ಅಮೆರಿಕದಲ್ಲಿ ಮೋದಿಗೆ ಆಲೂರಿನ ಆನಂದ ಪೂಜಾರಿ ಆತಿಥ್ಯ! ಇಡ್ಲಿ, ಸಾಂಬಾರ್ ಮೆಚ್ಚಿದ ಪ್ರಧಾನಿ
Team Udayavani, Sep 26, 2021, 7:50 AM IST
ಕುಂದಾಪುರ : ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಾಷಿಂಗ್ಟನ್‌ನಲ್ಲಿದ್ದ ಮೂರು ದಿನಗಳ ಕಾಲ ಊಟೋಪಚಾರ ಸಹಿತ ಆತಿಥ್ಯದ ನೇತೃತ್ವ ವಹಿಸಿದವರು ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೋಟೆಲ್ ಉದ್ಯಮಿ ಆನಂದ ಪೂಜಾರಿ ಅವರು.
ವಾಷಿಂಗ್ಟನ್ ಡಿಸಿಯಲ್ಲಿ 35 ವರ್ಷಗಳಿಂದ ನೆಲೆಸಿರುವ ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ದಂಪತಿ 25 ವರ್ಷಗಳಿಂದ ವುಡ್‌ಲ್ಯಾಂಡ್ಸ್ ಹೊಟೇಲನ್ನು ನಡೆಸುತ್ತಿದ್ದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಅವಕಾಶ ಪಡೆದಿದ್ದಾರೆ.
ಅವರು ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯ ನಿವಾಸಿ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರ. ಅಮೆರಿಕದಲ್ಲಿ ನೆಲೆಸಿದ್ದರೂ ಊರಿಗೆ ಆಗಾಗ ಬರುತ್ತಿದ್ದಾರೆ. ಕೋವಿಡ್, ಲಾಕ್‌ಡೌನ್ ಕಾರಣದಿಂದ ಇತ್ತೀಚೆಗೆ ಬರಲಾಗಿಲ್ಲ. ಮೂರು ವರ್ಷದ ಹಿಂದೆ ಬಂದು ಹೋಗಿದ್ದರು.
ಇವರದೇ ಆತಿಥ್ಯ: ಭಾರತದಿಂದ ಅಮೆರಿಕಕ್ಕೆ ಕೇಂದ್ರ ಸಚಿವರ ಸಹಿತ ಗಣ್ಯರು ಭೇಟಿ ನೀಡಿದರೆ, ಅವರಿಗೆಲ್ಲ ಇವರದೇ ಆತಿಥ್ಯ. ಪ್ರಧಾನಿಯವರಿಗೆ ಇದು ಆನಂದ ಪೂಜಾರಿ ನೇತೃತ್ವದ ತಂಡದ ಮೂರನೇ ಆತಿಥ್ಯವಾಗಿದೆ. ಮೋದಿ ಅವರನ್ನು ಆನಂದ ಪೂಜಾರಿ ದಂಪತಿ ಇದು ನಾಲ್ಕನೇ ಬಾರಿಗೆ ಭೇಟಿಯಾಗುತ್ತಿರುವುದು.
ಇಡ್ಲಿ, ಸಾಂಬಾರ್ ಮೆಚ್ಚಿದ ಮೋದಿ
ಪ್ರಧಾನಿ ಮೋದಿಯವರು ಅಮೆರಿಕದಲ್ಲಿದ್ದರೂ ಭಾರತೀಯ ಶೈಲಿಯ ಊಟಕ್ಕೆ ಆದ್ಯತೆ ನೀಡುತ್ತಿದ್ದು, ಅದರಲ್ಲೂ ದಕ್ಷಿಣ ಭಾರತೀಯ ಖಾದ್ಯಗಳಿಗೆ ಮಾರುಹೋಗಿದ್ದಾರೆ. ಬೆಳಗ್ಗೆ ಇಡ್ಲಿ, ವಡೆ, ಸಾಂಬಾರ್, ಉಪ್ಪಿಟ್ಟು, ಊಟದಲ್ಲಿ ಎರಡು ಬಗೆಯ ಸಿಹಿ ಇರಲೇಬೇಕು. ಇದರೊಂದಿಗೆ ತಾಜಾ ಹಣ್ಣುಗಳನ್ನು ತಿನ್ನುತ್ತಾರೆ. ಇದಲ್ಲದೆ ಅಮೆರಿಕದ ಪ್ಯೂರ್‌ವೆಜ್ ಖಾದ್ಯಗಳನ್ನು ಇಷ್ಟ ಪಡುತ್ತಾರೆ. ದಿನಕ್ಕೆ 4 ಬಾರಿ ಮಸಾಲೆ ಚಹಾ ಸೇವಿಸುತ್ತಾರೆ ಎನ್ನುತ್ತಾರೆ ಆನಂದ ಅವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.