Andhra: ಫಾರ್ಮಾ ಕಂಪನಿಯಲ್ಲಿ ಸ್ಫೋಟ; ಮೃತರ ಸಂಖ್ಯೆ 18ಕ್ಕೇರಿಕೆ, 40 ಮಂದಿಗೆ ಗಾಯ
ಕಾರ್ಮಿಕರು ಊಟಕ್ಕೆ ತೆರಳಿದ್ದರಿಂದ ಹಲವು ಮಂದಿ ಪಾರು, ಘಟನಾ ಸ್ಥಳಕ್ಕೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ನಾಳೆ ಭೇಟಿ ಸಾಧ್ಯತೆ
Team Udayavani, Aug 21, 2024, 6:44 PM IST
ಅಮರಾವತಿ : ಆಂಧ್ರಪ್ರದೇಶದಲ್ಲಿನ ಔಷಧ (ಫಾರ್ಮಾ) ಕಂಪನಿಯೊಂದರಲ್ಲಿ (Pharma Company) ಸಂಭವಿಸಿದ ಭಾರೀ ಸ್ಫೋಟಕ್ಕೆ ಮೃತರ ಸಂಖ್ಯೆಯು 18ಕ್ಕೆ ಏರಿಕೆಯಾಗಿದೆ. 40ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಕಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯ (Achutapuram Special Economic Zone) ದಲ್ಲಿರುವ ಕಂಪನಿಯಲ್ಲಿ ಎಸ್ಸೆಂಟಿಯಾ ಫಾರ್ಮಾ ಕಂಪನಿಯ ಘಟಕದಲ್ಲಿ ಸ್ಫೋಟ ಸಂಭವಿಸಿತ್ತು. ಗಾಯಾಳುಗಳ ಚಿಕಿತ್ಸೆಗಾಗಿ ಎನ್‌ಟಿಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಧ್ಯಾಹ್ನ ಊಟದ ವೇಳೆ ಈ ಅವಘಡ ಸಂಭವಿಸಿದ್ದು, ಸ್ಫೋಟಕ್ಕೆ ಸೂಕ್ತ ಕಾರಣ ಏನೆಂಬುದು ತಿಳಿದು ಬಂದಿಲ್ಲ.
ಸ್ಥಳದಿಂದ ಬಂದ ದೃಶ್ಯಗಳು ರಿಯಾಕ್ಟರ್‌ನಿಂದ ಹೊಗೆ ಹೊರ ಬರುತ್ತಿತ್ತು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆವರಿಸಿತು. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ದೌಡಾಯಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ನಾಳೆ ಆಂಧ್ರ ಸಿಎಂ ಭೇಟಿ:
ಔಷಧ ಕಂಪನಿಯ ರಿಯಾಕ್ಟರ್ ಸ್ಫೋಟಗೊಂಡ ಸ್ಥಳಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನಾಳೆ ಭೇಟಿ ನೀಡುವ ಸಾಧ್ಯತೆ ಇದೆ. ಅವರು ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳ ಸಂಪರ್ಕಿಸಿ ಮಾತನಾಡಿದ್ದಾರೆ ಎನ್ನಲಾಗಿದೆ.
ಈ ಘಟನೆಯ ಬಗ್ಗೆ ಅನಕಪಲ್ಲಿ ಎಸ್‌ಪಿ ದೀಪಿಕಾ ಪಾಟೀಲ್ ಪ್ರತಿಕ್ರಿಯಿಸಿ ಸ್ಫೋಟದ ತೀವ್ರತೆಗೆ 15 ಮಂದಿ ಮೃತಪಟ್ಟಿದ್ದು, ಘಟನಾ ಸ್ಥಳದಲ್ಲಿ ಬೆಂಕಿ, ಹೊಗೆ ನಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಫೋಟ ಸಂಭವಿಸಿದ್ದು ರಿಯಾಕ್ಟರ್ ಇರುವ ಪ್ರದೇಶದಲ್ಲಿ ಆಗಿದ್ದರೂ ರಿಯಾಕ್ಟರ್ ಸ್ಫೋಟಗೊಂಡಿಲ್ಲ. ಗಾಯಗೊಂಡವರ ಎನ್‌ಟಿಆರ್ ಆಸ್ಪತ್ರೆ ಹಾಗೂ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ತುರ್ತು ಸೇವೆ, ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಸುಮಾರು 10 ಮಂದಿಯ ಸಂಭವಿಸಬಹುದಾದ ಅಪಾಯದಿಂದ ರಕ್ಷಿಸಲಾಗಿದೆ ಎಂದು ಹೇಳಿದರು.
” 40 ಎಕರೆ ವಿಸ್ತೀರ್ಣದ ಫಾರ್ಮಾ ಕಂಪನಿಯಲ್ಲಿ 381 ಮಂದಿ ಕಾರ್ಮಿಕರು ಎರಡು ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಊಟದ ವೇಳೆ ಸ್ಪೋಟಗೊಂಡಿದ್ದರಿಂದ ಹಲವು ಕಾರ್ಮಿಕರು ಅಪಾಯದಿಂದ ಪಾರಾದರು ಎಂದು ಅನಕಪಲ್ಲಿ ಜಿಲ್ಲಾಧಿಕಾರಿ ವಿಜಯ್ ಕೃಷ್ಣನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.