Watch; ಇದು AI ಕಮಾಲ್…”ಕಾಡುವ ಸುಂದರಿ” ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರ!
ಎಐನ ಸಾಮರ್ಥ್ಯಕ್ಕೆ ನಾನು ಭಯಪಡುತ್ತಿಲ್ಲ...
Team Udayavani, Apr 25, 2023, 3:20 PM IST
ಮುಂಬೈ: ಪ್ರಸ್ತುತ ಕೃತಕ ಬುದ್ಧಿಮತ್ತೆಯು(Artificial intelligence) ನಮ್ಮ ಜೀವನದ ಅವಿಭಾಜ್ಯ ಅಂಗ ಎಂಬಂತಾಗಿದೆ. ಇತ್ತೀಚೆಗೆ ಕೃತಕ ಬುದ್ದಿಮತ್ತೆ ಉಪಯೋಗಿಸಿ ತಯಾರಿಸಲಾದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿವೆ. ಅದೇ ರೀತಿ AIಗೆ ಸಂಬಂಧಿಸಿದ ವೈರಲ್ ವಿಡಿಯೋವೊಂದನ್ನು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರ ಅವರು ಶೇರ್ ಮಾಡಿದ್ದಾರೆ.
ವಿಡಿಯೋದಲ್ಲಿ 5 ವರ್ಷದ ಬಾಲಕಿಯೊಬ್ಬಳು 95 ವರ್ಷವಾದಾಗ ಹೇಗೆ ಕಾಣಿಸುತ್ತಾಳೆ ಎಂಬುದನ್ನು ವಿವರಿಸುತ್ತದೆ. ಕೃತಕ ಬುದ್ದಿಮತ್ತೆಯ ಈ ವಿಡಿಯೋವನ್ನು ಈಗಾಗಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಎಐನ ಸಾಮರ್ಥ್ಯಕ್ಕೆ ನಾನು ಭಯಪಡುತ್ತಿಲ್ಲ…ಒಂದು ವೇಳೆ ಅದು ತುಂಬಾ ಕಾಡುವ ಸುಂದರ ಮತ್ತು ಮಾನವೀಯತೆ ಸೃಷ್ಟಿಸಲು ಸಾಧ್ಯವಾದರೆ ಎಂಬುದಾಗಿ ಕ್ಯಾಪ್ಶನ್ ಬರೆದು ಆನಂದ್ ಮಹೀಂದ್ರಾ ಅವರು ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
Received this post of a sequence of portraits generated by Artificial Intelligence showing a girl ageing from 5years to 95 years. I won’t fear the power of AI so much if it can create something so hauntingly beautiful….and Human… pic.twitter.com/k7d2qupJ52
— anand mahindra (@anandmahindra) April 24, 2023
ಆನಂದ್ ಮಹೀಂದ್ರಾ ಅವರು ಹಂಚಿಕೊಂಡಿರುವ ವಿಡಿಯೋಕ್ಕೆ ಹಲವು ಟ್ವಿಟರ್ ಬಳಕೆದಾರರು ಪ್ರತಿಕ್ರಿಯೆ ನೀಡಿದ್ದು, ಇದು ಸುಂದರ ಮತ್ತು ವಿಸ್ಮಯಕಾರಿಯಾಗಿದೆ. ವಾಸ್ತವದ ಗ್ರಹಿಕೆಯನ್ನು ಕಳೆದುಕೊಳ್ಳದಂತೆ ನೆನಪಿಸುವಂತಿದೆ ಎಂದು ತಿಳಿಸಿದ್ದಾರೆ.
ಇದು ನಿಜವಾಗಿಯೂ ಅದ್ಭುತವಾಗಿದೆ. AI ರೂಪಾಂತರಗೊಳಿಸುವ ವಿಧಾನವನ್ನು ಗ್ರಹಿಸಲು ಕಷ್ಟವಾಗುತ್ತದೆ. ಚಿತ್ರಗಳನ್ನು ರಚಿಸುವುದರಿಂದ ಹಿಡಿದು ಭಾಷಾಂತರ, ಹಾಡು ಬರೆಯುವವರೆಗೂ ಎಐ ಆವರಿಸಿಕೊಂಡಿದ್ದು, ಭವಿಷ್ಯದಲ್ಲಿ AI ಸಂಪೂರ್ಣವಾಗಿ ನಮ್ಮ ಅವಿಭಾಜ್ಯ ಅಂಗವಾಗಲಿದೆ ಎಂದು ಮತ್ತೊಬ್ಬ ಟ್ವಿಟರ್ ಬಳಕೆದಾರರು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.