![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 27, 2019, 11:58 AM IST
ಬೆಂಗಳೂರು: ಯೇಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಶಿಲಾನ್ಯಾಸ ಮಾಡಿದ್ದು, ಈಗ ವಾಕ್ಸಮರಕ್ಕೆ ಕಾರಣವಾಗಿದೆ. ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಯೇಸು ಪ್ರತಿಮೆ ಬಗ್ಗೆ ಡಿಕೆಶಿಗೆ ಟೀಕೆ ಮಾಡಿದ್ದರೆ, ಡಿ ಕೆ ಶಿವಕುಮಾರ್ ಕೂಡ ಪ್ರತ್ಯುತ್ತರ ನೀಡಿದ್ದಾರೆ.
ಗುರುವಾರ ಅನಂತ್ ಕುಮಾರ್ ಹೆಗಡೆ ಟ್ವೀಟ್ ಮಾಡಿ ‘’ಇಲ್ಲೊಬ್ಬ #TiharReturned ಮಹನೀಯರೊಬ್ಬರು, ಯಾವುದೋ ಹುದ್ದೆಯ ಆಸೆಯೊಂದಿಗೆ, ಅವರ ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಅತಿ ದೊಡ್ಡ ಯೇಸುವಿನ ಪ್ರತಿಮೆ ಸ್ಥಾಪಿಸಿ ತಮ್ಮ ಪೌರುಷವನ್ನು ಪ್ರದರ್ಶಿಸಲು ಸಜ್ಜಾಗಿದ್ದಾರೆ” ಎಂದಿದ್ದರು.
ಟ್ವೀಟ್ ಟೀಕೆಯನ್ನು ಮುಂದುವರಿಸಿ, “ಓಲೈಕೆ ರಾಜಕೀಯಕ್ಕೆ ಪೈಪೋಟಿ ನೀಡಲು ಕಾಂಗ್ರೆಸ್ ನಲ್ಲಿ ಇನ್ನು ಹೆಚ್ಚಿನ ಗುಲಾಮರು ಅಖಾಡಕ್ಕೆ ಇಳಿದರು ಅಚ್ಚರಿಯಿಲ್ಲ ಎಂದು ವ್ಯಂಗ್ಯವಾಡಿದ್ದರು.
ಇಲ್ಲೊಬ್ಬ #TiharReturned ಮಹನೀಯರೊಬ್ಬರು, ಯಾವುದೋ ಹುದ್ದೆಯ ಆಸೆಯೊಂದಿಗೆ, ಅವರ ಇಟಲಿಯಮ್ಮನನ್ನು ಪ್ರಸನ್ನಗೊಳಿಸಲು, ಅತಿ ದೊಡ್ಡ ಯೇಸುವಿನ ಪ್ರತಿಮೆ ಸ್ಥಾಪಿಸಿ ತಮ್ಮ ಪೌರುಷವನ್ನು ಪ್ರದರ್ಶಿಸಲು ಸಜ್ಜಾಗಿದ್ದಾರೆ.
ಓಲೈಕೆ ರಾಜಕೀಯಕ್ಕೆ ಪೈಪೋಟಿ ನೀಡಲು @INCIndia ದಲ್ಲಿ ಇನ್ನು ಹೆಚ್ಚಿನ ಗುಲಾಮರು ಅಖಾಡಕ್ಕೆ ಇಳಿದರು ಅಚ್ಚರಿಯಿಲ್ಲ.
— Anantkumar Hegde (@AnantkumarH) December 26, 2019
ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರೂ ಟ್ವೀಟ್ ಮಾಡಿದ್ದು, ನಮ್ಮ ಪ್ರಜಾತಂತ್ರ ವ್ಯವಸ್ಥೆಯ ಭದ್ರಬುನಾದಿಯಾದ ಸಮಾನತೆ ಮತ್ತು ಸರ್ವಧರ್ಮ ಸಹಿಷ್ಣುತೆಯಲ್ಲಿ ನಂಬಿಕೆ ಇಟ್ಟಿರುವವನು ನಾನು. ನನ್ನನ್ನು ಏಳು ಬಾರಿ ಗೆಲ್ಲಿಸಿರುವ ಕನಕಪುರ ಕ್ಷೇತ್ರದಲ್ಲಿ ಎಲ್ಲ ಜಾತಿ, ಧರ್ಮದ ಜನರೂ ಇದ್ದಾರೆ. ಅವರ ಭಾವನೆಗಳನ್ನು ಗೌರವಿಸುವುದು ನನ್ನ ಧರ್ಮ.
ಯೇಸು ಪ್ರತಿಮೆಗೆ ಜಾಗ ಕೊಟ್ಟಿರುವುದಷ್ಟೇ ಅಲ್ಲ, ನಾಣು ಸಚಿವನಾಗಿದ್ದಾಗ ಕೆಂಪೇಗೌಡ ಪ್ರಾಧಿಕಾರ ರಚನೆಯಾಗಿದೆ. ಮೆಯೋಹಾಲ್ ನಲ್ಲಿ ಕಚೇರಿ ಸ್ಥಾಪನೆಯಾಗಿ, ಬೆಂಗಳೂರಿನಲ್ಲಿ ಐದು ಎಕರೆ ಜಮೀನು ಮಂಜೂರಾಗಿದೆ. ಕೆಂಪೇಗೌಡ ಜಯಂತಿ ಆಚರಣೆ, ತನ್ನಿಮಿತ್ತ ಸರಕಾರಿ ರಜೆ ಘೋಷಣೆ ಮಾಡಿಸಿದ್ದೇನೆ. ಆದಿಚುಂಚನಗಿರಿ ಶ್ರೀ ದಿವಂಗತ ಬಾಲಗಂಗಾಧರನಾಥ ಶ್ರೀಗಳ ಹುಟದಟೂರು ರಾಮನಗರದ ಬಿಡದಿಯ ಬಾಣಂದೂರು ಹಾಗೂ ಸಿದ್ದಗಂಗಾ ಶ್ರೀಗಳಾದ ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ರಾಮನಗರದ ಮಾಗಡಿ ಗ್ರಾಮದ ಪ್ರಗತಿಗೆ ತಲಾ 25 ಕೋಟಿ ರೂ. ನಮ್ಮ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಂಜೂರಾಗಿದೆ.
ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಡಾ. ಬಿ.ಆರ್ ಅಂಬೇಡ್ಕರ್ ಸಾಹೇಬರ ಸಂವಿಧಾನ ಸುಡಲು ಮುಂದಾದ ಅಲ್ಪರಿಂದ ಪಾಠ ಹೇಳಿಸಿಕೊಳ್ಳುವ ಜರೂರತ್ತು ನನಗಿಲ್ಲ ಎಂದು ಡಿ ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಕನಕಪುರದ ಕಪಾಲಿ ಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಯೇಸು ಪ್ರತಿಮೆಗೆ ಶಿಲಾನ್ಯಾಸ ಮಾಡಲಾಗಿದೆ.
ನಮ್ಮ ಪ್ರಜಾತಂತ್ರ ವ್ಯವಸ್ಥೆಯ ಭದ್ರಬುನಾದಿಯಾದ ಸಮಾನತೆ ಮತ್ತು ಸರ್ವಧರ್ಮ ಸಹಿಷ್ಣುತೆಯಲ್ಲಿ ನಂಬಿಕೆ ಇಟ್ಟಿರುವವನು ನಾನು.
ನನ್ನ ಕನಕಪುರ ಕ್ಷೇತ್ರದಲ್ಲಿ ಎಲ್ಲ ಜಾತಿ ಧರ್ಮದ ಜನರೂ ಇದ್ದಾರೆ. ಅವರ ಭಾವನೆ ಗೌರವಿಸುವುದು ನನ್ನ ಧರ್ಮ.
ಡಾ. ಅಂಬೇಡ್ಕರ್ ಸಾಹೇಬರ ಸಂವಿಧಾನ ಸುಡಲು ಮುಂದಾದ ಅಲ್ಪರಿಂದ ಪಾಠ ಹೇಳಿಸಿಕೊಳ್ಳುವ ಜರೂರತ್ತು ನನಗಿಲ್ಲ pic.twitter.com/5YMCwY5aEN
— DK Shivakumar (@DKShivakumar) December 27, 2019
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.