ಆನಂದ್ ರಾವ್ ವೃತ್ತದ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣನ ಹೆಸರು : ಸಿಎಂ ಯಡಿಯೂರಪ್ಪ
Team Udayavani, Jan 26, 2020, 6:07 PM IST
ಬೆಂಗಳೂರು : ನಗರದ ಆನಂದ್‌ರಾವ್ ವೃತ್ತದ ಮೇಲ್ಸೇತುವೆಗೆ ಸಂಗೋಳ್ಳಿ ರಾಯಣ್ಣ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸಂಗೋಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯ ಅಂಗವಾಗಿ ಮೆಜೆಸ್ಟಿಕ್ ಸಮೀಪವಿರುವ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅವರ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ನೆರವೇರಿಸಿದ ನಂತರ ಮಾತನಾಡಿದ ಅವರು, ಅಪ್ರತಿಮ ದೇಶಭಕ್ತ ಸಂಗೋಳ್ಳಿ ರಾಯಣ್ಣ ಅವರನ್ನು ಸದಾ ಸ್ಮರಿಸುವ ದೃಷ್ಟಿಯಿಂದ ಬಿಬಿಎಂಪಿ ವ್ಯಾಪ್ತಿಯ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಆನಂದ್‌ರಾವ್ ವೃತ್ತದ ಮೇಲ್ಸೇತುವೆಗೆ ಸಂಗೋಳ್ಳಿ ರಾಯಣ್ಣ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಈಗಾಗಲೇ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಕನ್ನಡಿಗರ ಶೌರ್ಯದ ಸಂಕೇತ:
ಸಂಗೋಳ್ಳಿ ರಾಯಣ್ಣ ಅವರು ಒಂದು ಜನಾಂಗ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ಕನ್ನಡದ ಮೊದಲ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಇವರು, ಸಮಸ್ತ ಕನ್ನಡಿಗರ ಶೌರ್ಯದ ಪ್ರತೀಕವಾಗಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದು ಅಪ್ರತಿಮ ಹೋರಾಟಗಾರರಾಗಿ ಬೆಳೆದಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಬಂಟನಾಗಿ ಬ್ರಿಟಿಷ್ ಇಸ್ಟ್‌ಇಂಡಿಯಾ ಕಂಪೆನಿ ವಿರುದ್ಧ ಹೋರಾಟ ಮಾಡಿದ ದಿಟ್ಟ ವೀರ ಎಂದು ಬಣ್ಣಿಸಿದರು.
ಅಪ್ರತಿಮ ದೇಶಭಕ್ತ ಸಂಗೋಳ್ಳಿ ರಾಯಣ್ಣ ಅವರನ್ನು ಸದಾ ಸ್ಮರಿಸಿಕೊಳ್ಳಬೇಕು. ಕಿತ್ತೂರಿನ ಸಣ್ಣ ಸಂಸ್ಥಾನದಲ್ಲಿದ್ದ ರಾಯಣ್ಣ, ಬ್ರಿಟಿಷರ ವಿರುದ್ಧ ಹೋರಾಡಿದ ಚರಿತ್ರೆ ರೋಚಕವಾಗಿದೆ. ಸಂಗೋಳ್ಳಿ ರಾಯಣ್ಣನವರ ಜೀವನ ನಮಗೆಲ್ಲ ಪ್ರೇರಣೆಯಾಗಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾಗಿದ್ದಾರೆ. ಅವರ ಧ್ಯೇಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಸಂಗೋಳ್ಳಿ ರಾಯಣ್ಣ ಅವರಿಗೆ ನಾವು ಸಲ್ಲಿಸುವ ನಮನ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.