆಗಳು ಹೋರಾಟ ನಡೆಸುತ್ತಿವೆ. ನಿಧಾನಿಸಿ ಯೋಚಿಸಿದಾಗ ನಿಜ ತಿಳಿಯುತ್ತದೆ. ಅಮಿತ್ ಶಾ ಹೇಳಿಕೆಯಿಂದ ಕಾಂಗ್ರೆಸ್‌ನ ಮುಖವಾಡ ಕಳಚಿದೆ. ಈ ಸತ್ಯಾಂಶ ಎಲ್ಲರೂ ಅರಿಯಬೇಕು ಎಂದರು.
ಅಂಬೇಡ್ಕರರನ್ನು ಎಷ್ಟು ಅಪಹಾಸ್ಯ ಮಾಡಿದ್ದೀರಿ? ನೋವು ಕೊಟ್ಟಿರಿ? ಸಂವಿಧಾನ ರಚಿಸುವಾಗ ಬೇಕಿದ್ದ ಅಂಬೇಡ್ಕರರನ್ನು ದೂರ ಇಟ್ಟು 370ನೇ ವಿಧಿಯನ್ನು ನೀವು ಸೇರಿಸಿದಿರಿ. ಅವರು ಗೆದ್ದ ಕ್ಷೇತ್ರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿರಿ. ತೀರಿಕೊಂಡಾಗ ದೆಹಲಿಯಲ್ಲಿ ಅವರ ಅಂತ್ಯಕ್ರಿಯೆಗೂ ಜಾಗ ಕೊಡಲಿಲ್ಲ. ಇದಕ್ಕೆ ಪಶ್ಚಾತ್ತಾಪಪಡಿ. ಅವರಿಗೆ ಮಾಡಿದ ದ್ರೋಹಕ್ಕೆ ಅಷ್ಟು ಬಾರಿ ದೇವರ ಧ್ಯಾನವನ್ನಾದರೂ ಮಾಡಿದ್ದರೆ ಸ್ವರ್ಗ ಸಿಗುತ್ತಿತ್ತು. ಇಲ್ಲದಿದ್ದರೆ ನರಕಕ್ಕೆ ಹೋಗುತ್ತೀರಿ ಎನ್ನುವ ಅರ್ಥದಲ್ಲಿ ಅಮಿತ್ ಶಾ ಹೇಳಿದ್ದರು. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ದೇಶಕ್ಕೆ ಮಾದರಿಯಾಗಿ ಗೌರವಿಸಿದ್ದು ಬಿಜೆಪಿ:
ಅಂಬೇಡ್ಕರ್ ಹುಟ್ಟಿದ ಸ್ಥಳ, ಓದಿದ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್, ದೆಹಲಿಯಲ್ಲಿ ಪ್ರವಾಸವಿದ್ದ ಜಾಗ, ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ ಜಾಗ, ಅಂತ್ಯಕ್ರಿಯೆ ಆದ ಜಾಗಗಳನ್ನು ಅಂತಾರಾಷ್ಟ್ರೀಯ ಸ್ಮಾರಕಗಳನ್ನಾಗಿ ಮಾಡಿ, ದೇಶಕ್ಕೆ ಮಾದರಿಯಾಗಿ ಗೌರವಿಸಿದ್ದು ಬಿಜೆಪಿ. ಕರ್ನಾಟಕದಲ್ಲಿ ಅಂಬೇಡ್ಕರ್ ಪಾದಸ್ಪರ್ಶ ಮಾಡಿದ ಕೋಲಾರದ ಕೆಜಿಎಫ್, ಬೆಂಗಳೂರು, ಹಾಸನ, ಧಾರವಾಡ, ಚಿಕ್ಕೋಡಿ ಮತ್ತು ಬೆಳಗಾವಿ, ವಿಜಯಪುರ ಹಾಗೂ ಕಲಬುರಗಿಯ ವಾಡಿಯನ್ನು ಪುಣ್ಯಕ್ಷೇತ್ರ ಮಾಡಲು ಬೊಮ್ಮಾಯಿ 10 ಕೋಟಿ ರೂ. ಬಿಡುಗಡೆ ಮಾಡಿದ್ದರು. ಆದರೂ ಈ ಸರ್ಕಾರ ಏನೂ ಮಾಡಿಲ್ಲ. ಏಕೆ? ಎಂದು ಪ್ರಶ್ನಿಸಿದರು.
ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಮಾತ್ರ ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಿದ್ದರು. ಹೊರಗೆ ದೇವರ ಹೆಸರು ಹೇಳಿದರೆ ಏನೂ ಸಿಗಲ್ಲ, ಅಂಬೇಡ್ಕರ್ ಹೆಸರು ಬಳಸಿದರೆ ಎಲ್ಲವೂ ಸಿಗುತ್ತದೆ ಎಂಬುದು ಅವರಿಗೂ ಗೊತ್ತಿದೆ. ಇದೇ ಕಾರಣಕ್ಕೆ ಅಂಬೇಡ್ಕರ್ ಹೆಸರನ್ನು ಇವರೆಲ್ಲಾ ಫ್ಯಾಶನ್ ಮಾಡಿಕೊಂಡಿದ್ದಾರೆ ಎಂದು ದೂರಿದರು.
ಅಮಿತ್ ಶಾ ಅವರ ಮಾತಿನಿಂದ ಅವಮಾನ ಆಗಿದ್ದರೆ ಅದು ಕಾಂಗ್ರೆಸಿಗರಿಗೆ ಮಾತ್ರ. ಅವರ ಮುಖವಾಡ ಕಳಚಿದ್ದನ್ನು ಸಹಿಸಲಾರದ ಸ್ಥಿತಿಗೆ ಹೋಗಿದ್ದಾರೆ. ಇದರಲ್ಲಿ ಸಂಘಟನೆಗಳು ಕುಪಿತರಾಗುವ ಆವಶ್ಯಕತೆ ಏನಿದೆ? ಇದೆಲ್ಲವೂ ಕಾಂಗ್ರೆಸಿಗರ ಹೊಲಸುತನ ತೋರುತ್ತಿದೆ. ನಿಮಗೆ ಪಾಪಪ್ರಜ್ಞೆ ಇದ್ದರೆ ದೇಶದ ಕ್ಷಮೆ ಕೇಳಿ. ಅಂಬೇಡ್ಕರ್ ಅವರಿಗೆ ಮಾಡಿದ ಅನ್ಯಾಯಕ್ಕೆ ದೇವರ ಹೆಸರು ಹೇಳಿಯಾದರೂ ಪುಣ್ಯ ಕಟ್ಟಿಕೊಳ್ಳಿ. ಅಮಿತ್ ಶಾ ಮಾತು ಪಾಲಿಸಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.