ಭಾರತೀಯ ಉಪಖಂಡ ಸಂಪರ್ಕಕ್ಕೆ ಅಮೆರಿಕದ ಬೃಹತ್ ಯೋಜನೆ
ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಾಬಲ್ಯ ತಡೆಗೆ ಮಾರ್ಗೋಪಾಯ
Team Udayavani, May 9, 2023, 7:52 AM IST
ನವದೆಹಲಿ: ಭಾರತೀಯ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಪಶ್ಚಿಮ ಏಷ್ಯಾ ರಾಷ್ಟ್ರಗಳಿಗೆ ಸಂಪರ್ಕ ಕಲ್ಪಿಸುವ ಅಮೆರಿಕದ ಬೃಹತ್ ರೈಲು ಯೋಜನೆ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವಾಲ್ ಜೆಡ್ಡಾಗೆ ಭೇಟಿ ನೀಡಿದ್ದಾರೆ. ಭಾನುವಾರ ಈ ಬಗ್ಗೆ ಅಮೆರಿಕ, ಯುಎಇ, ಸೌದಿ ಅರೇಬಿಯಾ ಸರ್ಕಾರದ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದಾರೆ.
ರೈಲು, ಸಮುದ್ರ ಮತ್ತು ರಸ್ತೆ ಮೂಲಕ ಸಂಪರ್ಕ ಕಲ್ಪಿಸುವ ಬೃಹತ್ ಯೋಜನೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಮೂರು ಮಾರ್ಗಗಳ ಮೂಲಕ ಭಾರತೀಯ ಉಪಖಂಡವನ್ನು ಸಂಪರ್ಕಿಸುವುದು ಈ ಯೋಜನೆಯ ಮೂಲ ಆಶಯವಾಗಿದೆ. ದಕ್ಷಿಣ ಏಷ್ಯಾ ಮತ್ತು ಭಾರತೀಯ ಉಪಖಂಡದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಾಬಲ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಪ್ರಾಜೆಕ್ಟ್ ಕೈಗೆತ್ತಿಕೊಳ್ಳುವುದು ಅನಿವಾರ್ಯವಾಗಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಚೀನಾದ ಬೆಲ್ಟ್ ಆ್ಯಂಡ್ ರೋಡ್ ಯೋಜನೆ ಜಾರಿ ಮಾಡಲು ಬಿಲಿಯನ್ ಡಾಲರ್ ಮೊತ್ತ ಹೂಡಿಕೆ ಮಾಡಲು ಅದು ಸಜ್ಜಾಗಿದೆ.
ಜನವರಿಯಲ್ಲಿ ಅಮೆರಿಕದ ವಿದೇಶಾಂಗ ಸಚಿವ ಜೇಕ್ ಸುಲ್ಲಿವಾನ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊವಾಲ್ ಭೇಟಿ ಬಳಿಕ ಎರಡನೇ ಭೇಟಿ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.